ಬೆಳ್ತಂಗಡಿಯ ಯುವಕ ನಾಪತ್ತೆ

ಮಂಗಳೂರು, ಅ.2: ನಗರದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿಯೋರ್ವ ಮಂಗಳವಾರ ನಾಪತ್ತೆಯಾಗಿದ್ದಾರೆ.
ಬೆಳ್ತಂಗಡಿ ನಿವಾಸಿ ಸುಬ್ಬು (34) ನಾಪತ್ತೆಯಾದ ಯುವಕ.
ಸೆ.30ರಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಯುವಕನು, ಹೆಚ್ಚಿನ ಚಿಕಿತ್ಸೆಗೆಂದು ಆ ದಿನವೇ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಅ.1ರಂದು ಬೆಳಗ್ಗೆ ಆಸ್ಪತ್ರೆಯ ವಾರ್ಡ್‌ನಿಂದ ಯುವಕ ನಾಪತ್ತೆಯಾಗಿದ್ದಾನೆ. ನಗರದ ಪ್ರಮುಖ ಸ್ಥಳಗಳಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರೂ ಯಾವುದೇ ಸುಳಿವು ಲಭಿಸಿಲ್ಲ ಎಂದು ಯುವಕನ ಪತ್ನಿ ದೂರು ನೀಡಿದ್ದಾರೆ.
ಚಹರೆ: 5.4 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಕೆಂಪು ಟೀಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು.
ನಾಪತ್ತೆಯಾದ ವ್ಯಕ್ತಿಯ ಸುಳಿವು ದೊರೆಯಲ್ಲಿ ಮಂಗಳೂರು ನಗರ ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆ (0824-2220518) ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





