Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಿಂದ ಸಮರ್ಪಕವಾಗಿ ನೆರೆ ಸಮಸ್ಯೆ...

ರಾಜ್ಯದಿಂದ ಸಮರ್ಪಕವಾಗಿ ನೆರೆ ಸಮಸ್ಯೆ ನಿರ್ವಹಣೆ-ನಳಿನ್ ಕುಮಾರ್ ಕಟೀಲ್

24X7 ಕುಡಿಯುವ ನೀರು ಯೋಜನೆ ಪ್ರಾರಂಭೋತ್ಸವ

ವಾರ್ತಾಭಾರತಿವಾರ್ತಾಭಾರತಿ7 Oct 2019 5:41 PM IST
share
ರಾಜ್ಯದಿಂದ ಸಮರ್ಪಕವಾಗಿ ನೆರೆ ಸಮಸ್ಯೆ ನಿರ್ವಹಣೆ-ನಳಿನ್ ಕುಮಾರ್ ಕಟೀಲ್

ಪುತ್ತೂರು: ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು ನೆರೆ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದ್ದು, ಕೇಂದ್ರದ ಅನುದಾನಕ್ಕೆ ಕಾಯದ ಮುಖ್ಯ ಮಂತ್ರಿಗಳು 3 ಸಾವಿರ ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆಗೊಳಿಸಿದ್ದು, ಇದೀಗ ಕೇಂದ್ರ ಸರ್ಕಾರವು 1200 ಕೋಟಿ ರೂ. ಮಧ್ಯಂತರ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಸೋಮವಾರ ಪುತ್ತೂರು ನಗರಸಭೆ ಹಾಗೂ ಕೆಯುಐಡಿಎಫ್‍ಸಿ ಇವುಗಳ ಜಂಟೀ ಆಶ್ರಯದಲ್ಲಿ ಎಡಿಬಿ ಯೋಜನೆಯಡಿ ರೂ.113 ಕೋಟಿ ವೆಚ್ಚದಲ್ಲಿ ಪುತ್ತೂರು ನಗರಕ್ಕೆ ನಿರಂತರ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಪ್ರಾರಂಭೊತ್ಸವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ನೆರೆಯಿಂದ ಸಂತ್ರಸ್ತರಾಗಿ ಮನೆ ಕಳೆದುಕೊಂಡಿರುವ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕಾಗಿ ರೂ. 5 ಲಕ್ಷ ನೆರವು ನೀಡುವ ಉತ್ತಮ ನಿರ್ಧಾರವನ್ನು ಮುಖ್ಯಮಂತ್ರಿಗಳು ಕೈಗೊಂಡಿದ್ದು, ಈ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಈ ಪೈಕಿ ರೂ. 1 ಲಕ್ಷ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಉಳಿದ ಎಲ್ಲಾ ಹಣ ಶೀಘ್ರ ಜಮೆಯಾಗಲಿದೆ. ಸಂತ್ರಸ್ತ ಕುಟುಂಬಕ್ಕೆ ರೂ. 10 ಸಾವಿರ ತಕ್ಷಣದ ಪರಿಹಾರ ಒದಗಿಸಿದ್ದು ಎಲ್ಲಾ ಶಾಸಕರ ಮೂಲಕ 4 ಲಕ್ಷ ಕುಟುಂಬಗಳಿಗೆ ಈ  ಅನುದಾನವನ್ನು ವಿತರಣೆ ಮಾಡಲಾಗಿದೆ. ಅಲ್ಲದೆ ಸಂತ್ರಸ್ತ ಕುಟುಂಬಗಳಿಗೆ ಪ್ರತಿ ತಿಂಗಳಿಗೆ ರೂ. 5 ಸಾವಿರ ಬಾಡಿಗೆ ರೂಪದಲ್ಲಿ ಆಯಾ ಪ್ರದೇಶದ ಎಸಿ ಮತ್ತು ಡಿಸಿಗಳ ಮೂಲಕ ವಿತರಣೆ ಮಾಡಲಾಗಿದೆ. ಇದೀಗ ಜಮೀನು ಕಳೆದುಕೊಂಡಿರುವ ಕುಟುಂಬಗಳಿಗೆ ಕಳೆದುಕೊಂಡಷ್ಟೇ ಜಮೀನು ಒದಗಿಸಿ ಕೊಡುವ ಬಗ್ಗೆ ತೀರ್ಮಾನಿಸಲಾಗಿದ್ದು, ಮೂಡಿಗೆರೆಯಲ್ಲಿ 350 ಎಕ್ರೆ ಜಮೀನು ಸಂತ್ರಸ್ತರಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.

