Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ತಾಪಂ ವಿಶೇಷ ಸಾಮಾನ್ಯ ಸಭೆ

ಬಂಟ್ವಾಳ: ತಾಪಂ ವಿಶೇಷ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ3 Oct 2019 10:58 PM IST
share
ಬಂಟ್ವಾಳ: ತಾಪಂ ವಿಶೇಷ ಸಾಮಾನ್ಯ ಸಭೆ

ಬಂಟ್ವಾಳ, ಅ. 3: ಬಿ.ಸಿ.ರೋಡಿನ ವಕೀಲರೊಬ್ಬರು ತಾಪಂ ಜಾಗದಲ್ಲಿ ಕಂಪೌಂಡನ್ನು ಕೆಡವಿ ಅತಿಕ್ರಮಣ ಮಾಡಿರುವ ಕುರಿತು ತಾಪಂ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸದಸ್ಯರಲ್ಲಿ ಪರ-ವಿರೋಧ ಚರ್ಚೆ ಪರಸ್ಪರ ಜಟಾಪಟಿಗೆ ಕಾರಣವಾಯಿತು.

ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ನಡೆದ ಈ ವಿಶೇಷ ಸಭೆಯಲ್ಲಿ  ಈ ಮೋದಲು ತಾಪಂ ಜಾಗದ ಅವರಣಗೋಡೆಯನ್ನು ಕಾಮಗಾರಿಯ ಹಿನ್ನಲೆಯಲ್ಲಿ ಮೌಖಿಕ ಅನುಮತಿಯನ್ನು ಪಡೆದು ಕೆಡವಿದ್ದರು. ಇದೀಗ ಆಜಾಗದಲ್ಲಿ ಕಾಲುದಾರಿ ನಿರ್ಮಿಸಿ ಗೇಟ್ ಅಳವಡಿಸಿ ಸಮಸ್ಯೆಯನ್ನುಂಟು ಮಾಡಿದ್ದಾರೆ. ಈ ಕುರಿತು ಒಮ್ಮತದ ತೀರ್ಮಾನ ಹಾಗೂ ಕಾನೂನು ಕ್ರಮ ಜರಗಿಸುವ ಕುರಿತುಈ ವಿಶೇಷ ಸಭೆ ಕರೆಯಲಾಗಿದೆ ಎಂದು ಅಧ್ಯಕ್ಷ ಚಂದ್ರಹಾಸ ಕರ್ಕೇರ ಸಭೆಯಲ್ಲಿ ಪ್ರಸ್ತಾವಿಸಿದರು. ಈ ಸಂದರ್ಭ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಪ್ರತಿಕ್ರಿಯಿಸಿ, ತಾಪಂ ಸದಸ್ಯ ಪ್ರಭಾಕರ ಪ್ರಭು ಅವರ ಮನವಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರ ಸೂಚನಾಪತ್ರವನ್ನು ಸಭೆಯಲ್ಲಿ ವಾಚಿಸಿದರು.   ಅತಿಕ್ರಮಣ ತೆರವುಗೊಳಿಸುವ ಸಂದರ್ಭದಲ್ಲಿ ಏಕರೀತಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಾರ್ವ ಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಸದಸ್ಯ ಪ್ರಭಾಕರ ಪ್ರಭು ಸಭೆಯ ಗಮನ ಸೆಳೆದರು.

ತಾಪಂ ಆಸ್ತಿಯನ್ನು ರಕ್ಷಣೆ ಮಾಡಿ:

ಇದಕ್ಕೆ ಧ್ವನಿಗೂಡಿಸಿದ ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿ ಮಾತನಾಡಿ, ತಾಪಂಗೆ ಸೇರಿದ ಎಲ್ಲ ಆಸ್ತಿಯನ್ನು ಉಳಿಸಿಕೊಳ್ಳುವಂತೆ ಹಾಗೂ ಅದರ ರಕ್ಷಣೆ ಮಾಡುವಂತೆ ಈ ಹಿಂದೆಯೇ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದ್ದೆ, ಇದೀಗ ಅದರ ಮುಂದುವರಿದ ಭಾಗವಾಗಿ ತಾಪಂ ಕಚೇರಿ ಅವರಣದಲ್ಲಿಯೇ ಅತಿಕ್ರಮಣ ನಡೆದಿದೆ. ಇನ್ನಾದರೂ ತಾಪಂ ವ್ಯಾಪ್ತಿಗೆ ಸೇರಿದ ಜಾಗವನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಲಹೆ ನೀಡಿದರು.

