Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೋಟಿಸ್ ಕೊಟ್ಟಿದ್ದರಲ್ಲಿ ಅರ್ಥವಿಲ್ಲ,...

ನೋಟಿಸ್ ಕೊಟ್ಟಿದ್ದರಲ್ಲಿ ಅರ್ಥವಿಲ್ಲ, ಅದಕ್ಕೆ ಹೆದರುವುದೂ ಇಲ್ಲ: ಶಾಸಕ ಯತ್ನಾಳ್

"ಸಂತ್ರಸ್ತರ ಪರ ಮಾತನಾಡಿದ್ದು ಪಕ್ಷ-ಸರಕಾರದ ವಿರುದ್ಧ ಹೇಗೆ ಆಗುತ್ತದೆ?"

ವಾರ್ತಾಭಾರತಿವಾರ್ತಾಭಾರತಿ4 Oct 2019 8:00 PM IST
share
ನೋಟಿಸ್ ಕೊಟ್ಟಿದ್ದರಲ್ಲಿ ಅರ್ಥವಿಲ್ಲ, ಅದಕ್ಕೆ ಹೆದರುವುದೂ ಇಲ್ಲ: ಶಾಸಕ ಯತ್ನಾಳ್

ವಿಜಯಪುರ, ಅ.4: ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನನಗೆ ಶೋಕಾಸ್ ನೋಟಿಸ್ ಬಂದಿಲ್ಲ. ಬಂದರೆ ಅದಕ್ಕೆ ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಶುಕ್ರವಾರ ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಹೈಕಮಾಂಡ್ ಬಳಿ ನನ್ನ ಬಗ್ಗೆ ತಪ್ಪಾಗಿ ಹೇಳಿರುತ್ತಾರೆ. ಹೀಗಾಗಿ, ನೋಟಿಸ್ ನೀಡಿರಬೇಕು. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸದಿದ್ದರೆ ಸಂಸದ, ಶಾಸಕ, ಸಚಿವರಾಗಿದ್ದರೂ ಏನು ಪ್ರಯೋಜನ. ಸಂತ್ರಸ್ತರ ಪರ ಮಾತನಾಡಿದ್ದು ಪಕ್ಷ-ಸರಕಾರದ ವಿರುದ್ಧ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು. ನಾನೇನು ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಮತ ಹಾಕಿಲ್ಲ. ನಿನಗೆ ಟಿಕೆಟ್ ಕೊಡುತ್ತೇವೆ, ಕ್ಷೇತ್ರದ ಅಭಿವೃದ್ದಿಗೆ 150 ಕೋಟಿ ಅನುದಾನ ಕೊಡುತ್ತೇವೆ. ಡಿ.ಎಚ್.ಶಂಕರಮೂರ್ತಿ ವಿರುದ್ಧ ಮತ ಹಾಕಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರೂ ನಾನು ಮತ ಹಾಕಿಲ್ಲ. ಹೀಗಿರುವಾಗ ನಾನು ಪಕ್ಷ ವಿರೋಧಿ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ ಎಂದು ಗರಂ ಆದರು.

ನೋಟಿಸ್ ಕೊಟ್ಟಿದ್ದರಲ್ಲಿ ಯಾವುದೇ ಅರ್ಥವಿಲ್ಲ. ಯಾವುದೇ ಒಂದು ನೋಟಿಸ್‌ಗೆ ನಾನು ಹೆದರುವುದಿಲ್ಲ. ನೋಟಿಸ್ ಕೊಟ್ಟು ಒಬ್ಬ ವ್ಯಕ್ತಿಯನ್ನು ನಾಶ ಮಾಡಿದರೆ ಏನೂ ಆಗುವುದಿಲ್ಲ. ರಾಜ್ಯ ಪ್ರವಾಹ ಸಂತ್ರಸ್ತರಿಗೆ 5 ಸಾವಿರ ಕೋಟಿ ಕೊಡಿ ಎಂದು ಈಗಲೂ ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು.

ಸಂಸದರು ಎಂದರೆ ಸೇವಕರೆ, ಅವರೇನು ಹೆಚ್ಚಿನವರಲ್ಲ. ಜನರಿಗಾಗಿ ಕೇಂದ್ರದಲ್ಲಿ ಕಾಲು ಹಿಡಿದು ಪರಿಹಾರ ತರಬೇಕು. ನಾನು ಜನರ ಸಲುವಾಗಿ ಮಾತನಾಡಿದ್ದೇನೆ. ನನ್ನನ್ನು ಮಂತ್ರಿ ಮಾಡಿಲ್ಲ ಎಂದು ಹೇಳಿಕೆ ಕೊಟ್ಟಿಲ್ಲ. ಜನರ ಹಿತದೃಷ್ಟಿಯಿಂದ ಮಾತನಾಡಿದ್ದಕ್ಕೆ ಏನು ಶಿಕ್ಷೆ ಕೊಟ್ಟರೂ ಸ್ವೀಕರಿಸುತ್ತೇನೆ. ಬಿ.ಎಲ್.ಸಂತೋಷ್ ಅಥವಾ ರಾಜ್ಯ ಘಟಕದ ಅಧ್ಯಕ್ಷರ ಹೆಸರನ್ನು ನಾನು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಕುಂಬಳಕಾಯಿ ಕಳ್ಳ ಎಂದರೆ ನೀವು ಹೆಗಲು ಮುಟ್ಟಿಕೊಂಡು ನೋಡಿದರೆ ನಾನೇನು ಮಾಡಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X