ವೋರ್ಲಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಆದಿತ್ಯ ಠಾಕ್ರೆ ಘೋಷಣೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ

ಹೊಸದಿಲ್ಲಿ, ಸೆ.30: ಮುಂದಿನ ಮಹಾರಾಷ್ಟ್ರ ವಿಧಾನಸಭೆಯಲ್ಲಿ ತಾನು ವೋರ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದಾಗಿ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಸೋಮವಾರ ಘೋಷಿಸಿದ್ದಾರೆ.
ಲೋಕಸಭಾ ಚುನಾವಣೆ ಮುಗಿದ ಬಳಿಕ ಆದಿತ್ಯ ಠಾಕ್ರೆ ಜನ್ ಆಶೀರ್ವಾದ್ ಯಾತ್ರೆ ಕೈಗೊಂಡು ರಾಜ್ಯಾದ್ಯಾಂತ ಪ್ರವಾಸ ಕೈಗೊಂಡಿದ್ದರು. ಆದಿತ್ಯ ಸಂವಾದ್ ಮೂಲಕ ಅವರು ಯುವಜನರನ್ನೂ ತಲುಪಿದ್ದರು. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿ ಆದಿತ್ಯರನ್ನು ಈ ಯಾತ್ರೆಯ ಮೂಲಕ ಶಿವಸೇನೆ ಬಿಂಬಿಸುತ್ತಿದೆ ಎನ್ನುವ ಮಾತುಗಳು ಕೇಳಿಬಂದಿತ್ತು.
ಸೋಮವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ತಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಗ್ಗೆ ಘೋಷಿಸಿದರು.
“ಮಹಾರಾಷ್ಟ್ರದಾದ್ಯಂತ ಶಿವಸೇನೆ ಕೆಲಸ ಮಾಡಿದೆ. ಮಹಾರಾಷ್ಟ್ರಕ್ಕೆ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವುದು ಹೇಗೆ ಎಂದು ನಾನು ಆಲೋಚಿಸುತ್ತಿದ್ದೆ. ಇದೀಗ ನಿಮ್ಮ ಅನುಮತಿಯೊಂದಿಗೆ ನಾನು ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ” ಎಂದವರು ಹೇಳಿದರು.
Next Story





