ಬಸ್‌ಗೆ ಕಾರು ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ
ಮಂಗಳೂರು, ಅ.4: ನಗರದ ಹೊರವಲಯದ ಅಡ್ಯಾರು ಬಳಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕ್ಲಾಸಿಕ್ ಡಿಸೋಜ ಹಾಗೂ ಚಾರ್ಲ್ಸ್ ಡಿಸೋಜ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ದ್ದಾರೆ. ಜತೆಗಿದ್ದ ಇನ್ನೋರ್ವ ನೋವೆಲ್ ಡಿಸೋಜ ಅಪಾಯದಿಂದ ಪಾರಾಗಿದ್ದಾರೆ.
ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಅಡ್ಯಾರು ಸಹ್ಯಾದ್ರಿ ಕಾಲೇಜು ಬಳಿ ಎದುರಿನಿಂದ ಹೋಗುತ್ತಿದ್ದ ಖಾಸಗಿ ಬಸ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಕಾರಿನ ಎದುರು ಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಗಾಯಾಳುಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಈ ಬಗ್ಗೆ ಕಂಕನಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





