ಅ.13: ವಾಲ್ಮೀಕಿ ಜಯಂತಿ
ಮಂಗಳೂರು, ಅ.9: ದ.ಕ. ಜಿಲ್ಲಾಡಳಿತ, ಜಿಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ವಾಲ್ಮೀಕಿ-ನಾಯಕ ಅಸೋಸಿಯೇಶನ್ಗಳ ಸಂಯುಕ್ತ ಆಶ್ರಯದಲ್ಲಿ ಅ.13ರಂದು ಬೆಳಗ್ಗೆ 10:30ಕ್ಕೆ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
Next Story