Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: 'ಓಯೋ' ವಿರುದ್ಧ ಹೊಟೇಲ್,...

ಮಡಿಕೇರಿ: 'ಓಯೋ' ವಿರುದ್ಧ ಹೊಟೇಲ್, ರೆಸ್ಟೋರೆಂಟ್, ರೆಸಾರ್ಟ್ ಅಸೋಸಿಯೇಷನ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ16 Oct 2019 11:08 PM IST
share
ಮಡಿಕೇರಿ: ಓಯೋ ವಿರುದ್ಧ ಹೊಟೇಲ್, ರೆಸ್ಟೋರೆಂಟ್, ರೆಸಾರ್ಟ್ ಅಸೋಸಿಯೇಷನ್ ಅಸಮಾಧಾನ

ಮಡಿಕೇರಿ, ಅ.16 : ಪ್ರಾಕೃತಿಕ ವಿಕೋಪದಿಂದ ನಷ್ಟಕ್ಕೊಳಗಾಗಿರುವ ಕೊಡಗಿನ ಪ್ರವಾಸೋದ್ಯಮ ಕ್ಷೇತ್ರವನ್ನು ಬಂಡವಾಳವನ್ನಾಗಿ ಮಾಡಿಕೊಂಡಿರುವ 'ಓಯೋ' ಸಂಸ್ಥೆ ಆನ್‍ಲೈನ್ ಮಾಫಿಯಾದ ಮೂಲಕ ಜಿಲ್ಲೆಯ ಹೊಟೇಲ್, ರೆಸ್ಟೋರೆಂಟ್ ಮತ್ತು ಹೋಂಸ್ಟೇ ವ್ಯವಹಾರಕ್ಕೆ ಹೊಡೆತ ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಹೊಟೇಲ್, ರೆಸ್ಟೋರೆಂಟ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಗಂಭೀರ ಆರೋಪ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ವಿ.ಆರ್.ನಾಗೇಂದ್ರ ಪ್ರಸಾದ್, ಓಯೋ ಸಂಸ್ಥೆ ಜಿಲ್ಲೆಯಲ್ಲಿ ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಹೋಂ ಸ್ಟೇಗಳನ್ನು ತನ್ನ ಹಿಡಿತಕ್ಕೆ ಪಡೆದುಕೊಳ್ಳುವ ಪ್ರಯತ್ನದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಪ್ರವಾಸಿಗರು ತಂಗುವುದಕ್ಕಾಗಿ 4 ಸಾವಿರಕ್ಕೂ ಅಧಿಕ ಹೋಂಸ್ಟೇಗಳು, 250 ಹೋಟೆಲ್, ರೆಸ್ಟೋರೆಂಟ್‍ಗಳು ಸೇರಿದಂತೆ ಸುಮಾರು 30 ಸಾವಿರ ಕೋಣೆಗಳಿವೆ. ಆದರೆ, ಓಯೋ ಸಂಸ್ಥೆಯ ಪ್ರವೇಶದಿಂದಾಗಿ ಈ ಕ್ಷೇತ್ರ ನಷ್ಟದ ಹಾದಿಯಲ್ಲಿ ಸಾಗುತ್ತಿದೆ. ಇದರಿಂದ ಮಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2010ರಿಂದ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಉತ್ತುಂಗದಲ್ಲಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪ ಸತತವಾಗಿ ಕಾಡಿದ ಪರಿಣಾಮ ವ್ಯಾಪಾರ ದುರ್ಬಲ ಹಾದಿಯನ್ನು ಹಿಡಿಯಿತು. ಇದನ್ನೇ ಬಂಡವಾಳ ಮಾಡಿಕೊಂಡಿರುವ ಓಯೋ ಸಂಸ್ಥೆ ಮಾಲಕರಿಗೆ ಆಮಿಷ ಒಡ್ಡಿ ರೂಂಗಳನ್ನು ನಿಯಮ ಬಾಹಿರ ಒಡಂಬಡಿಕೆ ಮೂಲಕ ತಮ್ಮ ವಶಕ್ಕೆ ಪಡೆಯಲು ಆರಂಭಿಸಿತು. ನೋಂದಣಿಯಾಗದ ಹೋಂ ಸ್ಟೇಗಳೆ ಈ ಸಂಸ್ಥೆಗೆ ಟಾರ್ಗೆಟ್ ಆಗಿದೆ, ಅಲ್ಲದೆ, ಹೋಟೆಲ್, ರೆಸ್ಟೋರೆಂಟ್ ಮತ್ತು ಹೋಂಸ್ಟೇ ಮಾಲಕರ ನಡುವಿನ ಒಗ್ಗಟ್ಟನ್ನು ಒಡೆಯುವ ಪ್ರಯತ್ನವೂ ನಡೆಯುತ್ತಿದೆ. ಈ ಸಂಸ್ಥೆ ರಾಜ್ಯ ವ್ಯಾಪಿ ಕಾರ್ಯಾಚರಿಸುತ್ತಿದ್ದು, ಸುಮಾರು 3 ಲಕ್ಷ ಕೊಠಡಿಗಳು ಓಯೋ ಸಂಸ್ಥೆಯ ಹಿಡಿತದಲ್ಲಿದೆ. ಕೊಡಗಿನಲ್ಲಿ ಒಡಂಬಡಿಕೆ ಮಾಡಿಕೊಂಡ ಹೋಂ ಸ್ಟೇ, ಹೋಟೆಲ್ ರೆಸ್ಟೋರೆಂಟ್ ಹಾಗೂ ಮನೆಗಳಿಗೆ ಆರಂಭದಲ್ಲಿ ಉತ್ತಮ ಬಾಡಿಗೆ ನೀಡಿ, ನಂತರದ ದಿನಗಳಲ್ಲಿ ಗುಣಮಟ್ಟದ ನೆಪ ಹೇಳಿ ಇನ್ನೂರು, ಮುನ್ನೂರು ರೂ.ಗಳನ್ನಷ್ಟೆ ಮಾಲಕರಿಗೆ ನೀಡುತ್ತಿದ್ದಾರೆ. ಆದರೆ, ಪ್ರವಾಸಿಗರಿಂದ 2 ಸಾವಿರಕ್ಕೂ ಅಧಿಕ ಮೊತ್ತವನ್ನು ವಸೂಲಿ ಮಾಡುತ್ತಿದ್ದಾರೆ ಎಂದು ನಾಗೇಂದ್ರ ಪ್ರಸಾದ್ ಆರೋಪಿಸಿದರು.

