ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ : ಆರೋಪಿ ಸೆರೆ
ಬಂಟ್ವಾಳ : ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವ ಆರೋಪದ ಮೇರೆಗೆ ಯುವಕನೋರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಲ್ಲೂರಿನ ಉಳಾಯಿಬೆಟ್ಟು ಸಮೀಪದ ಅಝರುದ್ದೀನ್ (30) ಬಂಧಿತ ಆರೋಪಿ.
ಆರೋಪಿ ಅಝರುದ್ದೀನ್ ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಯುವತಿಯನ್ನು ಕಳೆದ 4 ವರ್ಷಗಳಿಂದ ಪ್ರೀತಿಸುತ್ತಿದ್ದನು. ಮಾತ್ರವಲ್ಲ, ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದನು. ಬಳಿಕ ಅಝರುದ್ದೀನ್ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾರೆ. ಇದೀಗ ಯುವಕನನ್ನು ಕುಳೂರಿನಲ್ಲಿ ಬಂಧಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