ಮಿನಿವಿಧಾನ ಸೌಧ ನಿರ್ಮಾಣವೇ ಕಾನೂನು ಬಾಹಿರ..!

ಆಗ ಮಧ್ಯಪ್ರವೇಶಿಸಿದ ಸದಸ್ಯ ಪ್ರಭಾಕರ ಪ್ರಭು ಮಾತನಾಡಿ, ತಾಲೂಕು ಪಂಚಾಯತ್‍ನ ಆಸ್ತಿ ವಿವಿಧೆಡೆ ಅತಿಕ್ರಮವಾಗಿದೆ, ಅಲ್ಲದೆ ಕಚೇರಿ ಪಕ್ಕದಲ್ಲಿಯೇ ನಿಯಮ ಮೀರಿ ಹಲವು ಕಟ್ಟಡಗಳ ನಿರ್ಮಾಣವಾಗಿದೆ. ಆಗ ಮಾತನಾಡದವರು ಈಗ ಯಾಕೆ ಮಾತನಾಡುವುದು ಎಂದು ಪ್ರಶ್ನಿಸಿದರಲ್ಲದೆ, ಹಿಂದಿನವರಿಗೆ ಮಾಡಿದ ರಿಯಾಯಿತಿಯನ್ನೇ ಈಗಿನವರೆಗೂ ನೀಡಬೇಕು, ಇಲ್ಲವಾದಲ್ಲಿ ಎಲ್ಲರ ವಿರುದ್ಧ ವೂ ಕ್ರಮ ಕೈಗೊಳಬೇಕು ಎಂದು ಪ್ರಭು ಆಗ್ರಹಿಸಿದರು.

ನಿಯಮವೆಂದು ನೋಡಿದರೆ ಬಂಟ್ವಾಳ ಮಿನಿವಿಧಾನಸೌಧದ ಹಿಂದೆ ಅಗ್ನಿಶಾಮಕದಳ ವಾಹನ ತಿರುಗಲು ಅಸಾಧ್ಯ, ಇದು ನಿಯಮಬಾಹಿರವಲ್ಲವೇ? ಎಂದವರು ಪ್ರಶ್ನಿಸಿದರು.

ಉಭಯ ಪಕ್ಷಗಳ ಸದಸ್ಯರ ಮಧ್ಯೆ ಜಟಾಪಟಿ:

ಇದೇ ವೇಳೆ ಎಲ್ಲರಿಗೂ ಒಂದೇ ಕಾನೂನಿನ್ವಯ ಕ್ರಮ ಕೈಗೊಳ್ಳುವಂತೆ ಹಾಗೂ ಅತಿಕ್ರಮಣ ಮಾಡಿದವರಿಗೆ ನೋಟಿಸ್ ಜಾರಿಗೊಳಿಸಬೇಕು. ನಾವೇನು ಪಾಕಿಸ್ತಾನದಲ್ಲಿದ್ದೆವಾ? ಸದಸ್ಯ ಪ್ರಭು ಎಂದಾಗ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತಾಪಂ ಸದಸ್ಯ ಶಿವಪ್ರಸಾದ್, ಸದಸ್ಯರ ನಡುವೆ ಮಾತಿನಚಕಮಕಿ ನಡೆಯಿತು.

ಕಾಂಗ್ರೆಸ್ ಸದಸ್ಯರು ವಕೀಲರೊಬ್ಬರು ಅತಿಕ್ರಮಣಗೊಳಿಸಿ ಜಾಗವನ್ನು ಈ ಕೂಡಲೇ ತೆರವು ಗೊಳಿಸುವಂತೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಟ್ಟುಹಿಡಿದಾಗ ಉಭಯ ಪಕ್ಷಗಳ ಸದಸ್ಯರ ಮಧ್ಯೆ ಜಟಾಪಟಿ ನಡೆಯಿತು. 

ಆಗ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮತ್ತು ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಹೈದರ್ ಅವರು ಮಧ್ಯಪ್ರವೇಶಿಸಿ ಸದಸ್ಯರನ್ನು ಸಮಾಧಾನ ಪಡಿಸಿ ಸ್ವಸ್ಥಾನದಲ್ಲಿ ಕೂರಿಸುವಲ್ಲಿ ಯಶಸ್ವಿಯಾದರು.

