ನನ್ನ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ಮಹಾರಾಷ್ಟ್ರಕ್ಕೆ ಕರ್ನಾಟಕ ರಾಜ್ಯದಿಂದ ನೀರು

ಕಲಬುರ್ಗಿ, ಅ. 17: ‘ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಕರ್ನಾಟಕದಿಂದ ನೀರು ಹರಿಸಲಾಗುವುದು’ ಎಂಬ ತನ್ನ ಹೇಳಿಕೆಗೆ ವಿಶೇಷ ಅರ್ಥಕಲ್ಪಿಸುವ ಅಗತ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ಮತ್ತು ಭೀಮಾ ನದಿಗೆ ಮಹಾರಾಷ್ಟ್ರದಿಂದ ನಾಲ್ಕು ಟಿಎಂಸಿ ನೀರನ್ನು ಬಿಡುವಂತೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಅದರ ಬದಲಾಗಿ ನಮ್ಮಲ್ಲಿನ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದು ಎಂದು ಹೇಳಿದ್ದೇನೆ.
ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ನನ್ನ ಜೀವನದಲ್ಲಿ ಚುನಾವಣೆ ಗಿಮಿಕ್ ಮಾಡಿಲ್ಲ. ಮಹಾರಾಷ್ಟ್ರ ಮತ್ತು ಕರ್ನಾಟಕ ದಾಯಾದಿಗಳಲ್ಲ. ಉಭಯ ರಾಜ್ಯಗಳು ಒಟ್ಟಾಗಿ ಕುಳಿತು ಸಮಸ್ಯೆಗಳನ್ನು ಚರ್ಚೆ ಮೂಲಕ ಬಗೆಹರಿಸಿಕೊಳ್ಳುವ ಬಗ್ಗೆ ಹೇಳಿದ್ದೇನೆ ಎಂದು ತಿಳಿಸಿದರು.
Next Story