Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಧುಮೇಹಿಗಳಿಗೆ ಐದು ಅತ್ಯುತ್ತಮ ಅಡುಗೆ...

ಮಧುಮೇಹಿಗಳಿಗೆ ಐದು ಅತ್ಯುತ್ತಮ ಅಡುಗೆ ಎಣ್ಣೆಗಳು

ವಾರ್ತಾಭಾರತಿವಾರ್ತಾಭಾರತಿ6 Oct 2019 8:12 PM IST
share
ಮಧುಮೇಹಿಗಳಿಗೆ ಐದು ಅತ್ಯುತ್ತಮ ಅಡುಗೆ ಎಣ್ಣೆಗಳು

ಅಡುಗೆ ಎಣ್ಣೆಯು ಶರೀರವು ನಾವು ಸೇವಿಸಿದ ಆಹಾರವನ್ನು ನಿರ್ವಹಿಸುವಲ್ಲಿ ಪ್ರಮುಖ ಪಾತ್ರವನ್ನು ಹೊಂದಿದೆ. ಹೃದ್ರೋಗ,ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಕಾಯಿಲೆಗಳಿಂದ ನರಳುತ್ತಿರುವವರ ಪಾಲಿಗೆ ಇದು ಇನ್ನಷ್ಟು ಮಹತ್ವವನ್ನು ಪಡೆದುಕೊಳ್ಳುತ್ತದೆ. ಮಾರುಕಟ್ಟೆಯಲ್ಲಿ ವಿವಿಧ ಅಡಿಗೆ ಎಣ್ಣೆಗಳ ಜೊತೆಯಲ್ಲಿ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡಬಲ್ಲ ಕಲಬೆರಕೆ ಎಣ್ಣೆಗಳೂ ದೊರೆಯುತ್ತವೆ. ಹೀಗಾಗಿ ಅಡಿಗೆ ಎಣ್ಣೆಯನ್ನು ಖರೀದಿಸುವಾಗ ನಮ್ಮ ಆರೋಗ್ಯಕ್ಕೆ ಪೂರಕವಾಗಿರುವುದನ್ನೇ ಆಯ್ಕೆ ಮಾಡಿಕೊಳ್ಳುವುದು ಅಗತ್ಯ.

ಒಂದೇ ಅಡುಗೆ ಎಣ್ಣೆಯನ್ನು ಬಳಸುವ ಬದಲು ಅತ್ಯುತ್ತಮ ಗುಣಮಟ್ಟದ ಕೊಬ್ಬು ಶರೀರಕ್ಕೆ ದೊರೆಯುವಂತಾಗಲು ವಿವಿಧ ಸಸ್ಯಜನ್ಯ ಎಣ್ಣೆಗಳನ್ನು ಬಳಸುವುದು ಒಳ್ಳೆಯದು.. ವಿವಿಧ ಅಡಿಗೆಗಳಿಗಾಗಿ ಬೆಣ್ಣೆ,ತುಪ್ಪ,ಆಲಿವ್ ತೈಲ,ಸಾಸಿವೆ ಎಣ್ಣೆ, ಸೋಯಾ ಎಣ್ಣೆ,ಎಳ್ಳೆಣ್ಣೆ ಮತ್ತು ಕಡಲೆಕಾಯಿ ಎಣ್ಣೆಗಳನ್ನು ಬಳಸಬಹುದು. ಸಂಸ್ಕರಿತ ಎಣ್ಣೆಯ ಬದಲು ಸಂಸ್ಕರಿತವಲ್ಲದ ಅಥವಾ ಕೋಲ್ಡ್ ಪ್ರೆಸ್ಡ್ ಎಣ್ಣೆಯನ್ನು ನೆಚ್ಚಿಕೊಳ್ಳುವುದು ಒಳ್ಳೆಯದು.

ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಹೆಚ್ಚಿನ ಗಮನವನ್ನು ವಹಿಸಬೇಕಾಗುತ್ತದೆ,ಏಕೆಂದರೆ ಆಹಾರದಿಂದಾಗಿ ರಕ್ತದಲ್ಲಿಯ ಸಕ್ಕರೆಯ ಮಟ್ಟದಲ್ಲಿ ವ್ಯತ್ಯಯವು ನೇರವಾಗಿ ಹೃದಯದ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವಲ್ಲಿ ನೆರವಾಗುವ ಐದು ಅಡಿಗೆ ಎಣ್ಣೆಗಳ ಬಗ್ಗೆ ಮಾಹಿತಿಯಿಲ್ಲಿದೆ.

► ಕನೋಲಾ ಎಣ್ಣೆ

ಕನೋಲಾ ಬೀಜಗಳಿಂದ ತಯಾರಿಸಲಾಗುವ ಈ ಎಣ್ಣೆಯು ಒಂದು ವಿಧದ ಒಮೆಗಾ-3 ಫ್ಯಾಟಿ ಆ್ಯಸಿಡ್ ಆಗಿರುವ ಆಲ್ಫಾ-ಲಿನೊಲೆನಿಕ್ ಆಮ್ಲವನ್ನು ಸಮೃದ್ಧವಾಗಿ ಒಳಗೊಂಡಿದೆ. ಅದರಲ್ಲಿ ಆರೋಗ್ಯಕರವಾದ ಮೊನೊಸ್ಯಾಚ್ಯುರೇಟೆಡ್ ಫ್ಯಾಟಿ ಆ್ಯಸಿಡ್‌ಗಳೂ ಇವೆ. ಕನೋಲಾ ಎಣ್ಣೆಯು ಟೈಪ್-2 ಮಧುಮೇಹಿಗಳಲ್ಲಿ ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ಮತ್ತು ಕೆಟ್ಟ ಕೊಲೆಸ್ಟ್ರಾಲ್‌ವನ್ನು ತಗ್ಗಿಸಲು ನೆರವಾಗುತ್ತದೆ ಎನ್ನುವುದನ್ನು ಅಧ್ಯಯನವೊಂದು ತೋರಿಸಿದೆ.

