Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲ:...

ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಮನೆ ಕಳೆದುಕೊಂಡಿರುವವರಿಗೆ ಐದು ಲಕ್ಷ ರೂ. ಪರಿಹಾರ

ವಾರ್ತಾಭಾರತಿವಾರ್ತಾಭಾರತಿ4 Oct 2019 7:25 PM IST
share
ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ, ಅ.4: ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವವರಿಗೆ ಐದು ಲಕ್ಷ ರೂಪಾಯಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶುಕ್ರವಾರ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ನಡೆದ ಪರಿಹಾರ ವಿತರಣೆ- ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಹಂತದಲ್ಲಿ ಪರಿಹಾರ ವಿತರಣೆ ಕಾರ್ಯ ಈಗಾಗಲೇ ನಡೆದಿದೆ. ಒಂದೇ ಮನೆಯಲ್ಲಿ ವಾಸಿಸುವ ಎರಡೂ ಕುಟುಂಬಗಳಿಗೂ ಪ್ರತ್ಯೇಕ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು.

ಮಹಾರಾಷ್ಟ್ರ ಮಾದರಿ ಬೆಳೆ ಪರಿಹಾರ: ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾದರಿಯನ್ನು ಅಧ್ಯಯನ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧ್ಯಯನ ವರದಿಯ ಬಳಿಕ ಸರಕಾರದ ಆರ್ಥಿಕ ಸ್ಥಿತಿ ಆಧರಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಪ್ರವಾಹದಿಂದ ಮನೆ, ಬೆಳೆ ಕಳೆದುಕೊಂಡು ಜನರು ಸಂಕಷ್ಟದಲ್ಲಿದ್ದು, ಸಂತ್ರಸ್ತರಿಗೆ ರಾಜ್ಯ ಸರಕಾರ ಸಾಧ್ಯವಿರುವ ಎಲ್ಲ ನೆರವು ನೀಡಿದೆ. ರೈತರು ಒಪ್ಪಿದರೆ ಶಾಶ್ವತ ಸ್ಥಳಾಂತರಕ್ಕೆ ಸರಕಾರ ಸಿದ್ಧವಿದೆ. ಕೆಲವು ವರ್ಷಗಳ ಹಿಂದೆ ಸ್ಥಳಾಂತರ ಮಾಡಿದ ಗ್ರಾಮಗಳಿಗೆ ಜನರು ಹೋಗಲಿಲ್ಲ. ಗ್ರಾಮಸ್ಥರು ಒಟ್ಟಾಗಿ ಸಂಪೂರ್ಣ ಗ್ರಾಮ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

16 ಗ್ರಾಮಗಳಿಗೆ ನೀರು ಪೂರೈಸುವ 80 ಕೋಟಿ ರೂ.ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಹದಿನೈದು ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗುವುದು. ಸಹಕಾರಿ ಸಂಸ್ಥೆ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಮನ್ನಾ ಯೋಜನೆಗೆ ಸರಕಾರ ಬದ್ಧವಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪರಿಷ್ಕರಣೆಗೆ ಪ್ರಧಾನಮಂತ್ರಿ ಗಮನಕ್ಕೆ ತರಲಾಗುವುದು. ಇದಕ್ಕಾಗಿ ಪ್ರಧಾನಿ ಮತ್ತು ಗೃಹ ಸಚಿವರ ಬಳಿ ನಿಯೋಗ ಕೊಂಡೊಯ್ಯಲಾಗುವುದು. ಎನ್.ಡಿ.ಆರ್.ಎಫ್. ಮಾರ್ಗಸೂಚಿಗಳ ಪರಿಷ್ಕರಣೆ ಮಾಡಿದರೆ ಮಾತ್ರ ಹೆಚ್ಚಿನ ಪರಿಹಾರ ನೀಡುವುದು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಕೃಷ್ಣಾ ನದಿ ತೀರದ ಕೆಲವು ಗ್ರಾಮಗಳು ಪದೆಪದೇ ಮುಳುಗಡೆಯಾಗುತ್ತಿದ್ದು, ಇಂತಹ 22 ಗ್ರಾಮಗಳ ಶಾಶ್ವತ ಸ್ಥಳಾಂತರ ಅಗತ್ಯವಿದೆ. ನವಗ್ರಾಮ ನಿರ್ಮಾಣಕ್ಕೆ ಅಗತ್ಯವಿರುವ ಜಮೀನು ಸ್ವಾಧೀನಪಡಿಸಿಕೊಂಡು ಸಂಪೂರ್ಣ ಮುಳುಗಡೆಯಾಗುವ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವುದು ನಮ್ಮ ಸರಕಾರದ ಜವಾಬ್ದಾರಿಯಾಗಿದೆ ಎಂದರು.

ಕಬ್ಬು ಸೇರಿದಂತೆ ಎಲ್ಲ ಬಗೆಯ ಬೆಳೆಹಾನಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಪರಿಹಾರ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು. ಸಂಪೂರ್ಣವಾಗಿ ಕುಸಿದ ಮನೆಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡುತ್ತಿರುವುದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಯಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಕೆಲ ತಾಂತ್ರಿಕ ಸಮಸ್ಯೆಗಳನ್ನು ಹೊರತುಪಡಿಸಿದರೆ ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆ, ಪುನರ್ವಸತಿ ಮತ್ತು ಪರಿಹಾರ ತರಣೆಯಲ್ಲಿ ಜಿಲ್ಲಾಡಳಿತ ಅತ್ಯುತ್ತಮ ಕೆಲಸ ಮಾಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಪ್ರತಿ ಸಂತ್ರಸ್ತ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂ.ನೀಡುವುದರ ಜತೆಗೆ ಸಂತ್ರಸ್ತರ ಪುನರ್ವಸತಿಗೆ ಎಲ್ಲ ರೀತಿಯ ನೆರವು ನೀಡಲು ಮುಖ್ಯಮಂತ್ರಿ ಹಗಲಿರುಳು ಶ್ರಮಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಪಿ.ರಾಜೀವ್, ಮಹಾಂತೇಶ ದೊಡ್ಡಗೌಡರ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ, ಮುಖ್ಯಮಂತ್ರಿಯ ಕಾರ್ಯದರ್ಶಿ ಶಿವಯೋಗಿ ಕಳಸದ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿ.ಪಂ.ಸಿಇಓ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X