Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಚ್‌ಎಎಲ್ ಮುಷ್ಕರ: ನಿಯಮಗಳಂತೆ ನೌಕರರಿಗೆ...

ಎಚ್‌ಎಎಲ್ ಮುಷ್ಕರ: ನಿಯಮಗಳಂತೆ ನೌಕರರಿಗೆ ವೇತನ ಪರಿಷ್ಕರಿಸಲಾಗಿದೆ- ಸಂಸ್ಥೆಯ ಆರ್ಥಿಕ ವಿಭಾಗದ ನಿರ್ದೇಶಕ

ವಾರ್ತಾಭಾರತಿವಾರ್ತಾಭಾರತಿ15 Oct 2019 10:46 PM IST
share
ಎಚ್‌ಎಎಲ್ ಮುಷ್ಕರ: ನಿಯಮಗಳಂತೆ ನೌಕರರಿಗೆ ವೇತನ ಪರಿಷ್ಕರಿಸಲಾಗಿದೆ- ಸಂಸ್ಥೆಯ ಆರ್ಥಿಕ ವಿಭಾಗದ ನಿರ್ದೇಶಕ

ಬೆಂಗಳೂರು, ಅ.15: ಎಚ್‌ಎಎಲ್ ಸಿಬ್ಬಂದಿ ಮುಷ್ಕರಕ್ಕೂ, ಆರ್ಥಿಕ ಹಿಂಜರಿತಕ್ಕೂ ಯಾವುದೇ ಸಂಬಂಧ ಇಲ್ಲ. ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರವೇ ನೌಕರರ ವೇತನ ಪರಿಷ್ಕರಣೆ ಮಾಡಲಾಗಿದೆ ಎಂದು ಎಚ್‌ಎಎಲ್‌ನ ಆರ್ಥಿಕ ವಿಭಾಗದ ನಿರ್ದೇಶಕ ಸಿ.ಬಿ.ಅನಂತಕೃಷ್ಣನ್ ತಿಳಿಸಿದ್ದಾರೆ.

20 ಸಾವಿರ ಎಚ್‌ಎಎಲ್ ಉದ್ಯೋಗಿಗಳ ಮುಷ್ಕರ ಹಿನ್ನೆಲೆ ಮಂಗಳವಾರ ಎಚ್‌ಎಎಲ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಸ್ಥೆಯ ಆರ್ಥಿಕ ವಹಿವಾಟು ಆಧರಿಸಿ ವೇತನ ಪರಿಷ್ಕರಿಸಲಾಗಿದೆ. ನೌಕರರು ಹೇಳುತ್ತಿರುವ ಹಾಗೆ ಯಾವುದೇ ತಾರತಮ್ಯ ಇಲ್ಲ ಎಂದರು.

ಹಿಂದಿನ ಪರಿಸ್ಥಿತಿಗೂ ಇಂದಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಇಂದು ಕಾರ್ಮಿಕರ ವೆಚ್ಚ ಹೆಚ್ಚಿದೆ. ವೇತನ ಪರಿಷ್ಕರಣೆ ವೇಳೆ ಸಂಸ್ಥೆಯ ವರ್ಕ್ ಆರ್ಡರ್, ಉತ್ಪಾದನೆ, ವಹಿವಾಟು, ಖರ್ಚು-ವೆಚ್ಚ ಎಲ್ಲವನ್ನೂ ಗಂಭೀರವಾಗಿ ಪರಿಶೀಲಿಸಲಾಗುತ್ತಿದೆ. ನೌಕರರ ಹಿತದ ಜತೆಗೆ ಸಂಸ್ಥೆಯ ಷೇರುದಾರರ ಹಿತವನ್ನೂ ಕಾಯಬೇಕು. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟು ವೇತನ ಪರಿಷ್ಕರಿಸಲಾಗಿದೆ ಎಂದು ಅವರು ವಿವರಿಸಿದರು.

ನಿಯಮ ಪ್ರಕಾರ 10 ವರ್ಷಗಳಿಗೆ ಒಮ್ಮೆ ವೇತನ ಪರಿಷ್ಕರಣೆ ಮಾಡಬೇಕು. ಆದರೂ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಚರ್ಚಿಸಿ ಸಂಸ್ಥೆಯ ಆರ್ಥಿಕ ಅಭಿವೃದ್ಧಿಗೆ ಸರಿಸಮನಾಗಿ 2007 ಮತ್ತು 2012ರಲ್ಲಿ ಎರಡು ಬಾರಿ ವೇತನ ಪರಿಷ್ಕರಿಸಲಾಗಿದೆ. ಆದರೂ ಹಿರಿಯ ಅಧಿಕಾರಿಗಳ ವೇತನ ಪರಿಷ್ಕರಣೆ ಮಾದರಿಯಲ್ಲೇ ನೌಕರರಿಗೂ ಪರಿಷ್ಕರಿಸುವಂತೆ ಬೇಡಿಕೆ ಈಡೇರಿಸುವಂತೆ ಹೇಳುವುದು ಸರಿಯಲ್ಲ ಎಂದರು.

ಎಚ್‌ಎಎಲ್‌ನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ವಿ.ಎಂ.ಚಮೋಲಾ ಮಾತನಾಡಿ, ಪ್ರಸ್ತುತ ನಗರದ ಎಚ್‌ಎಎಲ್‌ನ ಘಟಕದಲ್ಲಿ 9 ಸಾವಿರ ನೌಕರರು ಇದ್ದಾರೆ. ಆ ಪೈಕಿ ಶೇ.10ರಷ್ಟು ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಉಂಟಾಗಿಲ್ಲ. ಸಂಸ್ಥೆ ಆಡಳಿತ ಮಂಡಳಿ ನೌಕರರ ಹಿತಕಾಯಲು ಬದ್ಧವಾಗಿದೆ. ನೌಕರರ ಸಂಘದೊಂದಿಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಸಿದ್ಧವಿರುವುದಾಗಿ ಅವರ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X