Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ: ಗಾಂಧಿ ಜಯಂತಿ ಪ್ರಯುಕ್ತ...

ಮಂಗಳೂರು ವಿವಿ: ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛ ಭಾರತ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ2 Oct 2019 7:59 PM IST
share
ಮಂಗಳೂರು ವಿವಿ: ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛ ಭಾರತ ಕಾರ್ಯಕ್ರಮ

ಕೊಣಾಜೆ:  ಸ್ವಚ್ಚತಾ ಅಭಿಯಾನದಂತಹ  ಕಾರ್ಯಕ್ರಮಗಳು ಊರಿನ ಪ್ರತಿಯೊಬ್ವರಿಗೂ ಪ್ರೇರಣೆಯಾಗಬೇಕು.ಯಾವುದೇ ದೇಶ ಅಭಿವೃದ್ದಿಯಾಗಬೇಕಾದರೆ ಸ್ವಚ್ಚತೆಯ ವಿಷಯದಲ್ಲಿ ನಾವು ಪ್ರಥಮವಾಗಿ ಜಾಗೃತರಾಗಬೇಕಿದೆ. ಕಾನೂನಿನ ಮೂಲಕ   ಸ್ವಚ್ಚತೆ ಕಾಪಾಡಲು ಸಾಧ್ಯವಿಲ್ಲ. ಮಹಾತ್ಮ ಗಾಂಧೀಜಿಯವರ ಕನಸಿನಂತೆ ನಮ್ಮ ಮನಸ್ಸನ್ನು ಸ್ವಚ್ಚಗೊಳಿಸುವುದರೊಂದಿಗೆ ಸಮಾಜದ ಸ್ವಚ್ಚತೆಗಾಗಿ ಪಣ ತೊಡಬೇಕು ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯ, ಮಾತಾ ಅಮೃತಾನಂದವಯಿ ಮಠ, ಎಂಆರ್‌ಪಿಎಲ್, ಕೊಣಾಜೆ ಗ್ರಾಮ ಪಂ., ಕೆಎಸ್‌ಆರ್‌ಪಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಮಹಾತ್ಮಾ ಗಾಂಧಿಯವರ 150ನೇ ಜನ್ಮದಿನದ ಪ್ರಯುಕ್ತ ಬುಧವಾರ ನಡೆದ ‘ಸ್ವಚ್ಛ ಭಾರತ್ ಕಾರ್ಯಕ್ರಮ’ದ ಕೊಣಾಜೆ ವಿವಿಯ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಚ್ಚತಾ ಅಭಿಯಾನದಂತಹ ಕಾರ್ಯಕ್ರಮ ದಿಂದ ನಮ್ಮ ಮನಸ್ಸಿನ ಪರಿವರ್ತನೆ ಯೊಂದಿಗೆ ನಮ್ಮ ಸಮಾಜದ ಪರಿವರ್ತನೆಯೂ ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮಗಳು‌ ನಿರಂತರವಾಗಿರಬೇಕು. ಸ್ವಚ್ಚತೆ ಅಭಿಯಾನದಂತಹ ಕಾರ್ಯಕ್ರಮಗಳು ವಿವಿಧ ಸಂಘ ಸಂಸ್ಥೆಗಳ ಮೂಲಕ ಜಂಟಿಯಾಗಿ ನಡೆದರೆ ಅದರ ಪ್ರಯೋಜನ ಹೆಚ್ಚು ಎಂದು ಹೇಳಿದರು.