ದೇಶದ 13 ರಾಜ್ಯಗಳಲ್ಲಿ ನರೆ ಸಮಸ್ಯೆ ಉಂಟಾಗಿದೆ. ಈ ಪೈಕಿ ಕರ್ನಾಟಕ ಸೇರಿದಂತೆ 12 ರಾಜ್ಯಗಳಿಗೆ ಕೇಂದ್ರದ ತಂಡವು ಆಗಮಿಸಿ ಸಮೀಕ್ಷೆ ನಡೆಸಿದೆ. ಈ ಪೈಕಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ರೂ. 1200 ಕೋಟಿ ಹಣವನ್ನು ಬಿಡುಗಡೆಗೊಳಿಸಿದೆ ಎಂದು ತಿಳಿಸಿದರು. ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಸರ್ಕಾರದಿಂದ ರೂ. 45 ಕೋಟಿ ಬಿಡುಗಡೆಯಾಗಿದ್ದು, ಪುತ್ತೂರಿನ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆಯ ಕಾಮಗಾರಿಗೆ ರೂ. 1.60 ಲಕ್ಷ ಅನುದಾನ ಮಂಜೂರುಗೊಂಡಿದೆ. ರಸ್ತೆ ಕಾಮಗಾರಿ ತಕ್ಷಣವೇ ಆರಂಭಗೊಳ್ಳಲಿದೆ ಎಂದರು. 

ನಗರಾಡಳಿತಕ್ಕೆ ಆಡಳಿತ ಮಂಡಳಿ ನೇಮಕಕ್ಕೆ ಕೆಲವೊಂದು ಕಾನೂನು ಸಮಸ್ಯೆಗಳಿಂದಾಗಿ ವಿಳಂಭವಾಗಿದೆ. ಈ ಬಗ್ಗೆ ತಾನು ಈಗಾಗಲೇ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿದ್ದೇನೆ. ನ್ಯಾಯಾಲದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ, ಅತಿ ಶೀಘ್ರದಲ್ಲಿ ನಗರಸಭಾ ಸದಸ್ಯರಿಗೆ ಅಧಿಕಾರದ ಹಕ್ಕು ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳು ರಾಜ್ಯದ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಜನರ ಮೂಲಸೌಕರ್ಯ ಪೂರೈಕೆಯ ಕುರಿತು ನೆರೆ ಸಮಸ್ಯೆಯ ನಡುವೆಯೂ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ನಗರಗಳಲ್ಲಿ ಕುಡಿಯುವ ನೀರು ಪೂರೈಕೆ, ತ್ಯಾಜ್ಯ ವಿಲೇವಾರಿ ಅಸಮರ್ಪ ಕವಾಗಿರುವುದಕ್ಕೆ ನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಗಳು ಕಾರಣವಾಗಿದೆ. ನಗರ ಬೆಳವಣಿಗೆಯ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟತೆ ಇರಬೇಕು. ಅಧಿಕಾರಿಗಳು ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ ಬಗ್ಗೆ ವ್ಯವಸ್ಥೆಗಳಿಲ್ಲದೆ ಅನಿಯಮಿತವಾಗಿ ಫ್ಲಾಟ್ ನಿರ್ಮಾಣಕ್ಕೆ ಅವಕಾಶ ನೀಡುತ್ತಿದ್ದಾರೆ. ಇದರಿಂಗಾಗಿ ಸಮಸ್ಯೆ ಉಲ್ಬಣಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ ಪುತ್ತೂರು ನಗರದಲ್ಲಿ ಬಹುತೇಕ ಮಂದಿಗೆ ಈಗಾಗಲೇ 24 ಗಂಟೆಗಳ ನೀರು ಪೂರೈಕೆಯಾಗುತ್ತಿದೆ. ನೀರು ಸಿಗದ ಮಂದಿಗೆ ಈ ಯೋಜನೆ ಸಹಕಾರಿಯಾಗಲಿದೆ. ನಗರಸಭೆಯಲ್ಲಿ ಮುಂದಿನ 25 ವರ್ಷಗಳಿಗೆ ಪೂರಕ ವಾಗುವಂತೆ ಕುಡಿಯುವ ನೀರು ಯೋಜನೆಯನ್ನು ಸಿದ್ಧಪಡಿಸಲಾಗಿದೆ. ನಗರದ ಜನತೆ 1 ಲಕ್ಷಕ್ಕೆ ಏರಿದರೂ ಯೋಜನೆಯಿಂದ ಕುಡಿಯುವ ನೀರಿಗೆ ಸಮಸ್ಯೆಗಳು ಆಗಲಾರದು ಎಂದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪತ್ತೂರು ಉಪ ವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಗುತ್ತಿಗೆದಾರ ಪ್ರಮೋದ್ ಉಪಸ್ಥಿತರಿದ್ದರು. 

ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ ಸ್ವಾಗತಿಸಿದರು. ಕೆಯುಐಡಿಎಫ್‍ಸಿಯ ಸಹಾಯಕ ಅಭಿಯಂತರ ಮಾದೇಶ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X