ಸಿಡಿಲು ಬಡಿದು ಮಹಿಳೆ ಸೇರಿ ಇಬ್ಬರು ಮೃತ್ಯು
![ಸಿಡಿಲು ಬಡಿದು ಮಹಿಳೆ ಸೇರಿ ಇಬ್ಬರು ಮೃತ್ಯು ಸಿಡಿಲು ಬಡಿದು ಮಹಿಳೆ ಸೇರಿ ಇಬ್ಬರು ಮೃತ್ಯು](https://www.varthabharati.in/sites/default/files/images/articles/2019/10/3/213157-1570124574.jpeg)
ಸಾಂದರ್ಭಿಕ ಚಿತ್ರ
ವಿಜಯಪುರ, ಅ.2: ಸಿಡಿಲು ಬಡಿದು ಮಹಿಳೆ ಸೇರಿ ಇಬ್ಬರು ಮೃತಪಟ್ಟ ಘಟನೆ ಚಡಚಣ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ.
ಶ್ರೀಶೈಲ ಪಟ್ಟಣಶೆಟ್ಟಿ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದಲ್ಲಿ ನಿಂತಿದ್ದ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಘಟನೆಯಲ್ಲಿ, ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದಲ್ಲಿ ನಡೆದಿದೆ.
ಸುಸಲವ್ವ ಚಿಮ್ಮಲಗಿ(50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ನಿರ್ವಹಿಸಿ ವಾಪಸ್ ಆಗುವ ವೇಳೆ ಘಟನೆ ನಡೆದಿದ್ದು, ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story