ಅ.4ರಂದು ಹಿರಿಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಅ.3: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಅಜ್ಜರಕಾಡು ಉಡುಪಿ (ಎನ್.ಸಿ.ಡಿ ಕ್ಲಿನಿಕ್, ಎನ್‌ಟಿಸಿಪಿ ವಿಬಾಗ), ಜಿಲ್ಲಾ ಸರ್ವೇಕ್ಷಣಾ ಘಟಕ, ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗ ಮತ್ತು ಹಿರಿಯ ನಾಗರಿಕರ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅ.4ರಂದು ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 1 ಗಂಟೆವರೆಗೆ ಜಿಲ್ಲಾ ಆಸ್ಪತ್ರೆಯ ಹಿರಿಯ ನಾಗರಿಕರ ವಾರ್ಡ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದ ಉದ್ಘಾಟನಾ ಕಾರ್ಯಕ್ರಮ 10:30ಕ್ಕೆ ನಡೆಯಲಿದ್ದು, ಸಾರ್ವಜನಿಕ ರು ಮತ್ತು ಹಿರಿಯ ನಾಗರಿಕರು ಶಿಬಿರದ ಸದುಪಯೋಗ ಪಡೆದು ಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
Next Story





