ಮೂಡುಬಿದಿರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಮೂಡುಬಿದಿರೆ : ಮಾಜಿ ಸಿ.ಎಂ ಸಿದ್ದರಾಮಯ್ಯ ಅವರು ಮೂಡಿಗೆರೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಕ್ಕಾಗಿ ಶನಿವಾರ ತೆರಳುವ ಮುನ್ನ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರ ಮನೆಗೆ ನೀಡಿದರು.
ನಂತರ ಅವರು ಮಾಧ್ಯಮದೊಂದಿಗೆ ಮಾತನಾಡಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಸಾಧನೆ ಎಂದು ಹೇಳಿಕೊಳ್ಳಲು ಯಾವುದೇ ಜನರಪರ ಕಾರ್ಯಕ್ರಮವಿಲ್ಲ. ನೆರೆ ಪರಿಹಾರ ಕೊಡುವಲ್ಲಿ ಕೂಡ ರಾಜ್ಯ ಕೇಂದ್ರ ಸರ್ಕಾರ ವಿಫಲವಾಗಿದೆ. 2020ರಲ್ಲಿ ಸರ್ಕಾರ ಪತನಗೊಂಡು ಮತ್ತೆ ಚುನಾವಣೆ ನಡೆಯಲಿದೆ ಎಂದು ಸಂದರ್ಭ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ರಾಜ್ಯವು ಹಿಂದೆಂದೋ ಕಂಡರಿಯದ ರೀತಿಯಲ್ಲಿ ನೆರೆ ಪೀಡಿತವಾಗಿದೆ. ಎರಡುವರೆ ಲಕ್ಷ ಮನೆಗಳು ಹಾನಿಗೊಳಗಾಗಿದ್ದು, ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟವಾಗಿದೆ. ಆದರೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡದೆ ಕಡಿಮೆ ಪರಿಹಾರ ನೀಡಿದೆ. ಕೇಂದ್ರ ಸರ್ಕಾರ ತಕ್ಷಣ 5 ಸಾವಿರ ಕೋಟಿ ಎಂದು ನಾವು ಒತ್ತಾಯಿಸಿದ್ದೆವು. ಆದರೆ 1,200 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಯಡಿಯೂರಪ್ಪನವರು ಖಜಾನೆ ಖಾಲಿಯಾಗಿದೆ ಎಂದು ಪೆದ್ದು ಪೆದ್ದು ಹೇಳಿಕೆ ನೀಡುತ್ತಾರೆ. ಖಜಾನೆ ಖಾಲಿಯಾಗಿದೆ ಅಂದ್ರೆ ಏನು ಅರ್ಥ?. ಪ್ರತಿ ತಿಂಗಳು ತೆರಿಗೆ ಬರುತ್ತಾ ಇರುತ್ತದೆ. ತೆರಿಗೆ ಸೂಕ್ತ ರೀತಿಯಲ್ಲಿ ಸಂಗ್ರಹ ಮಾಡಿದರೆ ಸಮಸ್ಯೆ ಬರಲ್ಲ. ನಾನು ಮುಖ್ಯಮಂತ್ರಿ ಆಗಿದ್ದ ಐದು ವರ್ಷ ಯಾವುದೇ ಹಣಕಾಸಿನ ಸಮಸ್ಯೆ ಆಗಿಲ್ಲ ಎಂದರು.
ಮಾಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ ಖಾದರ್, ಕೆ.ಅಭಯಚಂದ್ರ ಜೈನ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಮೂಡುಬಿದಿರೆ ಪುರಸಭೆ ಸದಸ್ಯರು, ಮೂಲ್ಕಿ ನಗರಸಭೆ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.







