ಹಳೆಕೋಟೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಪರಿಸರ ಸ್ವಚ್ಛತೆ

ಮಂಗಳೂರು, ಅ.2: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಟುವ ಸೈಯದ್ ಮದನಿ ಹಿ.ಪ್ರಾ.ಶಾಲೆ ಮತ್ತು ಸೈಯದ್ ಮದನಿ ಪ್ರೌಢ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಉತ್ಸವವನ್ನು ವಿಜೃಭಣೆಯಿಂದ ಆಚರಿಸಲಾಯಿತು.
ಶಾಲಾಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಕಿಯರಾದ ಶ್ಯಾಮಿಲಿ, ಸಪ್ನಾ, ಜಯಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ನೇತೃತ್ವದಲ್ಲಿ ಪರಿಸರ ಶುಚಿತ್ವ ನಡೆಸಲಾಯಿತು.
Next Story





