ಚಾರ್ಮಾಡಿ ಘಾಟ್: ಲಘು ವಾಹನ ಸಂಚಾರ ಅವಧಿ ವಿಸ್ತರಣೆ

ಚಿಕ್ಕಮಗಳೂರು, ಅ.14: ಕೇಂದ್ರಮೋಟಾರು ವಾಹನಗಳ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ನಿಯಮ 221(ಎ)(5) ರ ಪ್ರಕಾರ ಪ್ರದತ್ತವಾದ ಅಧಿಕಾರ ಚಲಾಯಿಸಿ ರಾಷ್ಟ್ರೀಯ ಹೆದ್ದಾರಿ 73 ರ(ಹಳೆಯ ಸಂಖ್ಯೆ-234)ಮಂಗಳೂರು-ವಿಲ್ಲುಪುರಂ ರಸ್ತೆಯ ಕಿ.ಮೀ 86.200 ರಿಂದ ಕಿ.ಮೀ 99.200 ಕೊಟ್ಟಿಗೆಹಾರ ವ್ಯಾಪ್ತಿಯವರಗೆ ಅಕ್ಟೋಬರ್ 15 ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೀಮಿತಗೊಳಿಸಿ ಮುಂದಿನ ಆದೇಶದವರೆಗೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಆದೇಶಿಸಿದೆ ಹಾಗೂ ಎಲ್ಲಾ ರೀತಿಯ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ.
ಉಳಿದಂತೆ ಉಲ್ಲೇಖ (3)ರ 14-09-2019 ರಂತೆ ಈ ಕಚೇರಿಯಿಂದ ಹೊರಡಿಸಿರುವ ಆದೇಶದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶಿಸಿದ್ದಾರೆ.
Next Story





