Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆರೆ ಹಾವಳಿಯಿಂದಾಗಿ ಒಂದು ಲಕ್ಷ ಕೋಟಿಗೂ...

ನೆರೆ ಹಾವಳಿಯಿಂದಾಗಿ ಒಂದು ಲಕ್ಷ ಕೋಟಿಗೂ ಅಧಿಕ ನಷ್ಟವಾಗಿದೆ: ಪ್ರಕಾಶ್ ರಾಥೋಡ್

ವಾರ್ತಾಭಾರತಿವಾರ್ತಾಭಾರತಿ11 Oct 2019 11:38 PM IST
share
ನೆರೆ ಹಾವಳಿಯಿಂದಾಗಿ ಒಂದು ಲಕ್ಷ ಕೋಟಿಗೂ ಅಧಿಕ ನಷ್ಟವಾಗಿದೆ: ಪ್ರಕಾಶ್ ರಾಥೋಡ್

ಬೆಂಗಳೂರು, ಅ.11: ಕೆಪಿಸಿಸಿ ವತಿಯಿಂದ ಸಮೀಕ್ಷೆ ನಡೆಸಿರುವ ಪ್ರಕಾರ ರಾಜ್ಯದಲ್ಲಿ ನೆರೆ ಹಾವಳಿಯಿಂದ ಒಂದು ಲಕ್ಷ ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದ್ದು, ರಾಷ್ಟ್ರೀಯ ವಿಪತ್ತೆಂದು ಘೋಷಿಸಬೇಕೆಂದು ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಒತ್ತಾಯಿಸಿದರು.

ಶುಕ್ರವಾರ ವಿಧಾನಪರಿಷತ್‌ನಲ್ಲಿ ನಿಯಮ 68ರಡಿ ನೆರೆ ಪರಿಹಾರದ ಕುರಿತು ಮಾತನಾಡಿದ ಅವರು, ಕೆಪಿಸಿಸಿ ಮುಖಂಡರಾದ ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ನಾಯಕರು ನೆರೆ ಹಾವಳಿ ಕುರಿತು ಸಮೀಕ್ಷೆ ನಡೆಸಿದ್ದಾರೆ. ನಮ್ಮ ಸಮೀಕ್ಷಾ ವರದಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಿಕೊಟ್ಟಿದ್ದೇವೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವೆಂದು ತಿಳಿಸಿದರು.

ನೆರೆ ಹಾವಳಿಯಿಂದಾಗಿ ಎರಡು ಲಕ್ಷ ಕುಟುಂಬಗಳು ಬೀದಿಗೆ ಬಿದ್ದಿದ್ದಾರೆ. ಆದರೆ, ರಾಜ್ಯ ಸರಕಾರ ಇಲ್ಲಿಯವರೆಗೆ ಕೇವಲ 352ಕೋಟಿ ರೂ.ಮಾತ್ರ ಬಿಡುಗಡೆ ಮಾಡಿದೆ. ಉಳಿದವರು ಎಲ್ಲಿಗೆ ಹೋಗಬೇಕು. ಇದರ ಜೊತೆಗೆ 7.9ಲಕ್ಷ ಹೆಕ್ಟರ್ ಕೃಷಿ ಭೂಮಿ ನಾಶವಾಗಿದೆ. ಫಲವತ್ತಾದ ಭೂಮಿ ಕೊಚ್ಚಿ ಹೋಗಿದೆ. ಸಾವಿರಾರು ಎಕರೆ ಕಾಫಿ ತೋಟಗಳು ಸರ್ವನಾಶವಾಗಿದೆ. ಸಾವಿರಾರು ಕಿಮೀ ರಸ್ತೆ, ವಿದ್ಯುತ್ ಕಂಬಗಳು ನೆರೆ ಹಾವಳಿಗೆ ಕೊಚ್ಚಿ ಹೋಗಿವೆ. ಇವುಗಳ ಪುನರ್ ವಸತಿ ಶಾಶ್ವತ ಪರಿಹಾರ ಒದಗಿಸಲು ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ನೆರೆ ಹಾವಳಿಯಿಂದ ಒಂದು ಲಕ್ಷ ಕೋಟಿ ರೂ. ನಷ್ಟ ಆಗಿರುವುದಕ್ಕೆ ಸರಿಯಾದ ಮಾಹಿತಿ ಕೊಡಿ. ನಮಗೂ ಜ್ಞಾನೋದಯವಾಗುತ್ತದೆ ಎಂದರು. ಇದಕ್ಕೆ ಪ್ರತಿಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಕೆಪಿಸಿಸಿ ಸಿದ್ಧಪಡಿಸಿರುವ ವರದಿಯ ಪುಸ್ತಕವನ್ನು ಕೈಯಲ್ಲಿ ಹಿಡಿದು ಇದನ್ನು ನಿಮಗೆ ತಲುಪಿಸುತ್ತೇವೆ ಓದಿಕೊಳ್ಳಿ ಎಂದು ತಿರುಗೇಟು ನೀಡಿದರು.

ಪುನಃ ತಮ್ಮ ಮಾತನ್ನು ಮುಂದುವರೆಸಿದ ಪ್ರಕಾಶ್ ರಾಥೋಡ್, ಅಣೆಕಟ್ಟು ಪ್ರದೇಶಗಳ ಹಿನ್ನೀರಿನಲ್ಲಿ ನೆಲೆಗೊಂಡಿರುವ ಊರುಗಳನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಿ, ಮರು ನಿರ್ಮಿಸಬೇಕಿದೆ. ಹಾಗೂ ಮತ್ತೊಮ್ಮೆ ನೆರೆ ಹಾವಳಿ ಸಂಭವಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಿ, ಜಲಪ್ರವಾಹಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಬಳಿ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯದ ಬಿಜೆಪಿ ನಾಯಕರಿಗೆ ಧೈರ್ಯ ಇಲ್ಲದಿದ್ದರೆ, ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲಿ. ನಾವು ರಾಜ್ಯಕ್ಕೆ ಆಗಿರುವ ಸಮಸ್ಯೆಗಳನ್ನು ವಿವರಿಸಿ ಪರಿಹಾರಕ್ಕೆ ಒತ್ತಾಯಿಸುತ್ತೇವೆ.

-ಪ್ರಕಾಶ್ ರಾಥೋಡ್, ಕಾಂಗ್ರೆಸ್  ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X