Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪ-ಸಿದ್ದರಾಮಯ್ಯ ಒಗ್ಗೂಡಿ ಹೊಸ...

ಯಡಿಯೂರಪ್ಪ-ಸಿದ್ದರಾಮಯ್ಯ ಒಗ್ಗೂಡಿ ಹೊಸ ಪಕ್ಷ ಸ್ಥಾಪಿಸಲಿ: ಮಹಾದೇಶ್ವರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ9 Oct 2019 7:53 PM IST
share
ಯಡಿಯೂರಪ್ಪ-ಸಿದ್ದರಾಮಯ್ಯ ಒಗ್ಗೂಡಿ ಹೊಸ ಪಕ್ಷ ಸ್ಥಾಪಿಸಲಿ: ಮಹಾದೇಶ್ವರ ಸ್ವಾಮೀಜಿ

ಬಾಗಲಕೋಟೆ, ಅ.9: ರಾಜ್ಯ ಅಭಿವೃದ್ಧಿಯಾಗಬೇಕಾದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸಬೇಕೆಂದು ಕೂಡಲಸಂಗಮದ ಬಸವ ಧರ್ಮ ಪೀಠದ ಉತ್ತರಾಧಿಕಾರಿ ಮಹಾದೇಶ್ವರ ಸ್ವಾಮೀಜಿ ಸಲಹೆ ನೀಡಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತಿಲ್ಲ. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಜನನಾಯಕರಾಗಿದ್ದಾರೆ. ಇಬ್ಬರೂ ಸೇರಿ ಪಕ್ಷ ಸ್ಥಾಪಿಸಿದರೆ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಸಾಧ್ಯವಿದೆ ಎಂದರು.

ಪ್ರಾದೇಶಿಕ ಪಕ್ಷಗಳಿಂದಲೇ ತಮಿಳುನಾಡಿನಲ್ಲಿ ಅಭಿವೃದ್ಧಿಯಾಗಿದೆ. ಕರ್ನಾಟಕದಲ್ಲಿ ಈ ಇಬ್ಬರೂ ನಾಯಕರು ಒಗ್ಗೂಡಿ ಹೊಸ ಪಕ್ಷ ರಚಿಸಬೇಕು. ಇಬ್ಬರೂ ನಾಯಕರು ಮಾತುಕತೆ ನಡೆಸಿ ಪಕ್ಷ ಸ್ಥಾಪನೆಗೆ ಮುಂದಾಗಬೇಕು. ಇವರಿಗೆ ನಮ್ಮ ಬೆಂಬಲ ಹಾಗೂ ಜನತೆಯ ಬೆಂಬಲ ಸದಾ ಇರುತ್ತದೆ ಎಂದು ಅವರು ಹೇಳಿದ್ದಾರೆ.

'ಈಶ್ವರಪ್ಪರ ಜಾತಿ ಯಾವುದು': ನಾನು ಕುರುಬನಲ್ಲ, ಹಿಂದೂ ಅಲ್ಲವೆಂದು ಸಚಿವ ಈಶ್ವರಪ್ಪ ಹೇಳಿಕೊಂಡಿದ್ದಾರೆ. ಕೂಡಲ ಸಂಗಮದ ಶರಣ ಮೇಳದಲ್ಲಿ ನಾನು ಬಸವಣ್ಣನವರ ಅನುಯಾಯಿ ಎಂದು ಹೇಳಿಕೊಳ್ಳುವ ಅವರು, ಜಾತಿಗೊಬ್ಬ ಸ್ವಾಮೀಜಿಯ ಕಾಲು ಮುಗಿಯಬೇಕಾಗಿದೆ ಎಂದು ಹೇಳಿದ್ದಾರೆ. ಹಾಗಾದರೆ ಅವರು ಕುರುಬ ಕೋಟಾದಲ್ಲಿ ಸಚಿವ ಸ್ಥಾನ ಪಡೆದಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಜಾತಿಗಳನ್ನು ರೂಪಿಸಿದವರು ಸ್ವಾಮೀಜಿಗಳಲ್ಲ. ಜಾತಿಗಳನ್ನು ನಿರ್ಮಿಸಿ ರಾಜಕಾರಣದ ಲಾಭ ಪಡೆಯುವವರು ರಾಜಕಾರಣಿಗಳು. ಚುನಾವಣೆ ಬಂದಾಗ ಇವರಿಗೆ ಜಾತಿ ನೆನಪಾಗುತ್ತದೆ. ಚುನಾವಣೆ ಮುಗಿದ ನಂತರ ಯಾವ ಜಾತಿಯವರೂ ಅಲ್ಲ ಎಂದು ಹೇಳಿಕೊಳ್ಳುತ್ತಾರೆ ಎಂದು ಈಶ್ವರಪ್ಪರನ್ನು ಟೀಕಿಸಿದರು.