► ಆಲಿವ್ ಎಣ್ಣೆ

ಆಲಿವ್ ಎಣ್ಣೆಯು ಹೃದಯ ಸ್ನೇಹಿಯಾಗಿದ್ದು ಮಧುಮೇಹಿಗಳ ಆರೋಗ್ಯಕ್ಕೆ ಲಾಭದಾಯಕವಾಗಿದೆ. ಅದರಲ್ಲಿರುವ ಟೈರೊಸಾಲ್ ಎಂಬ ಉತ್ಕರ್ಷಣ ನಿರೋಧಕವು ಇನ್ಸುಲಿನ್ ಪ್ರತಿರೋಧ ಮತ್ತು ಮಧುಮೇಹಕ್ಕೆ ಚಿಕಿತ್ಸಕವಾಗಿ ಕೆಲಸ ಮಾಡುತ್ತದೆ.

► ಲಿನ್‌ಸೀಡ್ ಎಣ್ಣೆ

ಲಿನ್‌ಸೀಡ್ ಅಥವಾ ನಾರಗಸೆ ಸಾಕಷ್ಟು ನಾರನ್ನು ಹೊಂದಿದ್ದು,ಇದು ಜೀರ್ಣ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಇದು ಆಹಾರದಲ್ಲಿಯ ಗ್ಲುಕೋಸ್ ಜೀರ್ಣಗೊಳ್ಳಲು ಮತ್ತು ರಕ್ತದಲ್ಲಿ ನಿಧಾನವಾಗಿ ಬಿಡುಗಡೆಗೊಳಿಸಲು ಅವಕಾಶವನ್ನು ಕಲ್ಪಿಸುತ್ತದೆ. ಇದರಿಂದಾಗಿ ರಕ್ತದಲ್ಲಿಯ ಸಕ್ಕರೆ ಮಟ್ಟ ದಿಢೀರ್ ಆಗಿ ಏರಿಕೆಯಾಗುವುದಿಲ್ಲ.

► ಅಕ್ರೋಟ್ ಎಣ್ಣೆ

ಈ ಎಣ್ಣೆಯಲ್ಲಿ ಅಧಿಕ ಪ್ರಮಾಣದಲ್ಲಿರುವ ಟ್ರೈಗ್ಲಿಸರೈಡ್‌ಗಳು ಹೃದಯಸ್ನೇಹಿ ಒಮೆಗಾ-3 ಫ್ಯಾಟಿ ಆ್ಯಸಿಡ್ ಮತ್ತು ಪಾಲಿಅನ್‌ಸ್ಯಾಚ್ಯುರೇಟೆಡ್ ಕೊಬ್ಬುಗಳಾಗಿವೆ. ಇವು ಮಧುಮೇಹಿಗಳಲ್ಲಿ ಇನ್ಸುಲಿನ್ ಸಂವೇದನಾಶೀಲತೆಯನ್ನು ಹೆಚ್ಚಿಸಲು ನೆರವಾಗುತ್ತವೆ. ಮಹಿಳೆಯರು ನಿಯಮಿತವಾಗಿ ಅಕ್ರೋಟ್ ಎಣ್ಣೆಯನ್ನು ಬಳಸುವುದರಿಂದ ಟೈಪ್-2 ಮಧುಮೇಹದ ಅಪಾಯ ಕಡಿಮೆಯಾಗುತ್ತದೆ ಎನ್ನುವುದು ಅಧ್ಯಯನದಿಂದ ತಿಳಿದು ಬಂದಿದೆ.

► ಎಳ್ಳೆಣ್ಣೆ

ಎಳ್ಳೆಣ್ಣೆಯಲ್ಲಿ ವಿಟಾಮಿನ್ ಇ ಮತ್ತು ಇತರ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇವೆರಡೂ ಮಧುಮೇಹಿಗಳಿಗೆ ಲಾಭಕಾರಿಯಾಗಿವೆ. ರೈಸ್ ಬ್ರಾನ್(ಅಕ್ಕಿಯ ತೌಡು) ಎಣ್ಣೆ ಮತ್ತು ಸಾಸಿವೆ ಎಣ್ಣೆಗಳನ್ನು ಜೊತೆಯಾಗಿ ಬಳಸುವುದು ಟೈಪ್-2 ಮಧುಮೇಹಿಗಳಲ್ಲಿ ರಕ್ತದಲ್ಲಿಯ ಸಕ್ಕರೆ ಮಟ್ಟ ಮತ್ತು ಕೊಲೆಸ್ಟ್ರಾಲ್‌ನ್ನು ನಿಯಂತ್ರಿಸುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯ ಮಟ್ಟದ ನಿಯಂತ್ರಣಕ್ಕಾಗಿ ಈ ಆರೋಗ್ಯಕರ ಅಡಿಗೆ ಎಣ್ಣೆಗಳನ್ನು ಬಳಸಬಹುದು. ಆದರೆ ವೈದ್ಯರ ಸಲಹೆ ಪಡೆದುಕೊಂಡೇ ಮುಂದುವರಿಯಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X