ಓಯೋ ಸಂಸ್ಥೆಯ ಈ ರೀತಿಯ ವ್ಯವಹಾರಕ್ಕೆ ಕಡಿವಾಣ ಹಾಕುವ ಸಲುವಾಗಿ ಅಕ್ಟೋಬರ್ 18 ರಂದು ಬೆಂಗಳೂರಿನ ಎಫ್‍ಕೆಸಿಸಿಐ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಹೋಟೆಲ್ ಆಸೋಸಿಯೇಷನ್ ಪದಾಧಿಕಾರಿಗಳು, ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ಕನಾಟಕ ರಾಜ್ಯ ಹೋಟೆಲ್ ಅಸೋಸಿಯೇಷನ್ ಪದಾಧಿಕಾರಿಗಳ ಸಭೆಯನ್ನು ನಡೆಸಲು ನಿರ್ಧರಿಸಲಾಗಿದೆಯೆಂದು ಅವರು ಹೇಳಿದರು. ಈಗಾಗಲೆ ಓಯೋ ಸಂಸ್ಥೆಯ ಚಟುವಟಿಕೆ ಬಗ್ಗೆ ಸಿಸಿಬಿ ಗಮನ ಸೆಳೆಯಲಾಗಿದೆ ಎಂದು ಅವರು ಇದೇ ಸಂದರ್ಭ ತಿಳಿಸಿದರು.

