Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಭಾರತದ ಜೊತೆಗೆ ನವ ‘ರಾಷ್ಟ್ರಪಿತ’ ಕೂಡ...

ನವಭಾರತದ ಜೊತೆಗೆ ನವ ‘ರಾಷ್ಟ್ರಪಿತ’ ಕೂಡ ಹೊಮ್ಮಿದ್ದಾರೆ: ಗಾಂಧೀಜಿ ಮರಿಮೊಮ್ಮಗನ ಆಕ್ರೋಶ

ಕೇಸರಿ ಪಕ್ಷದ ಬಾಯಲ್ಲಿ ‘ಗಾಂಧಿ’, ಮನಸ್ಸಲ್ಲಿ ‘ಗೋಡ್ಸೆ’

ವಾರ್ತಾಭಾರತಿವಾರ್ತಾಭಾರತಿ6 Oct 2019 10:14 PM IST
share
ನವಭಾರತದ ಜೊತೆಗೆ ನವ ‘ರಾಷ್ಟ್ರಪಿತ’ ಕೂಡ ಹೊಮ್ಮಿದ್ದಾರೆ: ಗಾಂಧೀಜಿ ಮರಿಮೊಮ್ಮಗನ ಆಕ್ರೋಶ

ಔರಂಗಾಬಾದ್(ಮಹಾರಾಷ್ಟ್ರ),ಅ.6: ನವಭಾರತದ ಜೊತೆಗೆ ನವ ‘ರಾಷ್ಟ್ರಪಿತ ’ಕೂಡ ಹೊರಹೊಮ್ಮಿದ್ದಾರೆ ಎಂದು ಹೇಳಿರುವ ಮಹಾತ್ಮಾ ಗಾಂಧೀಜಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಅವರು, ಆದರೆ ಮಹಾತ್ಮಾ ಎಂದಿಗೂ ಇಂತಹ ರಾಷ್ಟ್ರದ ಪಿತರಾಗುತ್ತಿರಲಿಲ್ಲ ಎಂದಿದ್ದಾರೆ.

ಮಧ್ಯಪ್ರದೇಶದ ರೇವಾದಲ್ಲಿ ಇತ್ತೀಚಿಗೆ ನಡೆದಿರುವ ಮಹಾತ್ಮಾರ ಚಿತಾಭಸ್ಮ ಕುಂಡದ ಕಳ್ಳತನ ಮತ್ತು ಅವರ ಪೋಸ್ಟ್‌ ‌ನಲ್ಲಿ ಕಪ್ಪುಬಣ್ಣದಿಂದ ದೇಶದ್ರೋಹಿ ಎಂದು ಬರೆದಿದ್ದ ಘಟನೆಯನ್ನು ‘ಅಪಚಾರ’ ಎಂದು ಬಣ್ಣಿಸಿದ ಅವರು,ಈ ಬಗ್ಗೆ ಗಾಢಮೌನ ವಹಿಸಿರುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ತರಾಟೆಗೆತ್ತಿಕೊಂಡರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ತುಷಾರ್ ಗಾಂಧಿ,ಮಹಾತ್ಮಾ ಗಾಂಧಿಯವರ ಚಿತಾಭಸ್ಮ ಕುಂಡದ ಕಳ್ಳತನಕ್ಕಿಂತಲೂ ಸರಕಾರಗಳ ಮೌನ ಹೆಚ್ಚಿನ ನೋವನ್ನುಂಟು ಮಾಡಿದೆ ಎಂದರು.

ಈ ಘಟನೆಯು ಮಹಾತ್ಮಾರ ವರ್ಚಸ್ಸಿಗೆ ಕುಂದು ತರಲು ಇಂದು ಮತ್ತು ಕಳೆದ ಏಳು ದಶಕಗಳಿಂದ ಆಳುತ್ತಿರುವ ರಾಜಕೀಯ ಪಕ್ಷಗಳ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಹೇಳಿದರು.

ಗಾಂಧೀಜಿಯವರ 150ನೇ ಜಯಂತಿ ಸಂದರ್ಭದಲ್ಲಿಯೇ ನಡೆದಿರುವ ಘಟನೆಯ ಕುರಿತು ರಾಜಕೀಯ ಪಕ್ಷಗಳು ಮತ್ತು ಮಾಧ್ಯಮಗಳ ಮೌನ ಬಹಳಷ್ಟನ್ನು ಹೇಳುತ್ತಿದೆ. ಚಿತಾಭಸ್ಮ ಕುಂಡವನ್ನು ವಾಪಸ್ ಪಡೆದುಕೊಂಡು ಅದನ್ನು ವಿಸರ್ಜಿಸುವಂತೆ ತಾನು ಸರಕಾರವನ್ನು ಕೋರುತ್ತಿದ್ದೇನೆ. ಏಕೆಂದರೆ ಗಾಂಧೀಜಿಯವರ ಮರಿಮೊಮ್ಮಗನಾಗಿ ತನಗೆ ಮತ್ತು ಅವರ ತತ್ತ್ವವನ್ನು ಅನುಸರಿಸುತ್ತಿರುವವರಿಗೆ ಇದರಿಂದ ತುಂಬ ನೋವಾಗಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,ಸರಕಾರವು ಆವರಣವನ್ನು ತೆರವುಗೊಳಿಸುವಂತೆ ಅಹ್ಮದಾಬಾದ್‌ನ ಸಾಬರಮತಿ ಆಶ್ರಮದ ನಿವಾಸಿಗಳಿಗೆ ನೋಟಿಸ್‌ಗಳನ್ನು ಜಾರಿಗೊಳಿಸುತ್ತಿದೆ. ಅಲ್ಲಿ ಗಾಂಧೀಜಿಯವರ ಬೃಹತ್ ಸ್ಮಾರಕವನ್ನು ನಿರ್ಮಿಸಲಾಗುವುದು ಎಂಬ ಕಾರಣವನ್ನು ನೀಡಲಾಗುತ್ತಿದೆ. ಆದರೆ ಸಾಬರಮತಿಗೆ ಭೇಟಿ ನೀಡುವ ಪ್ರತಿಯೊಬ್ಬರೂ ‘ಹೃದಯ ಕುಂಜ’(ಹಾಲಿ ಆಶ್ರಮ)ದ ಎದುರು ತಲೆ ಬಾಗಿ ನಮಿಸುತ್ತಿರುವಾಗ ನೂತನ ಸ್ಮಾರಕದ ಅಗತ್ಯವೇನಿದೆ ಎಂದು ಮರುಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X