Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಟಿಯವರು ಪರಮೇಶ್ವರ್ ಮನೆಯಲ್ಲಿ ಊಟ ಮಾಡಲು...

ಐಟಿಯವರು ಪರಮೇಶ್ವರ್ ಮನೆಯಲ್ಲಿ ಊಟ ಮಾಡಲು ಹೋಗಿದ್ದರಾ: ಸಂಸದ ವಿ.ಶ್ರೀನಿವಾಸ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ12 Oct 2019 10:49 PM IST
share
ಐಟಿಯವರು ಪರಮೇಶ್ವರ್ ಮನೆಯಲ್ಲಿ ಊಟ ಮಾಡಲು ಹೋಗಿದ್ದರಾ: ಸಂಸದ ವಿ.ಶ್ರೀನಿವಾಸ ಪ್ರಸಾದ್

ಮೈಸೂರು,ಅ.12: ಎರಡು ದಿನ ಐಟಿಯವರು ಪರಮೇಶ್ವರ್ ಮನೆಯಲ್ಲಿ ಊಟ ಮಾಡಲು ಹೋಗಿದ್ದರಾ ಎಂದು ಪ್ರಶ್ನಿಸುವ ಮೂಲಕ ಐಟಿ ದಾಳಿ ಕುರಿತು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಐಟಿಯವರು ಸುಖಾಸುಮ್ಮನೆ ಪರಮೇಶ್ವರ್ ಮನೆ ಮೇಲೆ ದಾಳಿ ಮಾಡಿಲ್ಲ. ಅವರ ಬಗ್ಗೆ ದೂರು ಬಂದ ಕಾರಣ ದಾಖಲೆಗಳನ್ನು ಸಂಗ್ರಹಿಸಿ ನಂತರ ದಾಳಿ ಮಾಡಿದ್ದಾರೆ. ಇದರಲ್ಲಿ ರಾಜಕೀಯ ಎಲ್ಲಿಂದ ಬಂತು, ಐಟಿ ಮತ್ತು ಈಡಿಯವರು ದೇಶದಲ್ಲಿ ದಿನಕ್ಕೆ ಸಾವಿರಾರು ದಾಳಿ ಮಾಡುತ್ತಾರೆ. ಎಲ್ಲಾ ದಾಳಿಗಳ ಎಲ್ಲಾ ವಿವರವನ್ನು ಎಲ್ಲರಿಗೂ ನೀಡಲಾಗುತ್ತದೆಯೇ? ಮೂರು ಜನ ಕಾಂಗ್ರೆಸ್ ನವರ ಮೇಲೆ ದಾಳಿ ಮಾಡಿದ ಕೂಡಲೇ ಇದು ರಾಜಕೀಯ ಪ್ರೇರಿತ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಮನೆ ಮೇಲೆ ದಾಳಿಯಾಗಿರಲಿಲ್ಲವೇ, ಎಸ್.ಎಂ.ಕೃಷ್ಣ ಅಳಿಯನ ಮನೆ ಮೇಲೆ ದಾಳಿಯಾಗಿರಲಿಲ್ಲವೇ, ಹೀಗಿರುವಾಗ ಐಟಿ ದಾಳಿ ಬಿಜೆಪಿ ಪ್ರೇರಿತ ಎನ್ನುವುದು ಬಾಲಿಶತನ. ದಾಳಿ ಮಾಡಿದ ಕೂಡಲೇ ಅವರು ಅಪರಾಧಿಗಳಲ್ಲ. ಅದರ ಮೇಲೆ ಕೋರ್ಟ್ ಇರುತ್ತದೆ. ಕೋರ್ಟಿನಲ್ಲಿ ವಾದ ಮಾಡಿಕೊಳ್ಳಬಹುದು. ಸ್ವತಂತ್ರ ಸಂಸ್ಥೆ ಬಗ್ಗೆ ಆಧಾರ ರಹಿತ ಆರೋಪ ಮಾಡಬಾರದು ಎಂದು ತಿಳಿಸಿದರು.

ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡಿ ದೇಶದಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಿದೆ. ರಾಹುಲ್ ಗಾಂಧಿ ಎಲ್ಲೋ ತಲೆಮರೆಸಿಕೊಂಡು ಓಡಿ ಹೋಗಿದ್ದಾರೆ. ಪಕ್ಷ ನಿಭಾಯಿಸಲಾಗದೆ ಅಧ್ಯಕ್ಷ ಸ್ಥಾನವನ್ನು ಬಿಟ್ಟಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್ ಸ್ಥಿತಿ ಹೀನಾಯವಾಗಿದೆ. ಆಂತರಿಕ ಕಚ್ಚಾಟಗಳು ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಾಗಿವೆ. ಇಷ್ಟಾದರೂ ಕಾಂಗ್ರೆಸ್‍ಗೆ ಬುದ್ಧಿ ಬಂದಿಲ್ಲ. ಇನ್ನಾದರು ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಲಿ. ಜನರ ವಿಶ್ವಾಸ ಗಳಿಸುವ ಪ್ರಯತ್ನ ಮಾಡಲಿ ಎಂದು ಐಟಿ ದಾಳಿ ಬಿಜೆಪಿ ಪ್ರೇರಿತ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ವಿ.ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದ್ದಾರೆ.

ಕಲಾಪಗಳಿಗೆ ಮಾಧ್ಯಮಗಳನ್ನು ಹೊರಗೆ ಇಟ್ಟಿದ್ದು ಸರಿಯಲ್ಲ. ಸ್ಪೀಕರ್ ತಮ್ಮ ಕ್ರಮವನ್ನು ವಾಪಸ್ ಪಡೆಯಬೇಕು. ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ನ್ಯಾಯ ಸಮ್ಮತವಲ್ಲ. ಮಾಧ್ಯಮದವರಿಂದ ಕಲಾಪದೊಳಗಿನ ಶಾಸಕರಿಗೆ ವ್ಯಕ್ತಿಗತವಾಗಿ ತೊಂದರೆಯಾದರೆ ಸ್ಪೀಕರ್ ಬಳಿ ಅವರು ದೂರು ಸಲ್ಲಿಸಬಹುದು. ಇದಕ್ಕಾಗಿ ಮಾಧ್ಯಮವನ್ನು ಕಲಾಪದಿಂದ ದೂರ ಇಡುವುದು ನನಗೆ ಸರಿ ಕಾಣುತ್ತಿಲ್ಲ. ಇದು ತಪ್ಪು ಸಂದೇಶ ರವಾನೆ ಮಾಡುತ್ತಿದೆ. ಹಿಂದೊಮ್ಮೆ ಇದೆ ವಿಚಾರದಲ್ಲಿ ಬಿಜೆಪಿಯವರೇ ಮಾಧ್ಯಮದ ಪರವಾಗಿ ನಿಂತಿದ್ದರು. ಈಗ ಅಧಿಕಾರಕ್ಕೆ ಬಂದಾಗ ವಿರೋಧಿ ಆಶಯ ತಳೆಯುವುದು ಸರಿಯಲ್ಲ ಸದನದಲ್ಲಿ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X