Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಆಧುನಿಕ ತಾಂತ್ರಿಕತೆಯ...

ಮಂಗಳೂರಿನಲ್ಲಿ ಆಧುನಿಕ ತಾಂತ್ರಿಕತೆಯ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಾಣದ ಯೋಜನೆ - ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ6 Oct 2019 8:11 PM IST
share
ಮಂಗಳೂರಿನಲ್ಲಿ ಆಧುನಿಕ ತಾಂತ್ರಿಕತೆಯ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಾಣದ ಯೋಜನೆ - ಶಾಸಕ ಕಾಮತ್

ಮಂಗಳೂರು: ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮಂಗಳೂರಿನ ಬಂದರಿನಲ್ಲಿ ಆಧುನಿಕ ತಾಂತ್ರಿಕತೆಯಲ್ಲಿ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಿಸುವ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದರು.

ಮಂಗಳೂರು ಮೀನುಗಾರಿಕಾ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕತೆಗೆ ಹೊಂದಿಕೊಳ್ಳುವಂತೆ ಸುಮಾರು 6.25 ಕೋಟಿ ವೆಚ್ಚದಲ್ಲಿ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇವೆ. ಮೀನುಗಾರರ ಹಿತದೃಷ್ಟಿಗೆ ಪೂರಕವಾಗಿರುವ ಈ ಜೆಟ್ಟಿಯು 60 ಮೀಟರ್ ಉದ್ದ ಹಾಗೂ 6 ಮೀಟರ್ ಅಗಲ 1 ಮೀಟರ್ ದಪ್ಪವಾಗಿದ್ದು ಸುಮಾರು 180 ಟನ್ ತೂಕವಿರುತ್ತದೆ. ಮಾತ್ರವಲ್ಲ, 360 ಟನ್ ಭಾರವನ್ನು ಸುಲಭವಾಗಿ ಹೊರುವ ಸಾಮರ್ಥ್ಯ ಇದಕ್ಕಿರುತ್ತದೆ ಎಂದು ಹೇಳಿದರು. 

ಟೆಂಪೋಗಳು ಜೆಟ್ಟಿಯ ಮೂಲಕವೇ ಹಾದು ಮೀನುಗಾರಿಕಾ ಬೋಟ್'ಗಳಲ್ಲಿರುವ ಮೀನುಗಳನ್ನು ತುಂಬಿಸಿಕೊಂಡು ಹೋಗಬಹುದಾದಷ್ಟು ಶಕ್ತಿಯುತವಾಗಿರುತ್ತದೆ. ಮೀನುಗಾರಿಕಾ ಬೋಟುಗಳು ಜೆಟ್ಟಿಯನ್ನು ಸೇರುವ ಸಂಪರ್ಕ ಪ್ರದೇಶದ ಜೆಟ್ಟಿಯ ಸುತ್ತಲೂ ರಬ್ಬರಿನ ಪದರವನ್ನು ಅಳವಡಿಸಲಾಗುತ್ತಿದ್ದು ಬೋಟಿನ ಆವರಣಕ್ಕೆ ಹಾನಿಯಾಗದಂತೆ ತಡೆಗಟ್ಟಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು. 

ಜೆಟ್ಟಿಯ ಒಳಗಡೆ ನೀರು, ವಿದ್ಯುತ್ ಸಂಪರ್ಕಗಳೂ ಕೂಡ ದೊರೆಯಲಿದೆ. ವಿಶೇಷವೆಂದರೆ, ನೀರಿನ ಮಟ್ಟದ ಅನುಗುಣವಾಗಿ ಜೆಟ್ಟಿಯು ತೇಲುತ್ತಿರುತ್ತದೆ. ಜೆಟ್ಟಿಯನ್ನು ಬೇರೆಡೆ ಸಿದ್ಧಪಡಿಸಿ ಸಮುದ್ರದ ಮೂಲಕವೇ ತಂದು ಜೋಡಿಸುವುದರಿಂದ ಕಾಮಗಾರಿಯ ಸಂದರ್ಭದಲ್ಲಿ ಮೀನುಗಾರರಿಗೆ ಯಾವುದೇ ರೀತಿಯ ಸಮಸ್ಯೆಯೂ ಉದ್ಭವವಾಗುವುದಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು ಸರಕಾರದಿಂದ ಅನುಮೋದನೆ ದೊರೆತ ತಕ್ಷಣವೇ ಕಾಮಗಾರಿ ಪ್ರಾರಂಭವಾಗಲಿದೆ. ಆಧುನಿಕತೆಯತ್ತ ಜಗತ್ತು ಹೊರಳುತ್ತಿರುವಾಗ ನಮ್ಮ ಮಂಗಳೂರು ಅದಕ್ಕಿಂತ ಭಿನ್ನವಾಗಿರದೆ, ಸಾಂಸ್ಕೃತಿಕತೆಯನ್ನು ಉಳಿಸಿಕೊಂಡು ಆಧುನಿಕತೆಯತ್ತ ಹೆಜ್ಜೆ ಹಾಕಬೇಕು ಎನ್ನುವುದು ನಮ್ಮ ಗುರಿ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ವೇಳೆ ಜೆಟ್ಟಿಯ ವಿನ್ಯಾಸಕಾರ ಮಿಲಿಂದರ್ ಪ್ರಭು, ಅಮುಲ್, ಮೀನುಗಾರರ ಮುಖಂಡರಾದ ನಿತಿನ್ ಕುಮಾರ್, ರಾಜೇಶ್ ಉಳ್ಳಾಲ್, ಮೋಹನ್ ಬೆಂಗ್ರೆ, ನಿತಿನ್ ಬಂಗೇರ, ಇಬ್ರಾಹಿಂ ಬೆಂಗ್ರೆ, ಸಂದೀಪ್ ಉಳ್ಳಾಲ್, ನವೀನ್, ಬಿಜೆಪಿ ಮುಖಂಡರಾದ ಸಂಜಯ್ ಪ್ರಭು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ವಸಂತ್ ಜೆ ಪೂಜಾರಿ, ವಿನೋದ್ ಮೆಂಡನ್ ಸಹಿತ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X