Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಅ.5ರಂದು ರಾಜ್ ಚೆಂಗಪ್ಪ...

ಮಣಿಪಾಲ: ಅ.5ರಂದು ರಾಜ್ ಚೆಂಗಪ್ಪ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ3 Oct 2019 9:28 PM IST
share

ಉಡುಪಿ, ಅ.3: ಕೊಡಗು ಮೂಲದ ದೇಶದ ಖ್ಯಾತನಾಮ ಹಿರಿಯ ಪತ್ರಕರ್ತರಲ್ಲಿ ಒಬ್ಬರಾದ ‘ಇಂಡಿಯಾ ಟುಡೆ’ ಸಮೂಹದ ಸಂಪಾದಕೀಯ ನಿರ್ದೇಶಕರಾಗಿರುವ ರಾಜ್ ಚೆಂಗಪ್ಪ ಅವರು ಮಾಹೆಯ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ (ಎಂಐಸಿ) ಆಯೋಜಿಸುವ ಐದನೇ ಎ.ವಿ.ಕಾಮತ್ ದತ್ತಿ ಉಪನ್ಯಾಸದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅ.5ರ ಶನಿವಾರ ಅಪರಾಹ್ನ 3:30ಕ್ಕೆ ಮಣಿಪಾಲದ ಫಾರ್ಚ್ಯೂನ್ ಇನ್ ವ್ಯಾಲಿವ್ಯೆ ಹೊಟೇಲ್‌ನ ಚೈತ್ಯಾ ಹಾಲ್‌ನಲ್ಲಿ ಎಂಐಸಿಯ ಸ್ಥಾಪಕ-ನಿರ್ದೇಶಕ ರಾಗಿದ್ದ, ಹಿರಿಯ ಪತ್ರಕರ್ತ ಎಂ.ವಿ.ಕಾಮತ್ ಅವರ ನೆನಪಿನಲ್ಲಿ ದತ್ತಿ ಉಪನ್ಯಾಸ ನಡೆಯಲಿದೆ.

ಇಂಡಿಯಾ ಟುಡೇ ಪಾಕ್ಷಿಕದ ಬೆಂಗಳೂರು ವರದಿಗಾರರಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ ರಾಜ್ ಚೆಂಗಪ್ಪ, ಕೆಲ ವರ್ಷದ ಬಳಿಕ ದಿಲ್ಲಿಗೆ ವರ್ಗಾವಣೆಗೊಂಡು ರಕ್ಷಣಾ ಕ್ಷೇತ್ರ ಹಾಗೂ ಅಣ್ವಸ್ತ್ರ ವಿಷಯಗಳಲ್ಲಿ ವಿಶೇಷ ಪರಿಣಿತಿ ಪಡೆದಿದ್ದರು. ಬಳಿಕ ಅವರು ಪಂಜಾಬ್ ಮೂಲದ ‘ದಿ ಟ್ರಿಬ್ಯೂನ್’ ಪತ್ರಿಕಾ ಸಮೂಹದ ಪ್ರಧಾನ ಸಂಪಾದಕರಾಗಿ ಕೆಲ ವರ್ಷ ಸೇವೆ ಸಲ್ಲಿಸಿ, ಮತ್ತೆ ಇಂಡಿಯಾ ಟುಡೇಗೆ ಮರಳಿದ್ದರು.

ದೇಶದ ಪರಮಾಣು ಅಸ್ತ್ರಗಳ ಕುರಿತು ಬೆಳಕು ಚೆಲ್ಲುವ ಕೃತಿ ‘ವೆಪನ್ಸ್ ಆಫ್ ಪೀಸ್: ದಿ ಸಿಕ್ರೇಟ್ ಸ್ಟೋರಿ ಆಫ್ ಇಂಡಿಯಾಸ್ ಕ್ವೆಸ್ಟ್ ಟು ಬಿ ನ್ಯೂಕ್ಲಿಯರ್ ಪವರ್’ ಭಾರೀ ಜನಪ್ರಿಯತೆಯನ್ನು ಪಡೆದಿತ್ತು. ದೇಶದ ರಾಜಕೀಯ ವಿಷಯಗಳ ಜೊತೆ ಜೊತೆಗೆ ಅವರು ಪರಿಸರ ಹಾಗೂ ಅಭಿವೃದ್ಧಿ ವಿಷಯಗಳಲ್ಲೂ ವಿಶೇಷ ಪರಿಣಿತಿಯನ್ನು ಪಡೆದಿದ್ದರು. ಎಂಟು ವರ್ಷ ಅವರು ಪ್ರಧಾನ ಮಂತ್ರಿಗಳ ಹವಾಮಾನ ಬದಲಾವಣೆ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

1987ರಲ್ಲಿ ಗ್ರಾಮೀಣ ವರದಿಗಾಗಿ ‘ಸ್ಟೇಟ್‌ಮನ್ ಪ್ರಶಸ್ತಿ’ ಪಡೆದಿದ್ದ ರಾಜ್ ಚೆಂಗಪ್ಪ, 1998ರಲ್ಲಿ ಅತ್ಯುನ್ನತ ವರದಿಗಾರಿಕೆಗೆ ‘ಪ್ರೇಮ್‌ ಭಾಟಿಯಾ ಪ್ರಶಸ್ತಿ’ಯನ್ನು ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X