ಐಎಂಎ ವಂಚನೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು, ಮೂವರ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು, ಅ.11: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಓರ್ವ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಮೂವರ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದೆ.
ಐಎಂಎ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಾಲ್ವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಆರೋಪಿಗಳಾದ ನಿಜಾಮುದ್ದೀನ್, ಅಫ್ಸರ್ ಪಾಶಾ, ಮುಹಮ್ಮದ್ ಹನೀಫ್ ಅಫ್ಸರ್ ಅಜೀಜ್‌ಗೆ ಜಾಮೀನು ನಿರಾಕರಿಸಿದೆ. ಪ್ರಕರಣದ ಮತ್ತೋರ್ವ ಆರೋಪಿ ಸೈಯ್ಯದ್ ಮುಜಾಹಿದ್‌ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
Next Story