ಹೃದಯಾಘಾತದಿಂದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಸಾಂದರ್ಭಿಕ ಚಿತ್ರ
ರಾಂಚಿ,ಅ.15: ಒಂದನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಒಂದನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಮಂಗಳವಾರ ಶಾಲೆಯಲ್ಲಿ ಪ್ರಾರ್ಥನೆಯ ಸಮಯದಲ್ಲಿ ಕುಸಿದು ಬಿದ್ದಿದ್ದಳು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ವೈದ್ಯರು ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.
ಆಕೆಯ ಹೆತ್ತವರ ಪ್ರಕಾರ ವೈಷ್ಣವಿ ಹೃದ್ರೋಗಿಯಾಗಿದ್ದಳು ಮತ್ತು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಶಿಕ್ಷಾ ನಿಕೇತನ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಶಾಲೆಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.
Next Story