Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ...

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ವಾರ್ತಾಭಾರತಿವಾರ್ತಾಭಾರತಿ13 Oct 2019 10:00 PM IST
share
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಮುದ್ದೇಬಿಹಾಳ, ಅ.13: ವ್ಯಕ್ತಿಯೊಬ್ಬರನ್ನು ಇಬ್ಬರು ಯುವಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಹಡಲಗೇರಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. 

ಅದೇ ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ತಮ್ಮಣ್ಣ ಸಂಗಣ್ಣ ಮೋರಕೆ (48) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿದ್ದಾರೆನ್ನಲಾದ ಯುವಕರ ಹೆಸರು ತಕ್ಷಣಕ್ಕೆ ತಿಳಿದುಬಂದಿಲ್ಲ. ಆದರೆ ಕೊಲೆಯಾದ ತಮ್ಮಣ್ಣ ಗ್ರಾಮದ ಹಾಲು ಮಾರುವ ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆನ್ನಲಾಗಿದ್ದು, ಆಕೆಯ ಮಗ ಮತ್ತು ಮಗನ ಸ್ನೇಹಿತ ಸೇರಿ ಈ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. 

ತಮ್ಮಣ್ಣರ ಶವವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಸಿಪಿಐ ಆನಂದ ವಾಗ್ಮೋರೆ, ಪಿಎಸೈ ಮಲ್ಲಪ್ಪ ಮಡ್ಡಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ. ಕೊಲೆಗೀಡಾದವನ ಪತ್ನಿಯಿಂದ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಕೊಳ್ಳಲಾಗುತ್ತದೆ ಎಂದು ಸಿಪಿಐ ಆನಂದ ವಾಗ್ಮೋರೆ ಸುದ್ದಿಗಾರರಿಗೆ ತಿಳಿಸಿದ್ದಾರೆ. 

ತಮ್ಮಣ್ಣ ಸಂಜೆ 6 ಗಂಟೆ ಸುಮಾರಿಗೆ ತನ್ನ ಹೊಲದಿಂದ ಮನೆಗೆ ಬರುತ್ತಿದ್ದಾಗ ಇಬ್ಬರು ಯುವಕರು ತಮ್ಮಣ್ಣ ಜೊತೆ ಮಾತಿನ ಚಕಮಕಿ ನಡೆಸಿದ್ದು, ಈ ವೇಳೆ ಯುವಕನೊಬ್ಬ ಕೈಯಲ್ಲಿದ್ದ ಚೂರಿಯಿಂದ ತಮ್ಮಣ್ಣರಿಗೆ ಇರಿದಿದ್ದಾನೆ. ತೀವ್ರ ಗಾಯಗೊಂಡ ತಮ್ಮಣ್ಣ ನೆಲಕ್ಕೆ ಬಿದ್ದು ರಕ್ತದ ಮಡುವಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ಅಕ್ಕಪಕ್ಕದ ಜನರು ತಮ್ಮಣ್ಣರನ್ನು ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದು, ಆದರೆ ಅಷ್ಟೊತ್ತಿಗಾಗಲೇ ತಮ್ಮಣ್ಣ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ತಮ್ಮಣ್ಣ ಗ್ರಾಮದಲ್ಲಿ ಹಾಲು ಮಾರುವ ಮಹಿಳೆಯೊಬ್ಬಳೊಂದಿಗೆ ಬಹಳ ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X