Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿಸಿ ಮನ್ನಾ ಭೂಮಿ ಒತ್ತುವರಿ ಶೀಘ್ರ...

ಡಿಸಿ ಮನ್ನಾ ಭೂಮಿ ಒತ್ತುವರಿ ಶೀಘ್ರ ತೆರವು: ಡಿಸಿ ಜಗದೀಶ್ ಭರವಸೆ

ಪ.ಜಾತಿ-ಪ.ಪಂಗಡದ ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ12 Oct 2019 6:58 PM IST
share
ಡಿಸಿ ಮನ್ನಾ ಭೂಮಿ ಒತ್ತುವರಿ ಶೀಘ್ರ ತೆರವು: ಡಿಸಿ ಜಗದೀಶ್ ಭರವಸೆ

 ಉಡುಪಿ, ಅ.12:ಉಡುಪಿ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಡಿಸಿ ಮನ್ನಾ ಭೂಮಿಯನ್ನು ಕೂಡಲೆ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ದಲಿತರಿಗೆ ಮೀಸಲಾಗಿರುವ ಡಿಸಿ ಮನ್ನಾ ಭೂಮಿಯನ್ನು ಹಲವು ಕಡೆ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಸಭೆಯಲ್ಲಿದ್ದ ದಲಿತ ಮುಖಂಡರು ದೂರಿದ ಹಿನ್ನಲೆಯಲ್ಲಿ, ಡಿಸಿ ಮನ್ನಾ ಭೂಮಿಯನ್ನು ಒತ್ತುವರಿ ಮಾಡಿಕೊಂಡಿ ರುವವರಿಂದ ಕೂಡಲೇ ತರವುಗೊಳಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದ ಜಗದೀಶ್, ಡಿಸಿ ಮನ್ನಾ ಭೂಮಿ ಬೇರೆಯವರ ಪಾಲಾಗಲು ಬಿಡುವುದಿಲ್ಲ. ಅಕ್ರಮವಾಗಿ ಒತ್ತುವರಿ ಮಾಡಿ ಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳಲಾ ಗುವುದು ಎಂದು ಹೇಳಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ದಲಿತರಿಗೆ ಸಾಲ ನೀಡುತ್ತಿಲ್ಲ ಎಂಬ ಮುಖಂಡರ ದೂರಿಗೆ ಸಂಬಂಧಿಸಿದಂತೆ, ಲೀಡ್ ಬ್ಯಾಂಕ್ ಮೂಲಕ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸೂಚನೆ ನೀಡುವುದಾಗಿ ಹೇಳಿದ ಅವರು, ಲೀಡ್ ಬ್ಯಾಂಕ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸುವಂತೆ ಲೀಡ್ ಬ್ಯಾಂಕ್ ಅಧಿಕಾರಿಗೆ ಸೂಚಿಸಿದರು. ಜಿಪಂ ಸಿಇಓ ಅವರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಮರಳು ದಿಬ್ಬ ತೆರವುಗೊಳಿಸುವ ಸಂದರ್ಭದಲ್ಲಿ ಸಾಂಪ್ರದಾಯಿಕ ಮರಳು ತೆಗೆಯುವವರಿಗೆ ಮತ್ತು ಪಂಗಡಕ್ಕೆ ಮೀಸಲಾತಿ ನೀಡುವಂತೆ ಸಭೆಯಲ್ಲಿ ಒತ್ತಾಯ ಕೇಳಿಬಂದಾಗ, ಈಗಾಗಲೇ ಜಿಲ್ಲೆಯಲ್ಲಿ 170 ಮಂದಿಗೆ ಪರವಾನಗಿ ನೀಡಿದ್ದು ಇದರಲ್ಲಿ 16 ಮಂದಿ ಪ.ಜಾತಿ-ಪಂಗಡಕ್ಕೆ ಸೇರಿದವರು ಇದ್ದಾರೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹೆಸರಿನಲ್ಲಿ ಬೇರೆ ಯವರು ಕಾರ್ಯ ನಿರ್ವಹಿಸುತ್ತಿದ್ದಲ್ಲಿ ಈ ಬಗ್ಗೆ ತನಿಖೆ ನಡೆಸಿ, ಪರವಾನಗಿ ಯನ್ನು ರದ್ದುಪಡಿಸುವುದಾಗಿ ಡಿಸಿ ಹೇಳಿದರು.

ಪರಿಶಿಷ್ಟ ಜಾತಿ- ಪಂಗಡದವರಿಗೆ ಮೀಸಲಿಟ್ಟ ಅನುದಾನ ದುರುಪಯೋಗ ವಾಗಿರುವ ಕುರಿತು ಕೇಳಿ ಬಂದು ದೂರುಗಳ ಬಗ್ಗೆ ಪ್ರತಿಕ್ರ್ರಿಯಿಸಿದ ಜಿಲ್ಲಾಧಿಕಾರಿ, ಅಂತಹ ದೂರುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.

