Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾಹನ ಚಾಲಕರಿಂದ ದುಪ್ಪಟ್ಟು ದಂಡ ವಸೂಲಿ:...

ವಾಹನ ಚಾಲಕರಿಂದ ದುಪ್ಪಟ್ಟು ದಂಡ ವಸೂಲಿ: ಕಾಂಗ್ರೆಸ್‍ನಿಂದ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ4 Oct 2019 10:53 PM IST
share

ಪುತ್ತೂರು : ಕೇಂದ್ರ ಸರ್ಕಾರದ ಸಾರಿಗೆ ನೀತಿಯಿಂದಾಗಿ ವಾಹನ ಚಾಲಕ ಮಾಲಕರನ್ನು ಭಯೋತ್ಪಾದಕರಿಗಿಂತಲೂ ಕಡೆಯಾಗಿ ಕಾಣುವ ವ್ಯವಸ್ಥೆಯಾಗಿದೆ.ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಈ ರೀತಿಯ ವಾತಾವರಣ ನಿರ್ಮಾಣವಾಗಿರಲಿಲ್ಲ. ಪೊಲೀಸರು ವಾಹನ ಚಾಲಕರನ್ನು ಕಳ್ಳರ ರೀತಿಯಲ್ಲಿ ನೋಡುತ್ತಿದ್ದು,ಅಮಾನವೀಯ ವರ್ತನೆಯ ಮೂಲಕ ಅಧಿಕಾರಿಗಳಿಂದ ಕಾನೂನಿನ ದುರುಪಯೋಗವಾಗುತ್ತಿದೆ. ಇದೇ ರೀತಿ ಮುಂದುವರಿದರೆ ಪ್ರತಿಭಟಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು ಎಚ್ಚರಿಸಿದ್ದಾರೆ. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರಿ ಸಾಧನೆಗಾಗಿ ಡಂಡ ವಸೂಲಿ ನೀತಿಯನ್ನು ಪೊಲೀಸರು ಅನುಸರಿಸುತ್ತಿದ್ದಾರೆ. ವಾಹನದ ಮೌಲ್ಯಕ್ಕಿಂತಲೂ ಅಧಿಕ ಮೊತ್ತದ ಡಂಡ ವಿಧಿಸುವ ಕೆಲಸ ನಡೆಯುತ್ತಿದ್ದು, ವಾಹನ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನ್ಯಾಯ ಸಮ್ಮತ ಕಾನೂನು ಅಲ್ಲ, ಜನಜಾಗೃತಿ ಮೂಡಿಸಿ ಕಾನೂನು ಜಾರಿಗೊಳಿಸುವ ಕೆಲಸ ಆಗಬೇಕಿತ್ತು ಎಂದ ಅವರು ಸರ್ಕಾರ ಕಾನೂನು ನಿಯಮಗಳನ್ನು ಸಡಿಲಗೊಳಿಸುವ ಜತೆಗೆ ಅಧಿಕಾರಿಗಳಿಗೆ ಕಿವಿಮಾತು ಹೇಳಬೇಕು ಎಂದು ಆಗ್ರಹಿಸಿದರು. 

ರಾಜ್ಯವನ್ನು ಹಸಿವುಮುಕ್ತ ಮಾಡುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ಯೋಜನೆ, ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೊಳಿಸಿತ್ತು.ಈಗ ಪಡಿತರ ಅಕ್ಕಿ ಯೋಜನೆಯನ್ನೇ ಬದಲಾವಣೆ ಮಾಡಲಾಗಿದೆ. ಸಾಲಮನ್ನಾ, ಅಡಿಕೆ ಕೊಳೆರೋಗ ಪರಿಹಾರ ಬರುತ್ತಿಲ್ಲ, ಈ ಹಿಂದಿನ ಸರ್ಕಾರ ನೀಡಿದ್ದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆದರಿಕೆಯೊಡ್ಡುವ ಕೆಲಸ ಮಾಡಿದೆ ಎಂದು ಆರೋಪಿಸಿದ ಅವರು, ಮೋದಿ ಅವರ ಅಚ್ಚೇ ದಿನ್ ಎಂದರೆ ಇದೇನಾ ಎಂದು ಪ್ರಶ್ನಿಸಿದ ಅವರು ಬಿಜೆಪಿ ಸರ್ಕಾರದ ಪೊಳ್ಳು ಬೆದರಿಕೆಗೆ ಬಿಪಿಎಲ್ ಪಡಿತರ ಚೀಟಿದಾರರು ಭಯ ಪಡಬೇಕಾಗಿಲ್ಲ. ನ್ಯಾಯಯುತವಲ್ಲದ ಕಾನೂನು ಜಾರಿಗೊಳಿಸಿದರೆ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು. 

ಸೂಲಿಬೆಲೆ ಸಮರ್ಥ ವಾದ

ರಾಜ್ಯದ ಬರಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಚಕ್ರವರ್ತಿ ಸೂಲಿಬೆಲೆ ಸಮರ್ಪಕವಾದ ವಾದವನ್ನು ಮಂಡಿಸಿರುವುದು ಸ್ವಾಗತಾರ್ಹವಾಗಿದೆ. ಈ ಹಿಂದೆ ಅವರು ಹೇಗೆ ಮಾತನಾಡಿದ್ದರು ಅನ್ನುವುದಕ್ಕಿಂತ ಈ ವಿಚಾರದಲ್ಲಿ ಅವರ ಚಿಂತನೆ ಉತ್ತಮವಾಗಿದೆ. ಅವರು ರಾಜ್ಯದ ಅಭಿಮಾನ ದಿಂದ ಸಮರ್ಥ ವಾದ ಮಂಡಿಸಿದ್ದಾರೆ. ಎಂಎಲ್‍ಎ, ಎಂಪಿ ಆಗುವ ಮೊದಲು ದೇಶಪ್ರೇಮಿಯಾಗಿದ್ದ ಚಕ್ರವರ್ತಿ ಸೂಲಿಬೆಲೆ ಈಗ ಮಾತನಾಡಿದ ಒಂದು ಸತ್ಯದ ಮಾತಿನಿಂದ ಬಿಜೆಪಿಗರ ಪಾಲಿಗೆ ದೇಶದ್ರೋಹಿಯಾಗಿದ್ದಾರೆ. ಅವರ ಪ್ರಸ್ತುತ ಸೂಲಿಬೆಲೆ ಅವರ ವಾದಕ್ಕೆ ನಮ್ಮ ಬೆಂಬಲವಿದೆ ಹೇಳಿದರು.

ಕಾಂಗ್ರೆಸ್ ಮುಖಂಡರಾದ ಲ್ಯಾನ್ಸಿ ಮಸ್ಕರೇನ್ಹಸ್, ಬೆಳ್ಳಿಪ್ಪಾಡಿ ಸುಭಾಸ್ ರೈ,ದಾಮೋದರ ಭಂಡಾರ್ಕರ್, ಮುಖೇಶ್ ಕೆಮ್ಮಿಂಜೆ, ರವಿಪ್ರಸಾದ್ ಶೆಟ್ಟಿ ಬನ್ನೂರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X