ಮಾತಾ ಅಮೃತಾನಂದಮಯಿ ಮಠದ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ  ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಯು.ಟಿ.ಖಾದರ್ ಮಾತನಾಡಿ, ಸ್ವಚ್ಚತಾ ಅಭಿಯಾನದಂತಹ  ಕಾರ್ಯಕ್ರಮಗಳು ಊರಿನ ಪ್ರತಿಯೊಬ್ವರಿಗೂ ಪ್ರೇರಣೆಯಾಗಿದೆ. ಈ ಪುತ್ತೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ವಸ್ತಿಕ್ ಪದ್ಮ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ನಾವು ಪರಿಸರ ಸ್ವಚ್ಚತೆಗಾಗಿ ಪರಿಸರ ಪೊಲೀಸ್ ಆಗಿ ಕಾರ್ಯ ನಿರ್ವಹಿಸಬೇಕಿದೆ. ನಿಜವಾಗಿಯೂ ಪ್ಲಾಸ್ಟಿಕ್ ನದ್ದು ಸಮಸ್ಯೆಯಲ್ಲ. ಸಮಸ್ಯೆ ಅದನ್ಬು ಬಳಸುವ ಮನುಷ್ಯರದ್ದು. ಪ್ರಮುಖವಾಗಿ ಕಣ್ಣಿಗೆ ಕಾಣುವ ಪ್ಲಾಸ್ಟಿಕ್ ಗಿಂತ ಕಣ್ಣಿಗೆ ಕಾಣದ ಮೈಕ್ರೋ ಪ್ಲಾಸ್ಟಿಕ್ ಹೆಚ್ಚು  ಅಪಾಯಕಾರಿಯಾಗಿದ್ದು ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ,ಪ್ಲಾಸ್ಟಿಕ್ ಪುನರ್ ಬಳಕೆ ಬಗ್ಗೆ ಹೆಚ್ಚೆಚ್ಚು ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂ.ಆರ್.ಪಿ.ಎಲ್ ನ ಗ್ರೂಪ್ ಜನರಲ್ ಸೆಕ್ರಟರಿ ಬಿ.ಎಚ್.ಎಸ್. ಪ್ರಸಾದ್, ಮಂಗಳೂರು ವಿವಿ ಕುಲಸಚಿವ ಪ್ರೊ. ಎ.ಎಂ.ಖಾನ್ ಅಮಲ ಭಾರತ ಕಾರ್ಯಕ್ರಮದ ಅಧ್ಯಕ್ಷ ಡಾ.ಜೀವರಾಜ್ ಸೊರಕೆ, ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಎನ್ ಎಸ್ ಎಸ್ ಸಂಯೋಜಕ ಗೋವಿಂದ ರಾಜ್, ಎಂಆರ್ ಪಿಎಲ್ ವ್ಯವಸ್ಥಾಪಕಿ ವೀಣಾ ಶೆಟ್ಟಿ, ಸ್ವಚ್ಚತಾ ಆಂದೋಲನದ ಕಾರ್ಯದರ್ಶಿ ಸುರೇಶ್ ಅಮೀನ್, ಕೆಎಸ್‌ಆರ್‌ಪಿ ಕಮಾಂಡೆಂಟ್ ಜನಾರ್ದನ ಆರ್, ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಝರ್ ಷಾ ಪಟ್ಟೋರಿ, ಕೊಣಾಜೆ ಠಾಣಾ ಇನ್ ಸ್ಪೆಕ್ಟರ್  ರವಿನಾಯಕ್, ಸುಬ್ರಾಯ ಭಟ್ ಮುಖ್ಯ ಅತಿಥಿಗಳಾಗಿದ್ದರು. ಡಾ.ವಸಂತ ಕುಮಾರ್ ಪೆರ್ಲ ಸ್ವಾಗತಿಸಿ, ಡಾ.ಗೋವಿಂದರಾಜು ವಂದಿಸಿದರು.

ಕಾರ್ಯಕ್ರಮದ ಪ್ರಯುಕ್ತ ಕೊಣಾಜೆ, ಪಜೀರು, ಬೆಳ್ಮ ಗ್ರಾಮ ವ್ಯಾಪ್ತಿಯಲ್ಲಿ ಪರಿಸರವನ್ನು ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಸೇರಿಕೊಂಡು ಸ್ವಚ್ಛಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X