ಕದ್ರಿ ಗೋಪಾಲನಾಥ್ ನಿಧನಕ್ಕೆ ಪಲಿಮಾರುಶ್ರೀ ಸಂತಾಪ
ಉಡುಪಿ, ಅ.11:ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಸಂಗೀತ ಕುಟುಂಬದಲ್ಲಿ ಜನಿಸಿ ಹಿರಿಯರಿಂದ ಬಳುವಳಿಯಾಗಿ ಬಂದ ನಾದಸ್ವರ ವಾದನದೊಂದಿಗೆ ವಿದೇಶಿ ವಾದ್ಯವಾದ ಸ್ಯಾಕ್ಸೋಪೋನ್ ವಾದ್ಯವನ್ನು ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಕಠಿಣ ಪರಿಶ್ರಮದಿಂದ ಸಾಧನೆ ಮಾಡಿ ದೇಶ ವಿದೇಶಗಳಲ್ಲಿ ಕಛೇರಿ ನಡೆಸಿ ಅಪಾರ ಅಭಿಮಾನಿಗಳನ್ನು ಗಳಿಸಿದ, ನಮ್ಮ ಪ್ರಥಮ ಪರ್ಯಾಯಾವಧಿಯಲ್ಲಿ ಆಸ್ಥಾನ ವಿದ್ವಾನ್ ಗೌರವಕ್ಕೆ ಪಾತ್ರರಾದ, ಸರಳ ಸಜ್ಜನಿಕೆಯ ಕಲಾವಿದರಾದ ಪದ್ಮಶ್ರೀ ಪುರಸ್ಕೃತ ಕದ್ರಿ ಗೋಪಾಲನಾಥ್ ನಿಧನರಾಗಿರುವುದು ನಮಗೆ ದುಃಖ ತಂದಿದೆ. ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿ ಕೊಟ್ಟು,ಅವರ ಆತ್ಮಕ್ಕೆ ಸದ್ಗತಿಯಾಗಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುತ್ತೇವೆ ಎಂದವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
Next Story





