ರಿಕ್ಷಾ ಢಿಕ್ಕಿ: ಪಾದಾಚಾರಿ ಮೃತ್ಯು
ಬೈಂದೂರು, ಅ.4: ನಾವುಂದ ಮಸ್ಕಿಯ ಯಕ್ಷೇಶ್ವರಿ ದೇವಸ್ಥಾನದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.3ರಂದು ರಾತ್ರಿ 8ಗಂಟೆ ಸುಮಾರಿಗೆ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹಸನ್ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಹಸನ್‌ರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





