ಚಿಕ್ಕಮಗಳೂರು : ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ
![ಚಿಕ್ಕಮಗಳೂರು : ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ ಚಿಕ್ಕಮಗಳೂರು : ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ](https://www.varthabharati.in/sites/default/files/images/articles/2019/10/11/214185-1570781627.jpeg)
ಚಿಕ್ಕಮಗಳೂರು : ಹೋಟೆಲ್ ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ನಡೆದಿದೆ.
ಸಿಂಗಟಗೆರೆ ಗ್ರಾಮದ ಸುರೇಶ್ ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಸುರೇಶ್, ಗೀತಾಮ್ಮ, ತಿಪ್ಪೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story