Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಭಯ ಜಿಲ್ಲೆಗಳ ಪಿಕಾರ್ಡ್ ಬ್ಯಾಂಕುಗಳಿಗೆ...

ಉಭಯ ಜಿಲ್ಲೆಗಳ ಪಿಕಾರ್ಡ್ ಬ್ಯಾಂಕುಗಳಿಗೆ 25.33 ಕೋಟಿ ರೂ. ಸಾಲ ಹಂಚಿಕೆ: ಸುದರ್ಶನ ಜೈನ್

ವಾರ್ತಾಭಾರತಿವಾರ್ತಾಭಾರತಿ16 Oct 2019 10:41 PM IST
share
ಉಭಯ ಜಿಲ್ಲೆಗಳ ಪಿಕಾರ್ಡ್ ಬ್ಯಾಂಕುಗಳಿಗೆ 25.33 ಕೋಟಿ ರೂ. ಸಾಲ ಹಂಚಿಕೆ: ಸುದರ್ಶನ ಜೈನ್

ಬಂಟ್ವಾಳ, ಅ. 16: ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಸಾಧನೆ ತೋರಿದ್ದು, 2019ರ ಅರ್ಧ ವರ್ಷಾಂತ್ಯಕ್ಕೆ ಉಭಯ ಜಿಲ್ಲೆಗಳ ಪಿಕಾರ್ಡ್ ಬ್ಯಾಂಕುಗಳಿಗೆ 25.33 ಕೋಟಿ ರೂ ಸಾಲ ಹಂಚಿಕೆ ಮಾಡಿದೆ ಎಂದು ಉಭಯ ಜಿಲ್ಲೆಗಳ ನಿರ್ದೇಶಕ ಸುದರ್ಶನ ಜೈನ್ ಹೇಳಿದ್ದಾರೆ.

ಬಂಟ್ವಾಳದಲ್ಲಿ ಮಂಗಳವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ., ಮಂಗಳೂರು ಶಾಖೆ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ತಾಲೂಕಿನ ರೈತರಿಗೆ ಧೀರ್ಘಾವಧಿ ಸಾಲ ನೀಡುವ ಉದ್ದೇಶದಿಂದ ಕಾರ್ಯ ನಿರ್ವಹಿಸುತ್ತಿದ್ದು, 2018-19ನೇ ಸಾಲಿನಲ್ಲಿ ನಬಾರ್ಡ ಪುನರ್ಧನದಡಿ 13 ಕೋಟಿ ರೂ. ಮತ್ತು ಸ್ವಂತ ಸಂಪನ್ಮೂಲದಡಿ ನಿಶ್ಚಿತ ಠೇವಣಿಯನ್ನು ಸಂಗ್ರಹಿಸಿ ಉಭಯ ಜಿಲ್ಲೆಗಳ ರೈತರುಗಳಿಗೆ ತಲಾ ದ.ಕ ಜಿಲ್ಲೆಗೆ 40 ಕೋಟಿ ರೂ. ಹಾಗೂ ಉಡುಪಿ ಜಿಲ್ಲೆಗೆ 13.94 ಕೋಟಿ ರೂ. ಸಾಲಗಳನ್ನು ಹಂಚಿಕೆ ಮಾಡಲಾಗಿದೆ ಎಂದರು.

2018-19 ನೇ ಸಾಲಿನಲ್ಲಿ ಕಸ್ಕಾರ್ಡ ಬ್ಯಾಂಕ್ ಪ್ರಧಾನ ಕಚೇರಿಯಿಂದ ದ.ಕ ಜಿಲ್ಲೆಯ ಬಂಟ್ವಾಳ ಪಿಕಾರ್ಡ ಬ್ಯಾಂಕು ಶೇ.75.71ರಷ್ಟು ಸಾಲ ವಸೂಲಾತಿ ಮಾಡಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಬೆಳ್ತಂಗಡಿ ಪಿಕಾರ್ಡ ಬ್ಯಾಂಕು ಶೇ.70.91 ರಷ್ಟು ವಸೂಲಾತಿ ಮಾಡಿ ದ್ವಿತೀಯ ಸ್ಥಾನದಲ್ಲಿರುತ್ತದೆ. ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಕಾರ್ಕಳ ಪಿಕಾರ್ಡ ಬ್ಯಾಂಕುಗಳು ಶೇ.81.52 ಮತ್ತು ಶೇ.71.75 ರಷ್ಟು ಸಾಲ ವಸೂಲಾತಿ ಮಾಡಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನದಲ್ಲಿರುವುದಾಗಿ ಅವರು ತಿಳಿಸಿದರು.

