Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವಿ ಮಹಿಳಾ ಸ್ಕ್ವಾಶ್ ರ್ಯಾಕೆಟ್...

ವಿವಿ ಮಹಿಳಾ ಸ್ಕ್ವಾಶ್ ರ್ಯಾಕೆಟ್ ಚಾಂಪಿಯನ್‌ಷಿಪ್

ವಾರ್ತಾಭಾರತಿವಾರ್ತಾಭಾರತಿ11 Oct 2019 6:52 PM IST
share
ವಿವಿ ಮಹಿಳಾ ಸ್ಕ್ವಾಶ್ ರ್ಯಾಕೆಟ್ ಚಾಂಪಿಯನ್‌ಷಿಪ್

ಉಡುಪಿ, ಅ.11: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಆಶ್ರಯದಲ್ಲಿ 2019-20ನೇ ಸಾಲಿನ ಅಖಿಲ ಭಾರತ ಅಂತರ ವಿವಿ ಮಹಿಳಾ ಸ್ಕ್ವಾಶ್ ರ್ಯಾಕೆಟ್ ಚಾಂಪಿಯನ್‌ಷಿಪ್ ಅ.16ರಿಂದ 18ರವರೆಗೆ ಮಣಿಪಾಲದ ಮೆರೆನಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ತಿಳಿಸಿದ್ದಾರೆ.

ಮಣಿಪಾಲದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮಣಿಪಾಲದಲ್ಲಿ ಅಖಿಲ ಭಾರತ ಅಂತರ ವಿವಿ ಕ್ರೀಡಾಸ್ಪರ್ಧೆಯೊಂದು ನಡೆಯುತ್ತಿರುವುದು ಇದೇ ಮೊದಲು ಎಂದವರು ತಿಳಿಸಿದರು. ಹೊಸದಿಲ್ಲಿಯ ಭಾರತೀಯ ವಿವಿಗಳ ಸಂಸ್ಥೆ (ಎಐಯು) ಈ ಸ್ಪರ್ಧೆಯನ್ನು ನಡೆಸುವ ಜವಾಬ್ದಾರಿಯನ್ನು ಮಾಹೆಗೆ ನೀಡಿದೆ ಎಂದೂ ಡಾ.ಬಲ್ಲಾಳ್ ತಿಳಿಸಿದರು.

ಅಖಿಲ ಭಾರತ ಮಟ್ಟದಿಂದ ಒಟ್ಟು 30ವಿವಿಗಳು ಭಾಗವಹಿಸುವುದನ್ನು ಈಗಾಗಲೇ ಖಚಿತ ಪಡಿಸಿವೆ. ಒಟ್ಟು 200 ಮಂದಿ ಆಟಗಾರರು, 30 ತಂಡಗಳ ಮ್ಯಾನೇಜರ್ ಮತ್ತು ಕೋಚ್‌ಗಳು ಈ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿದ್ದಾರೆ. ಟೂರ್ನಿಗಾಗಿ ಮೆರೆನಾ ಒಳಾಂಗಣ ಕ್ರೀಡಾಂಗಣದಲ್ಲಿ ಒಟ್ಟು ನಾಲ್ಕು ಸ್ವಾಶ್ ಕೋರ್ಟ್‌ಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಕಳೆದ ವರ್ಷ ದಿಲ್ಲಿ ವಿವಿಯಲ್ಲಿ ನಡೆದ ಈ ಟೂರ್ನಿಯನ್ನು ಜಯಿಸಿದ ಮದರಾಸು ವಿವಿ, ಹಾಲಿ ರಾಷ್ಟ್ರೀಯ ಚಾಂಪಿಯನ್ ತಂಡವೆನಿಸಿಕೊಂಡಿದೆ. ಮಾಹೆ ರನ್ನರ್ ಅಪ್ ತಂಡವಾಗಿದ್ದರೆ, ದಿಲ್ಲಿ ವಿವಿ ಮೂರನೇ ಹಾಗೂ ರಾಯ್‌ಪುರದ ಪಂಡಿತ್ ರವಿಶಂಕರ್ ಶುಕ್ಲಾ ವಿವಿ ನಾಲ್ಕನೇ ಸ್ಥಾನಿಯಾಗಿದೆ. ಈ ಬಾರಿ ಮೇಲಿನ ನಾಲ್ಕೂ ತಂಡಗಳು ನೇರವಾಗಿ ಕ್ವಾರ್ಟರ್ ಫೈನಲ್‌ನಲ್ಲಿ ಆಡುವ ಅರ್ಹತೆ ಪಡೆದಿವೆ ಎಂದರು.

ಈ ಬಾರಿ ಟೂರ್ನಿಯನ್ನು ಜಯಿಸುವ ಗುರಿಯನ್ನು ಹೊಂದಿರುವ ಮಾಹೆ ವಿವಿ ಆರು ಮಂದಿ ಆಟಗಾರರ ತಂಡವನ್ನು ಕಣಕ್ಕಿಳಿಸಲಿದೆ. ಇವರಲ್ಲಿ ತಲಾ ಇಬ್ಬರು ಕೆಎಂಸಿ ಮಣಿಪಾಲ ಹಾಗೂ ಎಂಐಟಿ ಮಣಿಪಾಲದ ಆಟಗಾರರಾದರೆ, ಇನ್ನಿಬ್ಬರು ಮಂಗಳೂರು ಕೆಎಂಸಿಯ ಆಟಗಾರರು ಎಂದು ಡಾ.ಬಲ್ಲಾಳ್ ತಿಳಿಸಿದರು.

ಚಾಂಪಿಯನ್‌ಷಿಪ್‌ನ್ನು ಅ.16ರ ಬುಧವಾರ ಬೆಳಗ್ಗೆ 10:00ಗಂಟೆಗೆ ಮೆರೆನಾ ಒಳಾಂಗಣ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಉದ್ಘಾಟಿಸಲಿದ್ದಾರೆ. ಭಾರತದ ಅಂತಾರಾಷ್ಟ್ರೀಯ ಸ್ವಾಶ್ ಆಟಗಾರ ಹಾಗೂ ಭಾರತದ ಮೊದಲ ಏಷ್ಯನ್ ಜೂನಿಯರ್ ಸ್ಕ್ವಾಶ್ ರ್ಯಾಕೆಟ್ ಚಾಂಪಿಯನ್ ರವಿ ದೀಕ್ಷಿತ್ ಮುಖ್ಯ ಅತಿಥಿಯಾಗಿದ್ದು, ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಹೆ ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಮಾಹೆ ಕ್ರೀಡಾ ಕಾರ್ಯದರ್ಶಿ ಡಾ.ವಿನೋದ್ ನಾಯಕ್, ಜಂಟಿ ಕಾರ್ಯದರ್ಶಿ ಶೋಭಾ ಎಂ.ಇ., ಫೆಡ್ಡಿ ಡೇವಿಡ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X