ಫಾರೂಕ್ ಅಬ್ದುಲ್ಲಾರ ಸಹೋದರಿ, ಪುತ್ರಿಗೆ ಜಾಮೀನು
ಶ್ರೀನಗರ, ಅ.17: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ಶ್ರೀನಗರದಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಬಂಧಿಸಲ್ಪಟ್ಟಿದ್ದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾರ ಸಹೋದರಿ ಸುರೈಯಾ ಮತ್ತು ಪುತ್ರಿ ಸಫಿಯಾರನ್ನು ಬುಧವಾರ ರಾತ್ರಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸಿರುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ಸುರೈಯಾ ಹಾಗೂ ಸಫಿಯಾರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸಹಿತ ಹಲವು ಪ್ರಮುಖ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.
Next Story