ತೀರ್ಮಾಣಗಳು:

ಸದಸ್ಯರ ಅಭಿಪ್ರಾಯವನ್ನು ಆಲಿಸಿದ ಬಳಿಕ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ತಾಪಂ ವ್ಯಾಪ್ತಿಯಲ್ಲಿ ಅತಿಕ್ರಮಣಗೊಂಡಿರುವ ಜಾಗವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಶುಕ್ರವಾರದಿಂದಲೇ ಸರ್ವೆ ಮಾಡುವುದು. ತಾಪಂ ವ್ಯಾಪ್ತಿಯ ಕೆಲ ಜಾಗವು ಪುರಸಭಾ ವ್ಯಾಪ್ತಿಯಲ್ಲಿ ಬರುವ ಜಾಗವನ್ನು ಸರ್ವೆ ಮಾಡುವುದು. ಅವರಣಗೋಡೆ ನಿರ್ಮಿಸಿ ತಾಪಂ ಅಸ್ತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಲ್ಲದೆ ಅತಿಕ್ರಮಣವನ್ನು ತೆರವುಗೊಳಿಸುವ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮಕೈಗೊಳ್ಳುವುದೆಂದು ರೂಲಿಂಗ್ ಪ್ರಕಟಿಸಿದರು.

ಬಿಸಿಬಿಸಿ ಹಲ್ಲೆ:

ಅತಿಕ್ರಮಣದ ವಿಚಾರದಲ್ಲಿ ಚರ್ಚೆಯ ಮಧ್ಯ ಸದಸ್ಯ ಉಸ್ಮಾನ್ ಕರೋಪಾಡಿ ಅವರು ಮಾತನಾಡುತ್ತಾ, ತಾಪಂನ ಜಾಗವನ್ನು ಅತಿಕ್ರಮಣ ಮಾಡಿರುವುದು ಸದಸ್ಯರ ಮೇಲೆ ಮಾಡಿರುವ ಹಲ್ಲೆಯಾಗಿದೆ ಎಂದು ಬಣ್ಣಿಸಿದಾಗ, ವಿಪಕ್ಷ ಸದಸ್ಯ ರಮೇಶ್ ಕುಡ್ಮೇರು, ಈ ಮೊದಲು ತಾಪಂ ಜಾಗವನ್ನು ಪ್ರಭಾವಿಗಳು ಅತಿಕ್ರಮಣ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ ಈಗ ಆಗಿರುವಂತದ್ದು ಬಿಸಿಬಿಸಿ ಹಲ್ಲೆ ಎಂದು ಹೇಳಿದಾಗ, ಎಲ್ಲ ಮಹಿಳಾ ಸದಸ್ಯೆಯರು ಎದ್ದು ನಿಂತರು. ಎಲ್ಲ ಹಲ್ಲೆಗಳು ಒಂದೇ ಎಲ್ಲರಿಗೂ ಒಂದೇ ಕಾನೂನಿನ್ವಯ ಕ್ರಮಕೈಗೊಳ್ಳುವಂತೆ ಪ್ರಭಾಕರ ಪ್ರಭು ತಿರುಗೇಟು ನೀಡಿ ಚರ್ಚೆಗೆ ತೆರೆ ಎಳೆದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಆಬ್ಬಾಸ್ ಅಲಿ, ತಹಶೀಲ್ದಾರ್ ರಶ್ಮಿ ಎಸ್.ಆರ್., ಸಿಐ ಟಿ.ಡಿ.ನಾಗರಾಜ್ ಉಪಸ್ಥಿತರಿದ್ದರು. ಇಒ ರಾಜಣ್ಣ ಸ್ವಾಗತಿಸಿ, ವಂದಿಸಿದರು.

ಸದಸ್ಯರಾದ ಹೈದರ್ ಕೈರಂಗಳ, ಸಂಜೀವ ಪೂಜಾರಿ, ಶಿವಪ್ರಸಾದ್, ಯಶವಂತ ಪೂಳಲಿ, ಗಣೇಶ್ ಸುವರ್ಣ, ಮಹಾಬಲ ಆಳ್ವ, ನವೀನ್ ಪೂಜಾರಿ, ಗೀತಾ ಚಂದ್ರಶೇಖರ್, ಲಕ್ಷ್ಮೀಗೋಪಾಲಾಚಾರ್ಯ ಚರ್ಚೆಯಲ್ಲಿ ಪಾಲ್ಗೊಂಡರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X