"ಬಿಜೆಪಿಯಲ್ಲಿ ಯಡಿಯೂರಪ್ಪರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ"
![ಬಿಜೆಪಿಯಲ್ಲಿ ಯಡಿಯೂರಪ್ಪರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಬಿಜೆಪಿಯಲ್ಲಿ ಯಡಿಯೂರಪ್ಪರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ](https://www.varthabharati.in/sites/default/files/images/articles/2019/10/1/212831-1569948892.jpg)
ಬೆಂಗಳೂರು, ಅ.1: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಬಿಜೆಪಿಯಲ್ಲಿ ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ವೀರಶೈವ ಲಿಂಗಾಯತ ಯುವ ಬ್ರಿಗೇಡ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಿಗೇಡ್ ರಾಜ್ಯಾಧ್ಯಕ್ಷ ಬಿ.ಆರ್.ಮಹೇಶ್, ಯಡಿಯೂರಪ್ಪ ಅವರ ವಿರುದ್ಧ ಕೆಲ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಅಲ್ಲದೆ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು ಏಕಮುಖವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಬೆಂಗಳೂರು ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಮುಖ್ಯಮಂತ್ರಿಗಳನ್ನು ಕಡೆಗಣಿಸಿದ್ದು ಸರಿಯಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ ಹೆಚ್ಚಿದೆ. ಅವರ ಕಾರ್ಯವೈಖರಿಯಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಪಕ್ಷ ಸಂಘಟಿಸಿ ರಾಜ್ಯದಲ್ಲಿ ಬಿಜೆಪಿಯನ್ನು ನೆಲೆಯೂರುವಂತೆ ಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಯಾವುದೇ ರೀತಿಯ ಒತ್ತಡ ಹಾಕಬಾರದು. ಅವರ ನಿರ್ಣಯದಂತೆ ಎಲ್ಲರೂ ಸಾಗಬೇಕು ಎಂದರು.
Next Story