ಉಡುಪಿ, ಅ.4: ಮಣಿಪಾಲದ ಸಿಂಡಿಕೇಟ್ ಬ್ಯಾಂಕ್‌ನ ಗೋಲ್ಡನ್ ಜ್ಯುಬಿಲಿ ಸಭಾಂಗಣದಲ್ಲಿ ಅ.5ರ ಬೆಳಗ್ಗೆ 10 ಕ್ಕೆ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಖಾಸಗಿ ಬ್ಯಾಂಕುಗಳ ವತಿಯಿಂದ ವಿವಿಧ ಸಾಲ ನೀಡುವ ಕುರಿತ ಸಾಲ ಮೇಳ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಪ್ರಕಟಣೆ ತಿಳಿಸಿದೆ.