ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಪ್ರಭು ಚವ್ಹಾಣ್

ಯಾದಗಿರಿ, ಅ.6: ಪ್ರವಾಹ ಪೀಡಿತ ಗ್ರಾಮಗಳನ್ನುಶೀಘ್ರದಲ್ಲಿಯೇ ಸ್ಥಳಾಂತರಕ್ಕೆ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಸಚಿವ ಪ್ರಭು ಚವ್ಹಾಣ್ ಭರವಸೆ ನೀಡಿದರು.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆ ವ್ಯಾಪ್ತಿಯೊಳಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧವಾಗಿದ್ದೇನೆ. ಹಾಗಾಗಿಯೇ, ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.
ಬಳಿಕ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಸುರೇಶ್ ಅವರು ನಿವಾಸಕ್ಕೆ ಭೇಟಿ ನೀಡಿದ ಅವರು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವ್ಯಯಕ್ತಿಕವಾಗಿ 11 ಸಾವಿರ ರೂ. ಧನ ಸಹಾಯ ಮಾಡಿದರು. ಸರಕಾರದಿಂದ ದೊರೆಯಬೇಕಾದ ಪರಿಹಾರ ಮೊತ್ತ ಕಲ್ಪಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Next Story





