Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿನಿ ಅತ್ಯಾಚಾರ, ವಂಚನೆ...

ವಿದ್ಯಾರ್ಥಿನಿ ಅತ್ಯಾಚಾರ, ವಂಚನೆ ಪ್ರಕರಣ: ಆರೋಪ ಸಾಬೀತು

ವಾರ್ತಾಭಾರತಿವಾರ್ತಾಭಾರತಿ15 Oct 2019 5:58 PM IST
share

ಮಂಗಳೂರು, ಅ.15: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ಪ್ರಮಾಣ ಅ.17ಕ್ಕೆ ಕಾದಿರಿಸಿ ಆದೇಶ ಹೊರಡಿಸಲಾಗಿದೆ.

ಕೆಮ್ರಾಲ್ ಅತ್ತೂರು ಗ್ರಾಮ ಪಡುಬಳಿಕೆ ನಿವಾಸಿ ಅಜಿತ್ ಶೆಟ್ಟಿ (23) ಪ್ರಕರಣದ ಆರೋಪಿ.

ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳಿಗೆ ತನ್ನ ಸ್ನೇಹಿತೆಯ ಮುಖಾಂತರ ಹಿಟಾಚಿ ಚಾಲಕನಾಗಿದ್ದ ಅಜಿತ್ ಶೆಟ್ಟಿಯ ಪರಿಚಯವಾಗುತ್ತದೆ. ಬಳಿಕ ಇವರಿಬ್ಬರ ಪರಿಚಯ ಪ್ರೀತಿಗೆ ತಿರುಗಿ ಒಬ್ಬರಿಗೊಬ್ಬರು ಅನ್ಯೋನ್ಯವಾಗಿರುತ್ತಾರೆ.

ಸುಮಾರು ಐದು ವರ್ಷಗಳ ಕಾಲ ಯುವತಿಯನ್ನು ಪ್ರೀತಿಸಿದ ಅಜಿತ್, ಆಕೆಯನ್ನು ಮದುವೆಯಾಗುವುದಾಗಿಯೂ ನಂಬಿಸುತ್ತಾನೆ. ಇದೇ ನೆಪದಲ್ಲಿ 2014ನೇ ಸೆಷ್ಟಂಬರ್ 4ರಂದು ಯುವತಿಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆಕೆಯನ್ನು ಅತ್ಯಾಚಾರಗೈಯುತ್ತಾನೆ.
ಇದೇ ರೀತಿ ಪದೇಪದೇ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗುತ್ತಾನೆ. ಇದರಿಂದ ಯುವತಿ ಗರ್ಭವತಿಯಾಗಿದ್ದು, 2015ರ ಮೇ 29ರಂದು ಮೂಡುಬಿದಿರೆ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುತ್ತಾಳೆ.

ಯುವತಿ ಹೆರಿಗೆಯಾದ ಬಳಿಕ ಅಜಿತ್ ಶೆಟ್ಟಿ ಆಸ್ಪತ್ರೆಗೂ ಹೋಗದೆ ಯಾರ ಕಣ್ಣಿಗೂ ಬೀಳದೆ ನಾಪತ್ತೆಯಾಗುತ್ತಾನೆ. ಇದರಿಂದ ನೊಂದ ಯುವತಿ 2015ರ ಜು.22ರಂದು ಆತನ ವಿರುದ್ಧ ಮತ್ತು ಮದುವೆ ಮಾಡಲು ನಿರಾಕರಣೆ ಮಾಡಿದ ಆತನ ತಂದೆ ಹರೀಶ್ಚಂದ್ರ, ಅಣ್ಣ ಅಜಯ್ ಶೆಟ್ಟಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತದೆ. ಕೆಲವು ದಿನದ ಬಳಿಕ ಆರೋಪಿಯನ್ನು ಬಂಧಿಸಲಾಗಿದ್ದು, ಮೂರು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಯಿದುನ್ನೀಸಾ ಅವರು ಆರೋಪಿ ಐಪಿಸಿ 417 (ಮೋಸ), ಐಪಿಸಿ 376 (2ಎನ್)(ಸರಣಿ ಅತ್ಯಾಚಾರ)ರಡಿ ಅಪರಾಧವೆಸಗಿರುವುದು ಸಾಬೀತುಪಡಿಸಿ ತೀರ್ಪು ನೀಡುತ್ತಾರೆ. ಶಿಕ್ಷೆ ಪ್ರಮಾಣವನ್ನು ಅ.17ಕ್ಕೆ ಪ್ರಕಟಿಸುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಮಗುವಿನ ಡಿಎನ್‌ಎ ವರದಿಯಲ್ಲಿ ಅಜಿತ್ ಶೆಟ್ಟಿ ಜೈವಿಕ ತಂದೆ ಎಂದು ರುಜುವಾತುಗೊಂಡಿದೆ. ಬಜ್ಪೆ ಇನ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ಪ್ರಕರಣದ ತನಿಖೆ ನಡೆಸಿ ಅಜಿತ್ ಶೆಟ್ಟಿ ವಿರುದ್ಧ ದೋಷಾ ರೋಪಣ ಪಟ್ಟಿ ಸಲ್ಲಿಸಿದ್ದರು. ಒಂಬತ್ತು ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, 11 ದಾಖಲೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.

ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಒ.ಎಂ. ಕ್ರಾಸ್ತಾ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X