ಅ.3ರಂದು ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾ ಪ್ರವಾಸ

ಬೆಳಗಾವಿ, ಸೆ.30: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಕ್ಟೋಬರ್ 3ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.3ರಂದು ಸಂಜೆ 4 ಗಂಟೆಗೆ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೈಗೊಳ್ಳಲಿದ್ದಾರೆ. ನಂತರ ಸರಕಾರಿ ವಸತಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅ.4ರಂದು ಬೆಳಗ್ಗೆ 9.30ಕ್ಕೆ ಸಾರ್ವಜನಿಕರ ಭೇಟಿ ಮತ್ತು ಕುಂದು ಕೊರತೆಗಳನ್ನು ಆಲಿಸುವರು. ನಂತರ 10.30ಕ್ಕೆ ಅಥಣಿ ತಾಲೂಕು ಮತ್ತು ಇತರೆ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಹಾಗೂ ಪರಿಹಾರ ಕೇಂದ್ರಗಳ ಪರಿಶೀಲನೆ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಅಥಣಿಯಿಂದ ರಸ್ತೆ ಮಾರ್ಗವಾಗಿ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮತ್ತು ಪರಿಶೀಲನೆ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





