Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾಸಕ್ಕೆ ಯೋಗ್ಯವಲ್ಲದ ಮನೆಗಳಿಗೆ 5 ಲಕ್ಷ...

ವಾಸಕ್ಕೆ ಯೋಗ್ಯವಲ್ಲದ ಮನೆಗಳಿಗೆ 5 ಲಕ್ಷ ರೂ.ಪರಿಹಾರ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ: ಪ್ರವಾಹ ಪರಿಹಾರ ಕಾರ್ಯ, ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ3 Oct 2019 7:47 PM IST
share
ವಾಸಕ್ಕೆ ಯೋಗ್ಯವಲ್ಲದ ಮನೆಗಳಿಗೆ 5 ಲಕ್ಷ ರೂ.ಪರಿಹಾರ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ, ಅ.3: ಪ್ರತ್ಯೇಕ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿ ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವ ಕುಟುಂಬಗಳನ್ನು ಪ್ರತ್ಯೇಕ ಘಟಕವೆಂದು ಪರಿಗಣಿಸಿ ಅವರಿಗೂ ನಿವೇಶನ ಅಥವಾ ಮನೆಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು. ವಾಸಕ್ಕೆ ಯೋಗ್ಯವಲ್ಲದ ಮನೆಗಳನ್ನು ‘ಎ’ ಕೆಟಗರಿ ಎಂದು ಪರಿಗಣಿಸಿ 5 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಒಂದೇ ದೊಡ್ಡ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವ ಸಹೋದರರ ಕುಟುಂಬಗಳನ್ನು ಪ್ರತ್ಯೇಕ ಘಟಕ ಎಂದು ಪರಿಗಣಿಸಬೇಕು ಎಂದು ಸವದತ್ತಿ ಶಾಸಕ ಆನಂದ ಮಾಮನಿ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ಇಂತಹ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ವಾಸಿಸುವ ಕುಟುಂಬಗಳನ್ನು ಗುರುತಿಸಿ, ಕೂಡಲೇ ಅವರಿಗೂ ಎಲ್ಲ ರೀತಿಯ ಪರಿಹಾರವನ್ನು ಒದಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಸಕರು ತಮ್ಮ ಕ್ಷೇತ್ರದಲ್ಲಿ ಬಿದ್ದ ಮನೆಗಳ ವರ್ಗೀಕರಣದಲ್ಲಿ ಏನಾದರೂ ಲೋಪದೋಷಗಳಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸರಿಪಡಿಸಬೇಕು. ಅಂತಹ ಕುಟುಂಬಗಳಿಗೂ ಎಲ್ಲ ರೀತಿಯ ಪರಿಹಾರ ನೀಡಲಾಗುವುದು. ಯಾವುದೇ ಪಕ್ಷವಿರಲಿ ಶಾಸಕರು ಪಟ್ಟಿ ನೀಡಿದರೆ ಮನೆಗಳ ವರ್ಗೀಕರಣವನ್ನು ಪರಿಷ್ಕರಣೆ ಮಾಡಿ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.

ಮನೆಗಳ ಹಾನಿಯನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ವರ್ಗೀಕರಣದಲ್ಲಿ ಲೋಪವೆಸಗಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಶಾಸಕರಾದ ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪಯಾದವಾಡ, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಪ್ರವಾಹ ಸಂದರ್ಭದಲ್ಲಿ ಕುಸಿದಿರುವ ಮನೆಗಳ ಎ, ಬಿ ಮತ್ತು ಸಿ ವರ್ಗೀಕರಣ ಸಮರ್ಪಕವಾಗಿ ಆಗುತ್ತಿಲ್ಲ. ಸಾಧ್ಯವಾದರೆ ಮರು ಮೌಲ್ಯಮಾಪನ ಮಾಡಿ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಎ ಮತ್ತು ಬಿ ಕೆಟಗರಿ ಮಾತ್ರ ಪರಿಗಣಿಸಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಎನ್‌ಡಿಆರ್‌ಎಫ್ ಮಾರ್ಗಸೂಚಿಯ ಪ್ರಕಾರ ಮಾತ್ರ ಪರಿಹಾರ ನೀಡಲು ಸಾಧ್ಯ. ಆದಾಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದಿಂದ ಪ್ರತ್ಯೇಕ ನೆರವು ನೀಡಲಾಗುವುದು ಎಂದರು.

ಪ್ರವಾಹದಿಂದ ಶಿಥಿಲಗೊಂಡಿರುವ ಶಾಲೆಗಳ ಪ್ರತಿಯೊಂದು ಕೊಠಡಿ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಅದೇ ರೀತಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೂ ಪ್ರತ್ಯೇಕ ಅನುದಾನ ಒದಗಿಸಲಾಗುತ್ತದೆ. ಕೂಡಲೇ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಅದೇ ರೀತಿ ದುರಸ್ತಿ ಸಾಧ್ಯವಿರುವ ಕಟ್ಟಡಗಳ ದುರಸ್ತಿಗೆ 50 ಸಾವಿರ ರೂ. ಪರಿಹಾರ ಬಿಡುಗಡೆ ಮಾಡಲಾಗುವುದು. ವಿದ್ಯುತ್ ಸಂಪರ್ಕವನ್ನು ಒಂದು ವಾರದಲ್ಲಿ ಸರಿಪಡಿಸಬೇಕು. ಮುಂದಿನ ಸಲ ಭೇಟಿ ನೀಡಿದಾಗ ವಿದ್ಯುತ್ ಸಂಪರ್ಕದ ಬಗ್ಗೆ ಯಾವುದೇ ದೂರುಗಳು ಬರಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಆವರು, ಬೆಳೆಹಾನಿ ಪರಿಹಾರವನ್ನು ಇನ್ನು ಕೆಲ ದಿನಗಳಲ್ಲಿ ಕೇಂದ್ರ ಸರಕಾರದಿಂದ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಪ್ರವಾಹ ಮತ್ತು ಅತಿವೃಷ್ಟಿಯಿಂದ ಜಮೀನು ಹಾಳಾಗಿದ್ದರೆ ಅಂತಹ ಕೆಲಸಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಳ್ಳುವಂತೆ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಉಂಟಾಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕಾರ್ಯಗಳ ಕುರಿತು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಅಭಯ್ ಪಾಟೀಲ್, ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ, ಮುಖ್ಯಮಂತ್ರಿಯ ಕಾರ್ಯದರ್ಶಿ ಶಿವಯೋಗಿ ಕಳಸದ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X