ಯಡಿಯೂರಪ್ಪ ಬಗ್ಗೆ ಪ್ರಧಾನಿ ಮೋದಿಯವರು ಒಲ್ಲದ ಮನಸ್ಸಿನಿಂದ ಸ್ಪಂದಿಸುತ್ತಿದ್ದಾರೆ ಎನಿಸುತ್ತಿದೆ. ಬಿಹಾರಕ್ಕೆ ಭೇಟಿ ನೀಡಿ ಹಣ ಬಿಡುಗಡೆ ಮಾಡುವ ಪ್ರಧಾನಿ ರಾಜ್ಯದ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಾರೆ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ನೆರೆ ಪರಿಹಾರ ಸಮರ್ಪಕವಾಗಿ ಬಿಡುಗಡೆಯಾಗಿಲ್ಲವೆಂದು ಅವರು ಬೇಸರ ವ್ಯಕ್ತಪಡಿಸಿದರು.

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಈಗಾಗಲೇ ರಾಜ್ಯದಲ್ಲಿ ಸಮಾವೇಶ ನಡೆಸಲಾಗಿದೆ. ತೆಲಂಗಾಣ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶದಲ್ಲಿ ಮಾನ್ಯತೆಗೆ ಒತ್ತಾಯಿಸಿ ಸಮಾವೇಶ ಆಯೋಜಿಸಲಾಗುತ್ತದೆ. ಈ ಬಗ್ಗೆ ಬಸವಕಲ್ಯಾಣದಲ್ಲಿ ನಡೆಯಲಿರುವ ಕಲ್ಯಾಣ ಪರ್ವ ಸಮ್ಮೆಳನದಲ್ಲಿ ಚರ್ಚಿಸಲಾಗುತ್ತದೆ. ನಾವು ಹಿಂದೂ ಧರ್ಮದಲ್ಲಿದ್ದುಕೊಂಡೇ ಮಾನ್ಯತೆ ಕೇಳುತ್ತಿದ್ದೇವೆ ಎಂದು ಅವರು ವಿವರಿಸಿದರು.

ಲಿಂಗಾಯತ ಧರ್ಮವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಯಡಿಯೂರಪ್ಪ ಬೇರೆ ಪಕ್ಷ ಸ್ಥಾಪಿಸಲು ಮುಂದಾಗಬೇಕು. ಶಾಸಕ ಯತ್ನಾಳ್ ಸಂತ್ರಸ್ತರ ಪರವಾಗಿ ಮಾತನಾಡಿದ್ದಕ್ಕೆ ಬಿಜೆಪಿಯಿಂದ ನೊಟೀಸ್ ನೀಡಲಾಗಿದೆ. ಯತ್ನಾಳ್‌ರಂತಹ ಹತ್ತಾರು ನಾಯಕರು ಸಮಾಜಕ್ಕೆ ಬೇಕಾಗಿದ್ದಾರೆ ಎಂದು ಅವರು ಹೇಳಿದರು.

ಸಂಘ ಪರಿವಾರವೇ ಲಿಂಗಾಯತ ಧರ್ಮ ಒಡೆಯುತ್ತಿದೆ. ಯಡಿಯೂರಪ್ಪ ಆರೆಸ್ಸೆಸ್ ಕಪಿಮುಷ್ಠಿಯಲ್ಲಿದ್ದಾರೆ. ಅವರ ಬೆನ್ನಿಗೆ ಕೆಲವರು ಚೂರಿ ಹಾಕುತ್ತಿದ್ದಾರೆ. ಅವರು ಯಾರು ಎಂದು ಈಗ ಹೇಳುವುದಿಲ್ಲ.
-ಮಹಾದೇಶ್ವರ ಸ್ವಾಮೀಜಿ, ಬಸವ ಧರ್ಮ ಪೀಠದ ಉತ್ತರಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X