ಬಿಹಾರ್, ಮಹಾರಾಷ್ಟ್ರ, ಜೋದ್‍ಪುರ್ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಓಯೋ ಸಂಸ್ಥೆಯ ವ್ಯವಹಾರವನ್ನು ನಿರ್ಬಂಧಿಸಲಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದಿಂದಲೂ ಓಯೋ ಸಂಸ್ಥೆಯನ್ನು ಹೊರ ಹಾಕಬೇಕೆಂದು ಆಂದೋಲನ ನಡೆಸುವುದಾಗಿ ನಾಗೇಂದ್ರ ಪ್ರಸಾದ್ ತಿಳಿಸಿದರು.
ಓಯೋ ಸಂಸ್ಥೆಯ ವಿರುದ್ಧ ತೆಗೆದುಕೊಳ್ಳಬೇಕಾದ ಕಠಿಣ ಕ್ರಮದ ಕುರಿತು ಮುಂದಿನ 15 ದಿನಗಳಲ್ಲಿ ನಿರ್ಧಾರ ಕೈಗೊಳ್ಳಲು ಅಸೋಸಿಯೇಷನ್ ಚಿಂತಿಸಿದ್ದು, ಪ್ರಕರಣ ದಾಖಲಿಸಲು ಕೂಡ ಹಿಂಜರಿಯುವುದಿಲ್ಲವೆಂದರು.

ಅಸೋಸಿಯೇಷನ್ ಸಲಹೆಗಾರ ಜಿ. ಚಿದ್ವಿಲಾಸ್ ಮಾತನಾಡಿ, ಓಯೋ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡವರಲ್ಲಿ ಅನೇಕರು ವಂಚನೆಗೆ ಒಳಗಾಗಿದ್ದು, ನಿಗದಿ ಪಡಿಸಲಾದ ಬಾಡಿಗೆ ಹಣವನ್ನು ನೀಡಿಲ್ಲವೆಂದು ಆರೋಪಿಸಿದರು. ಹೋಟೆಲ್, ರೆಸ್ಟೋರೆಂಟ್ ಮತ್ತು ಹೋಂ ಸ್ಟೇಗಳನ್ನು ಪಡೆಯಲು ಕರಾರು ಮಾಡುವುದಕ್ಕಾಗಿ ನಿಯೋಜನೆಗೊಳ್ಳುವ ಏಜೆಂಟರುಗಳಿಗೆ ತಲಾ 30 ಸಾವಿರ ರೂ.ಗಳನ್ನು ಕಮಿಷನ್ ರೂಪದಲ್ಲಿ ನೀಡುವ ಓಯೋ ಸಂಸ್ಥೆ ನೈಜ ರೀತಿಯಲ್ಲಿ ವ್ಯವಹಾರ ನಡೆಸುತ್ತಿದೆಯೇ ಎನ್ನುವ ಬಗ್ಗೆ ಸಂಶಯ ಮೂಡುತ್ತಿದೆ ಎಂದರು.

ಅ.15 ರಂದು ಮಡಿಕೇರಿಯಲ್ಲಿ ಹೋಟೆಲ್ ರೆಸ್ಟೋರೆಂಟ್ ಮಾಲಕರು ಮತ್ತು ಹೋಂಸ್ಟೇ ಮಾಲಕರೊಂದಿಗೆ ಸಭೆ ನಡೆಸಿದಾಗ ಓಯೋ ಸಂಸ್ಥೆಯಿಂದ ವಂಚನೆಗೆ ಒಳಗಾದ ಮಾಲಕರು ಅಳಲು ತೋಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಸುಮಾರು 35 ಲಕ್ಷ ರೂ.ಗಳು ಓಯೋ ಸಂಸ್ಥೆಯಿಂದ ಮಾಲಕರಿಗೆ ಸಂದಾಯವಾಗಬೇಕಾಗಿದೆ. ಇದನ್ನು ಮನಗಂಡು ಮೂರು ತಾಲೂಕುಗಳಲ್ಲಿ ಸಮಿತಿಗಳನ್ನು ರಚಿಸಿ ಹೋಟೆಲ್, ರೆಸ್ಟೋರೆಂಟ್ ಮತ್ತು ಹೋಂ ಸ್ಟೇಗಳಿಗೆ ಭೇಟಿ ನೀಡಿ ಓಯೋ ಒಡಂಬಡಿಕೆ ಹಾಗೂ ವಂಚನೆಗೆ ಒಳಗಾದ ಹಣದ ಮೊತ್ತದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಓಯೋ ಸಂಸ್ಥೆಯಿಂದ ಜಿಲ್ಲೆಯಲ್ಲಿ 2 ರಿಂದ 3 ಕೋಟಿ ರೂ.ಗಳು ನಷ್ಟವಾಗಿದೆಯೆಂದು ಅಂದಾಜಿಸಲಾಗಿದೆ. 

