ಪಡುಬಿದ್ರಿ: ಅಂಚೆ ಪಾಲಕಿ ಆತ್ಮಹತ್ಯೆ
ಪಡುಬಿದ್ರಿ: ಮಕ್ಕಳಾಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಂಚೆ ಪಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಇಲ್ಲಿನ ಅವರಾಲು ಮಟ್ಟುವಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ವಿಜಯಲಕ್ಷ್ಮೀ (26) ಎಂದು ಗುರುತಿಸಲಾಗಿದೆ.
ಅವರಾಲು ಮಟ್ಟುವಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈಕೆ ಮದುವೆಯಾಗಿ ಐದು ವರ್ಷವಾದರೂ ಮಕ್ಕಳಿಲ್ಲದೆ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದಳು. ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಸೋಮವಾರ ಮಧ್ಯಾಹ್ನದ ಬಳಿಕ ವಾಸವಾಗಿರುವ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.
Next Story





