ಗಾಂಧಿ ಜಯಂತಿ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

ಉಡುಪಿ, ಅ.2: ಗಾಂಧೀ ಜಯಂತಿ ಪ್ರಯುಕ್ತ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಉಡುಪಿ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಸಹಯೋಗದೊಂದಿಗೆ ಉಡುಪಿಯ ಬಾಲಭವನದಲ್ಲಿ ಬುಧವಾರ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೀಕ್ಷಕಿ ಚಂದ್ರಿಕಾ, ತೀರ್ಪುಗಾರರಾದ ಮಂಜುನಾಥ್, ರಾಜೇಂದ್ರ, ರೇಖಾ ಮರಾಠೆ, ಶೋಭಾ ಉಪಸ್ಥಿತರಿದ್ದರು.
ಮಕ್ಕಳಿಗಾಗಿ ಮಹಾತ್ಮ ಗಾಂಧಿ ಕುರಿತು ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಗಳನ್ನು ಆಯೋಜಿಸಲಾಗಿತ್ತು.

Next Story





