Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಶವಂತಿ ಸುವರ್ಣ, ಪಿ.ಎನ್.ಆಚಾರ್ಯಗೆ...

ಯಶವಂತಿ ಸುವರ್ಣ, ಪಿ.ಎನ್.ಆಚಾರ್ಯಗೆ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ3 Oct 2019 10:27 PM IST
share

ಉಡುಪಿ, ಅ.3: ಈ ವರ್ಷದಿಂದ ಯುವ ವಾಹಿನಿ ಉಡುಪಿ ಘಟಕದ ಮೂಲಕ ನೀಡಲಾಗುವ ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿಗೆ ಕಾರ್ಕಳ ನಕ್ರೆಯ ಹಿರಿಯ ಲೇಖಕಿ ಯಶವಂತಿ ಎಸ್. ಸುವರ್ಣ ಹಾಗೂ ಜಾನಪದ ಕಲಾವಿದ ಪ್ರಶಸ್ತಿಗೆ ಖ್ಯಾತ ಚಿತ್ರಕಲಾವಿದ ಪಿ.ಎನ್. ಆಚಾರ್ಯ ಪುತ್ತೂರು ಅವರು ಆಯ್ಕೆಯಾಗಿದ್ದಾರೆ.

ಗುರುವಾರ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಖ್ಯಾತ ಜಾನಪದ ವಿದ್ವಾಂಸ ರಾದ ಬನ್ನಂಜೆ ಬಾಬು ಅಮೀನ್ ಅವರು ಈ ವಿಷಯವನ್ನು ಪ್ರಕಟಿಸಿದರು. 2002ರಲ್ಲಿ ಬನ್ನಂಜೆ ಬಾಬು ಅಮೀನ್ ಅವರ ಹಿರಿತನದಲ್ಲಿ ಪ್ರಾರಂಭಗೊಂಡ ಕೆಮ್ಮಲಜೆ ಜಾನಪದ ಪ್ರಕಾಶನದ ಮೂಲಕ ಈ ಪ್ರಶಸ್ತಿಗಳನ್ನು ಕಳೆದ ವರ್ಷದ ವರೆಗೆ ನೀಡಲಾಗುತ್ತಿತ್ತು. ಜಾನಪದ ಬರಹಗಾರರನ್ನು ಪ್ರೋತ್ಸಾಹಿಸುವುದು ಹಾಗೂ ತನ್ನ ಕೃತಿಗಳನ್ನು ಮುದ್ರಿಸಿ ಪ್ರಕಟಿಸುವುದು ಕೆಮ್ಮಲಜೆ ಪ್ರಕಾಶನದ ಉದ್ದೇಶವಾಗಿತ್ತು ಎಂದವರು ಹೇಳಿದರು.

ಕಳೆದ ವರ್ಷದವರೆಗೆ ತಲಾ 10,000ರೂ.ನಗದು ಬಹುಮಾನವನ್ನೊಳ ಗೊಂಡ ಎರಡು ಪ್ರಶಸ್ತಿಗಳನ್ನು ಜಾನಪದ ಬರಹಗಾರರು ಹಾಗೂ ಕಲಾವಿದರಿಗೆ ನೀಡಲಾಗುತ್ತಿತ್ತು. ಆದರೆ ಆರ್ಥಿಕ ಕಾರಣಗಳಿಗಾಗಿ ಈ ವರ್ಷದಿಂದ ಪ್ರಶಸ್ತಿಯನ್ನು ಯುವವಾಹಿನಿ ನೀಡಲಿದೆ ಎಂದು ಅವರು ವಿವರಿಸಿದರು.

ಈ ಬಾರಿಯ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ಅ.13ರ ರವಿವಾರ ಸಂಜೆ 5 ಗಂಟೆಗೆ ಉದ್ಯಾವರ ಬಲಾಯಿಪಾದೆಯ ನಾಗಪ್ಪ ಕಾಂಪ್ಲೆಕ್ಸ್‌ನ ಯುವವಾಹಿನಿ ಸಭಾಭವನದ ‘ಕಟಪಾಡಿ ಗರಡಿಮನೆ ನಾಗಪ್ಪ ಪೂಜಾರಿ ವೇದಿಕೆ’ಯಲ್ಲಿ ಪ್ರದಾನ ಮಾಡಲಾಗುವುದು ಎಂದವರು ತಿಳಿಸಿದರು.

ತುಳುಕೂಟ ಉಡುಪಿಯ ಗೌರವಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ತೆಂಕನಿಡಿಯೂರು ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ದುಗ್ಗಪ್ಪ ಕಜೆಕಾರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್‌ಕುಮಾರ್ ಸಸಿಹಿತ್ಲು ಹಾಗೂ ಬನ್ನಂಜೆ ಬಾಬು ಅಮೀನ್ ಮುಖ್ಯ ಅತಿಥಿಗಳಾಗಿರುವರು.

ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ನಾರಾಯಣ ಬಿ.ಎಸ್., ಮಾಜಿ ಅಧ್ಯಕ್ಷರಾದ ರಘುನಾಥ ಮಾಬಿಯಾನ್, ಸಂತೋಷ್‌ಕುಮಾರ್ ಹಾಗೂ ಭಾಸ್ಕರ ಸುವರ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X