ಅ.2: ಜಿ.ಎಸ್.ಜಯದೇವಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ
ಬೆಂಗಳೂರು, ಸೆ.30: ರಾಷ್ಟ್ರಪಿತ ಮಹಾತ್ಮ ಗಾಂಧಿ ಆಶಯಗಳನ್ನು ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಮಾಡುವ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಯನ್ನು ಪ್ರೊ.ಜಿ.ಎಸ್.ಜಯದೇವ ಅವರಿಗೆ ನೀಡಲಾಗುತ್ತಿದೆ.
ಐದು ಲಕ್ಷ ರೂ ನಗದು ಒಳಗೊಂಡ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅ.2 ರಂದು ಸಂಜೆ 5 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಶಾಸಕ ಉದಯ ಗರುಡಾಚಾರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ. ಟಿ.ರವಿ, ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಭೀಮನಗೌಡ ಸಂಗನಗೌಡ ಪಾಟೀಲ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story