ಸುಮಾರು ಎರಡು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ, ಓಯೋ ಸಂಸ್ಥೆಯ ನಿಯಮ ಬಾಹಿರ ಚಟುವಟಿಕೆ ಬಗ್ಗೆ ಗಮನ ಸೆಳೆಯಲಾಗಿತ್ತು. ಈ ಸಂಸ್ಥೆಯ ಆಂತರಿಕ ಚಟುವಟಿಕೆ ಬಗ್ಗೆ ಸಂಶಯವಿದ್ದು, ಭದ್ರತೆಯ ಆತಂಕವಿದೆ. ಆದ್ದರಿಂದ ಜಿಲ್ಲೆಯ ಯಾವುದೇ ಕಟ್ಟಡ ಮಾಲಕರು ಓಯೋ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಬಾರದೆಂದು ಚಿದ್ವಿಲಾಸ್ ಮನವಿ ಮಾಡಿದರು.

ಪ್ರವಾಸಿಗರಿಂದ 2 ಸಾವಿರ ರೂ.ಗಳಿಗೂ ಅಧಿಕ ಹಣ ಬಾಡಿಗೆ ಪಡೆಯುವ ಓಯೋ ಸಂಸ್ಥೆ ಕಟ್ಟಡ ಮಾಲೀಕರುಗಳಿಗೆ ಕೇವಲ 298 ರೂ. ನೀಡಿದ ಉದಾಹರಣೆಯೂ ಇದೆ. ಕೊಡಗಿನಿಂದ ಓಯೋ ಸಂಸ್ಥೆಯನ್ನು ತೊಲಗಿಸುವವರೆಗೂ ಹೋರಾಟ ನಡೆಯಲಿದೆ ಎಂದು ಅವರು ಸ್ಪಷ್ಟ ಪಡಿಸಿದರು. 
ಹೋಂ ಸ್ಟೇ ಅಸೋಸಿಯೇಷನ್‍ನ ನಿರ್ದೇಶಕ ಅಂಬೆಕಲ್ ನವೀನ್ ಕುಶಾಲಪ್ಪ ಮಾತನಾಡಿ, ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಓಯೋ ಸಂಸ್ಥೆಯ ವಿರುದ್ಧದ ಹೋರಾಟಕ್ಕೆ ನಮ್ಮ ಸಂಘಟನೆ ಬೆಂಬಲ ನೀಡಲಿದೆ ಎಂದರು.

ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷ ಬಿ.ಎನ್.ಪ್ರಕಾಶ್ ಮಾತನಾಡಿ, ಚೇಂಬರ್ ಆಫ್ ಕಾಮರ್ಸ್ ಸದಾ ವರ್ತಕರ ಪರವಾಗಿ ನಿಲ್ಲಲಿದ್ದು, ಓಯೋ ಸಂಸ್ಥೆಯನ್ನು ರಾಜ್ಯದಿಂದ ಹೊರ ಹಾಕುವಂತೆ ಒತ್ತಾಯಿಸಿದರು.

ಹೋಟೆಲ್ ಅಸೋಸಿಯೇಷನ್‍ನ ಪ್ರಧಾನ ಕಾರ್ಯದರ್ಶಿ ನಾಸಿರ್ ಹಾಗೂ ಉಪಾಧ್ಯಕ್ಷ ಜಾಹಿರ್ ಅಹ್ಮದ್ ಓಯೋ ಸಂಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X