ಕೃಷಿ ಮತ್ತು ಕೃಷಿಪೂರಕ ಸಾಲಗಳಿಗೆ ಶೇಕಡಾ 3ರ ರಿಯಾಯಿತಿ ಬಡ್ಡಿ ದರದಲ್ಲಿ ಸಾಲಗಳನ್ನು ನೀಡಲಾಗುತಿದ್ದು, ಒಟ್ಟು ಸಾಲ 33 ಕೋಟಿ ರೂ. ಸಾಲ ವಿತರಿಸಲಾಗಿದ್ದು. ಈ ಯೋಜನೆಗಳಲ್ಲಿ ನಬಾರ್ಡ್ ವತಿಯಿಂದ 78.78 ಲಕ್ಷ ರೂ. ಸಹಾಯಧನ ದೊರೆಯಲಿದೆ ಎಂದರು.

ರಾಜ್ಯ ಬ್ಯಾಂಕಿನ ಮೂಲಕ ಬರ, ಅತಿವೃಷ್ಟಿ ಹಾಗೂ ಅಡಿಕೆ ಕೊಳರೋಗ ಹಾಗೂ ಇನ್ನಿತರ ತೋಟಗಾರಿಕಾ ಬೆಳೆಗಳ ಬೆಲೆ ಕುಸಿತದ ಈಗಿನ ಸಂದರ್ಭದಲ್ಲಿ ಪಿಕಾರ್ಡ್ ಬ್ಯಾಂಕುಗಳ ದೀರ್ಘಾವಧಿ ಸಾಲಗಳ ಕಂತುಗಳ ಅಸಲನ್ನು ಕಟ್ಟಿದ ರೈತರಿಗೆ ಬಡ್ಡಿ ಮನ್ನಾ ಯೋಜನೆ ಮುಂದಿನ ಮಾರ್ಚ್‍ಗೆ ಅಸಲು ಮುಂದೂಡಿಕೆಯೊಂದಿಗೆ ಬಡ್ಡಿ ಮನ್ನಾ ಯೋಜನೆ ಪ್ರಸ್ತಾವನ್ನು ಈಗಾಗಲೇ ಸರಕಾರದ ಗಮನಕ್ಕೆ ತರಲಾಗಿದ್ದು, ರಾಜ್ಯ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದರು.

2019-20 ರ ಸಾಲಿನಲ್ಲಿ 12 ಕೋ.ರೂ. ಸಾಲ ವಿತರಿಸುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಬ್ಯಾಂಕಿನ ಮೇಲ್ಚಾವಣಿಯಲ್ಲಿ ಸೋಲಾರ್ ವ್ಯವಸ್ಥೆಯನ್ನು ಅಳವಡಿಸಿಕೊಂಡು ಬ್ಯಾಂಕನ್ನು ಸಂಪೂರ್ಣ ಹವಾನಿಯಂತ್ರಿತ ಬ್ಯಾಂಕ್ ಆಗಿ ಪರಿವರ್ತಿಸಲಾಗು ವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಸಂಜೀವ ಪೂಜಾರಿ, ನಿರ್ದೇಶಕರಾದ ಚಂದ್ರಪ್ರಕಾಶ್ ಶೆಟ್ಟಿ, ಹೊನ್ನಪ್ಪ ನಾಯ್ಕ, ಮುರಳೀಧರ ಶೆಟ್ಟಿ, ಪರಮೇಶ್ವರ ಎಂ., ಚಂದ್ರಹಾಸ ಕರ್ಕೇರ, ಶಿವಪ್ಪ ಪೂಜಾರಿ, ಚಂದ್ರಶೇಖರ ಶೆಟ್ಟಿ, ರಾಜೇಶ್ ಕುಮಾರ್, ಪುಪ್ಪಾವತಿ, ಸುಜಾತ ರೈ, ವ್ಯವಸ್ಥಾಪಕ ಶೇಖರ ಎಂ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X