ಪ್ರವಾಹದಿಂದ ರಾಜ್ಯದಲ್ಲಿ 24 ಸಾವಿರ ಕೋಟಿ ರೂ. ನಷ್ಟವಾಗಿದೆ : ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಸುಮಾರು 24 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರೂ ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚಿನ ನೆರವು ನಮಗೆ ದೊರೆಯಲಿದೆ ಎಂದು ಆಲಮಟ್ಟಿಯಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದರು.
ಮಾಜಿ ಸಿಎಂ ಕುಮಾರಸ್ವಾಮಿ ಭ್ರಮನಿರಸವಾಗಿದ್ದಾರೆ. ಹೀಗಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ಸ್ಥಗಿತವಾಗಿಲ್ಲ. ಆಲಮಟ್ಟಿ ಜಲಾಶಯ ಎತ್ತರಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ಬಜೆಟ್ ನಲ್ಲಿ 20 ಸಾವಿರ ಕೋಟಿ ರೂ. ಈ ಯೋಜನೆಗೆ ಮೀಸಲಿಡುವುದಾಗಿ ಘೋಷಣೆ ಮಾಡಿದರು.
ರಾಜ್ಯದಲ್ಲಿ ಸದ್ಯಕ್ಕೆ ನೂತನ ಜಿಲ್ಲೆಗಳ ರಚನೆ ಪ್ರಕ್ರಿಯೆ ಇಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇವೆ ಎಂದೂ ಈ ಸಂದರ್ಭ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
Next Story