Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಕ್ಕೆ ಪ್ರಧಾನಿಯಿಂದ ಮಲತಾಯಿ ಧೋರಣೆ:...

ರಾಜ್ಯಕ್ಕೆ ಪ್ರಧಾನಿಯಿಂದ ಮಲತಾಯಿ ಧೋರಣೆ: ಆರ್.ಬಿ.ತಿಮ್ಮಾಪುರ

ವಾರ್ತಾಭಾರತಿವಾರ್ತಾಭಾರತಿ11 Oct 2019 10:42 PM IST
share
ರಾಜ್ಯಕ್ಕೆ ಪ್ರಧಾನಿಯಿಂದ ಮಲತಾಯಿ ಧೋರಣೆ: ಆರ್.ಬಿ.ತಿಮ್ಮಾಪುರ

ಬೆಂಗಳೂರು, ಅ.11: ರಾಜ್ಯದಲ್ಲಿ ಪ್ರವಾಹದಿಂದಾಗಿ ಬೆಳೆ ಬೆಳೆಯುತ್ತಿದ್ದ 22 ಲಕ್ಷ ಎಕರೆ ಜಮೀನು ಹಾಳಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ರೈತರಿಗೆ ಯಾವುದೇ ಆತ್ಮಸ್ಥೈರ್ಯವನ್ನು ತುಂಬಲಿಲ್ಲ. ಆದರೆ, ಬಿಹಾರದ ಜನತೆಗೆ ಟ್ವೀಟ್ ಮೂಲಕ ಆತ್ಮಸ್ಥೈರ್ಯವನ್ನು ತುಂಬುವ ಮೂಲಕ ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. 

ಶುಕ್ರವಾರ ವಿಧಾನ ಪರಿಷತ್‌ನಲ್ಲಿ ನಿಯಮ 68ರಡಿಯಲ್ಲಿ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಪ್ರವಾಹದಿಂದಾಗಿ ಮನೆ, ಜಮೀನು, ಕೃಷಿ ಸಾಮಗ್ರಿಗಳನ್ನು ಕಳೆದುಕೊಂಡಿದ್ದಾರೆ, ಇದಕ್ಕೆ ಪರಿಹಾರ ನೀಡಿ ಎಂದು ಪ್ರಧಾನಿ ಅವರನ್ನು ಭೇಟಿ ಆಗಲು ಹೋದರೆ ಅವರಿಗೆ ಅವಕಾಶ ನೀಡಿಲ್ಲ. ಪ್ರವಾಹ ಬಿಹಾರ ರಾಜ್ಯಕ್ಕೆ ಬಂದ ತಕ್ಷಣವೇ ಪ್ರಧಾನಿ ಅವರು ಟ್ವೀಟ್ ಮೂಲಕ ಅಲ್ಲಿಯ ಜನರಿಗೆ ಆತ್ಮಸ್ಥೈರ್ಯವನ್ನು ತುಂಬುವ ಮೂಲಕ ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯಕ್ಕೆ ಸೂಕ್ತವಾದ ಪರಿಹಾರ ಬರಲಿಲ್ಲವೆಂದು ಬಸನಗೌಡ ಪಾಟೀಲ್ ಯತ್ನಾಳ, ಡಿ.ಬಿ.ಚಂದ್ರೇಗೌಡ, ಚಕ್ರವರ್ತಿ ಸೂಲಿಬೆಲೆ ಸೇರಿ ಇನ್ನಿತರ ನಿಮ್ಮದೆ ಪಕ್ಷದ ಮುಖಂಡರು ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ 38 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ. ಆದರೆ, ತಾತ್ಕಾಲಿಕ ಪರಿಹಾರವೆಂದು ಬರೀ 1200 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಿದ್ದೀರಿ. ಗಂಜಿ ಕೇಂದ್ರದಲ್ಲಿ ವಾಸ ಮಾಡುತ್ತಿರುವ ಜನರಿಗೆ ಯಾವುದೆ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಕಿಡಿಕಾರಿದರು.

ಮಡಿಕೇರಿಯಲ್ಲಿ ಪ್ರವಾಹ ಬಂದಾಗ ಒಂದು ಮನೆ ನಿರ್ಮಾಣಕ್ಕಾಗಿ 10 ಲಕ್ಷ ರೂ.ಪರಿಹಾರವನ್ನು ನೀಡಿದ್ದಾರೆ. ಅದೇ ರೀತಿಯಾಗಿ ಉತ್ತರ ಕರ್ನಾಟಕದಲ್ಲೂ ಮನೆ ನಿರ್ಮಾಣಕ್ಕಾಗಿ 10 ಲಕ್ಷ ರೂ.ನೀಡಬೇಕು. ಹಾಗೂ ಉ-ಕ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ಬಸವರಾಜ ಇಟಗಿ ಮಾತನಾಡಿ, ಪ್ರವಾಹಗಳು ಬಂದಾಗ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ರಾಜ್ಯ ಸರಕಾರ ಆವರ್ತ ನಿಧಿಯನ್ನು ಸ್ಥಾಪಿಸಬೇಕು. ಇಂತಹ ಆವರ್ತನಿಧಿಯಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ ನಷ್ಟವುಂಟಾಗುವುದಿಲ್ಲ. ರೈತರ ಬೆಳೆಗಳಿಗೆ ಇನ್ಸೂರೆನ್ಸ್ ಮಾಡಿಸಿದರೆ ರಾಜ್ಯ ಸರಕಾರ ಒಂದು ರೂಪಾಯಿಯನ್ನೂ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X