Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯವರು ಪ್ರಜಾಪ್ರಭುತ್ವದ...

ಬಿಜೆಪಿಯವರು ಪ್ರಜಾಪ್ರಭುತ್ವದ ಕೊಲೆಗಾರರು: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 Oct 2019 10:48 PM IST
share
ಬಿಜೆಪಿಯವರು ಪ್ರಜಾಪ್ರಭುತ್ವದ ಕೊಲೆಗಾರರು: ಮಾಜಿ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು, ಅ.13: ದೃಶ್ಯ ಹಾಗೂ ಪತ್ರಿಕಾ ಮಾಧ್ಯಮದವರಿಗೆ ವಿಧಾನಸಭೆ ಕಲಾಪಗಳ ಪೊಟೊ, ಚಿತ್ರೀಕರಣಕ್ಕೆ ಬಿಜೆಪಿ ಸರಕಾರ ನಿರ್ಬಂಧ ಹೇರಿದೆ. ವಿಧಾನಸಭೆ, ವಿಧಾನಪರಿಷತ್ ಕಲಾಪಗಳು ಪಾರದರ್ಶಕವಾಗಿರಬೇಕು. ಇದಕ್ಕಾಗಿ ಕಲಾಪಗಳನ್ನು ಚಿತ್ರೀಕರಿಸಲು 10 ವರ್ಷಗಳ ಹಿಂದೆಯೇ ಅವಕಾಶ ಕಲ್ಪಿಸಲಾಗಿತ್ತು. ಪ್ರಜಾಪ್ರಭುತ್ವದಲ್ಲಿ ಯಾವುದನ್ನೂ ಜನರಿಂದ ದೂರವಿಡಲು ಸಾಧ್ಯವಿಲ್ಲ. ಕದ್ದು ಮುಚ್ಚಿ ವಿಧಾನಸಭೆ ಕಲಾಪ ನಡೆಸುವುದು ಅಪರಾಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷಗಳ ನಾಯಕ ಸಿದ್ದಾರಾಮಯ್ಯ ಹೇಳಿದ್ದಾರೆ. 

ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭೆ, ವಿಧಾನ ಪರಿಷತ್‍ಗಳಲ್ಲಿ ಶಾಸಕರು ಚರ್ಚೆ ಮಾಡುವುದು ಜನರಿಗೆ ತಿಳಿಯಬೇಕು. ವಿಧಾನಸಭೆ ಅಧಿವೇಶನಗಳಲ್ಲಿ ಜನರ ಸಮಸ್ಯೆ ಚರ್ಚೆ ಮಾಡಲಾಗುತ್ತಿದೆಯೇ ಹೊರತು ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ಚರ್ಚೆ ನಡೆಯುವುದಿಲ್ಲ. ಬಿಜೆಪಿ ಸರಕಾರ ಮಾಧ್ಯಮ ಪ್ರತಿನಿಧಗಳಿಗೆ ನಿರ್ಬಂಧ ಹೇರುವ ಮೂಲಕ ಪತ್ರಿಕಾ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.

