ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಉಡುಪಿ, ಅ.6: ಸಂತೆಕಟ್ಟೆ ಓಂಕಾರ ಹೋಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.5ರಂದು ಸಂಜೆ ಓಮಿನಿ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ನಾಗೇಶ (40) ಎಂದು ಗುರುತಿಸಲಾಗಿದೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಓಮಿನಿ ಕಾರು ರಸ್ತೆಯನ್ನು ದಾಟಲು ನಿಂತಿದ್ದ ನಾಗೇಶರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಸಾಗಿಸುವಲ್ಲಿ ಮೃತ ಪಟ್ಟರೆಂದು ತಿಳಿದುಬಂದಿದೆ. ಅಪಘಾತ ನಡೆಸಿದ ಚಾಲಕ ತನ್ನ ಕಾರನ್ನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