ತಾಲೂಕು ಮತ್ತು ಗ್ರಾಪಂಗಳಲ್ಲಿ ನಡೆಯುವ ಕಾಮಗಾರಿಗಳಲ್ಲಿ ಪ.ಜಾತಿ, ಪಂಗಡದ ಗುತ್ತಿಗೆದಾರರಿಗೆ ಮೀಸಲು ದೊರೆಯುತ್ತಿಲ್ಲ. ಅಲ್ಲದೇ ಕಾಮಗಾರಿ ಗಳ ಹಂಚಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಹಾಗೂ ಪ.ಜಾತಿ ಪಂಗಡದವರ ಹೆಸರಿನಲ್ಲಿ ಬೇರೆಯವರಿಗೆ ಗುತ್ತಿಗೆ ನೀಡಲಾಗುತ್ತಿದೆ ಎಂಬ ದೂರಿನ ಕುರಿತಂತೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕಾಮಗಾರಿಗಳ ಅನುಷ್ಠಾನದಲ್ಲಿ ಸರಕಾರಿ ಆದೇಶಗಳನ್ವಯ ಸೂಕ್ತ ಮೀಸಲಾತಿ ಪಾಲಿಸುವಂತೆ ಹಾಗೂ ಪ.ಜಾತಿ, ಪಂಗಡ ದವರ ಹೆಸರಿನಲ್ಲಿ ಗುತ್ತಿಗೆ ನಿರ್ವಹಿಸುವವರ ವಿರುದ್ದ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಮತ್ತು ಕುಂದಾಪುರ ಎಸಿ ಅವರು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪ.ಜಾತಿ,ಪಂಗಡದವರ ಕುಂದುಕೊರತೆ ಸಭೆಯನ್ನು ನಡೆಸುವಂತೆ ಡಿಸಿ ಸೂಚಿಸಿದರು.

ಸಭೆಯಲ್ಲಿ ಉಡುಪಿ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಕುರಿತು ಸರಿಯಾಗಿ ಸ್ಪಂದಿಸದ ಬಗ್ಗೆ, ನಾಲ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಕಲುಷಿತ ನೀರು ಸರಬರಾಜು ಬಗ್ಗೆ, ಕುಂದಾಪುರದ ಖಾಸಗಿ ಶಾಲೆಯಲ್ಲಿ ಡೊನೇಷನ್ ಹಾವಳಿ ಬಗ್ಗೆ, ಆರೂರು ಗ್ರಾಪಂನಲ್ಲಿ ಅಕ್ರಮ ಕಲ್ಲುಕೋರೆ ನಡೆಯುತ್ತಿರುವ ಬಗ್ಗೆ, ಜಿಲ್ಲಾ ಅಂಬೇಡ್ಕರ್ ಭವನ ನಿರ್ಮಾಣ ಬಗ್ಗೆ, ಕುಂದಾಪುರದ ಅಂಗಡಿಕೋಣೆ ಏಲಂ ನಲ್ಲಿ ಮೀಸಲಾತಿ ಅನುಸರಿಸದ ಬಗ್ಗೆ, ಮನೆ ನಿವೇಶನ ನೀಡುವ ಬಗ್ಗೆ, ಕುಕ್ಕೆಹಳ್ಳಿಯ ಮೀನು ಸಂಸ್ಕರಣಾ ಘಟಕದಿಂದ ತೊಂದರೆಯಾಗುತ್ತಿರುವ ಬಗ್ಗೆ, ಹಂಗಾರಕಟ್ಟೆಯ ಫಿಶ್‌ಕಟ್ಟಿಂಗ್ ಕಾರ್ಖಾನೆ ಯಿಂದ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತಂತೆ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಕೇಳಿ ಬಂದ ದೂರುಗಳ ಕುರಿತಂತೆ ಸಂಬಂದಪಟ್ಟ ಅಧಿಕಾರಿಗಳು ಶೀಘ್ರದಲ್ಲಿ ತಮಗೆ ವರದಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ ಕಾಟಾಚಾರದ ಸಭೆ ಆಗಬಾರದು. ಅಧಿಕಾರಿ ಗಳು ಪ.ಜಾತಿ,ಪಂಗಡದವರ ದೂರುಗಳಿಗೆ ಕೇವಲ ಹಿಂಬರಹ ನೀಡದೇ ಕಾಳಜಿಯಿಂದ ಕಾರ್ಯ ನಿರ್ವಹಿಸಿ. ಅವರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಹ ಪ್ರತಿ ತಿಂಗಳು ಪ. ಜಾತಿ, ಪಂಗಡದವರ ಕುಂದುಕೊರತೆ ಸಭೆಯನ್ನು ನಡೆಸಲಾಗುತ್ತಿದೆ ಎಂದು ಎಸ್ಪಿನಿಶಾ ಜೇಮ್ಸ್ ಹೇಳಿದರು.

ಸಭೆಯಲ್ಲಿ ಕಾರ್ಕಳ ವಿಭಾಗದ ಎಎಸ್ಪಿ ಕೃಷ್ಣಕಾಂತ್, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಎಸ್ಪಿಕುಮಾರಸ್ವಾಮಿ, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಪಂ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್ ಉಪಸ್ಥಿತರಿದ್ದರು. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X