ವಿಧಾನಸಭೆ ಸ್ಪೀಕರ್ ರನ್ನು ಈ ಸಂಬಂಧ ವಿಚಾರಿಸಿದರೆ, ನಾನು ಪ್ರಾಯೋಗಿಕವಾಗಿ ಈ ಕ್ರಮಕೈಗೊಂಡಿದ್ದೇನೆ ಎಂದು ಹೇಳುತ್ತಾರೆ, ಸಿಎಂ ಯಡಿಯೂರಪ್ಪ, ಈ ಬಗ್ಗೆ ನನಗೇನೂ ಗೊತ್ತಿಲ್ಲ, ಸ್ಪೀಕರ್ ಜತೆ ಮಾತನಾಡಿ ಎಲ್ಲವನ್ನೂ ಸರಿ ಮಾಡುತ್ತೇನೆಂದು ಟ್ವೀಟ್ ಮಾಡಿ ನಂತರ ಅದನ್ನು ಅಳಿಸುತ್ತಾರೆ, ಇದರ ಅರ್ಥ ಏನು? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಸ್ಪೀಕರ್ ಮತ್ತು ಸಿಎಂ ಇಬ್ಬರೂ ಚರ್ಚೆ ಮಾಡಿಯೇ ಮಾಧ್ಯಮದವರಿಗೆ ನಿರ್ಬಂಧ ಹೇರಿದ್ದಾರೆ. ಸರಕಾರಕ್ಕೆ ಗೊತ್ತಿಲ್ಲದೇ ಸ್ಪೀಕರ್ ಈ ಕ್ರಮಕ್ಕೆ ಮುಂದಾಗಿಲ್ಲ. ಬಿಜೆಪಿ ಸರಕಾರಕ್ಕೆ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಮತ್ತು ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ಅವರು ಟೀಕಿಸಿದರು.

ಬಿಜೆಪಿ ಮೂಲತಃ ಪ್ಯಾಸಿಸ್ಟ್ ಪಕ್ಷವಾಗಿದೆ, ಸರ್ವಾಧಿಕಾರಿ ಧೋರಣೆಯಲ್ಲಿ ಮಾತ್ರ ನಂಬಿಕೆ ಹೊಂದಿರುವ ಪಕ್ಷವಾಗಿದೆ. ಹಿಟ್ಲರ್ ಕೂಡ ಇದೇ ಧೋರಣೆ ತಳೆದಿದ್ದ. ಜನರಿಗೆ ಯಾವುದರ ಅಗತ್ಯ ಇಲ್ಲವೋ ಅದನ್ನೇ ಜನರ ತಲೆಗೆ ತುಂಬುವುದು. ದೇಶಕ್ಕೆ, ಸಮಾಜಕ್ಕೆ ಯಾವುದರ ಅಗತ್ಯವಿಲ್ಲವೋ ಅದನ್ನೇ ಬಿತ್ತುವುದು ಪ್ಯಾಸಿಸ್ಟ್ ಸಂಸ್ಕೃತಿಯಾಗಿದೆ. ಬಿಜೆಪಿಯವರು ಇದನ್ನೇ ಮಾಡುತ್ತಿದ್ದಾರೆ. ಇದರಿಂದ ದೇಶಕ್ಕೆ ಒಳ್ಳೆಯದಾಗುವುದಿಲ್ಲ ಎಂದ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ನಾಗರಿಕರ ಮೂಲಭೂತ ಹಕ್ಕಾಗಿದೆ. ಬಿಜೆಪಿ ಸರಕಾರ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೇ ಹರಣ ಮಾಡುತ್ತಿದ್ದು, ಮಾಧ್ಯಮಗಳನ್ನು ಹತ್ತಿಕ್ಕುವ ಸರಕಾರಗಳ ಪ್ರವೃತ್ತಿ ಪ್ರಜಾಪ್ರಮಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದರು.

ಪ್ರಜಾಪ್ರಭುತ್ವದ ಯಶಸ್ವಿಗೆ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದೊಂದಿಗೆ ಪತ್ರಿಕಾ ರಂಗವೂ ಮುಖ್ಯ. ಬಿಜೆಪಿ ಸರಕಾರ ಪತ್ರಿಕಾ ಸ್ವಾತಂತ್ರ್ಯಕ್ಕೆ ಕೊಡಲಿ ಪೆಟ್ಟು ನೀಡುತ್ತಿದ್ದು, ಬಿಜೆಪಿಯವರು ಪ್ರಜಾಪ್ರಭುತ್ವದ ಕೊಲೆಗಾರರು ಎಂದ ಸಿದ್ದರಾಮಯ್ಯ, ಮಾಧ್ಯಮದವರು ಕೇವಲ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸರಕಾರಗಳು ಹತ್ತಿಕ್ಕಲು ಮಾಧ್ಯಮದವರು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಸಲಹೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X